ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿ ಹಾಕಿ, ಕೂದಲು ಕತ್ತರಿಸಿದ ದುರುಳರು
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯಗಳು ಆಘಾತಕಾರಿಯಾಗಿ ಹೆಚ್ಚುತ್ತಿವೆ. ಕಳೆದ 18 ದಿನಗಳಲ್ಲಿ 6 ಹಿಂದೂಗಳನ್ನು ಹತ್ಯೆ ಮಾಡಲಾಗಿದ್ದು, ಜೆನೈದಾದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೂದಲು ಕತ್ತರಿಸಿ ಅಮಾನವೀಯ ಹಲ್ಲೆ ನಡೆಸಲಾಗಿದೆ. ಈ ಘಟನೆಗಳು ಹಿಂದೂ ಸಮುದಾಯದ ಭದ್ರತೆಯ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿವೆ.

ಢಾಕಾ, ಜನವರಿ 06: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಕಳೆದ 18 ದಿನಗಳಲ್ಲಿ ಆರು ಹಿಂದೂ(Hindu)ಗಳನ್ನು ಹತ್ಯೆ ಮಾಡಲಾಗಿದೆ. ಜೆನೈದಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ, ಅಷ್ಟೇ ಅಲ್ಲದೆ ಆಕೆಯನ್ನು ಮರಕ್ಕೆ ಕಟ್ಟಿ ಕೂದಲು ಕತ್ತರಿಸಿ ಹಲ್ಲೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಬ್ಬರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ, ಮರಕ್ಕೆ ಕಟ್ಟಿ. ಬಲವಂತವಾಗಿ ಆಕೆಯ ಕೂದಲುಗಳನ್ನು ಕತ್ತರಿಸಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆಯನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿದ್ದಾರೆ. ನಂತರ ಆ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದರು. ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಮಹಿಳೆ ಸುಮಾರು ಎರಡೂವರೆ ವರ್ಷಗಳ ಹಿಂದೆ ಕಾಲಿಗಂಜ್ ಪುರಸಭೆಯ ವಾರ್ಡ್ ಸಂಖ್ಯೆ 7 ರಲ್ಲಿ ಶಾಹಿನ್ ಎಂಬ ವ್ಯಕ್ತಿ ಮತ್ತು ಅವನ ಸಹೋದರನಿಂದ ಭೂಮಿ ಮತ್ತು ಎರಡು ಅಂತಸ್ತಿನ ಮನೆಯನ್ನು ಖರೀದಿಸಿದ್ದಾಗಿ ಹೇಳಿದ್ದಾರೆ. ಖರೀದಿಯ ನಂತರ, ಶಾಹಿನ್ ಆಕೆಗೆ ಕಿರುಕುಳ ನೀಡಲು ಮತ್ತು ಅಸಭ್ಯವಾಗಿ ವರ್ತಿಸಲು ಪ್ರಾರಂಭಿಸಿದ್ದ. ಆದರೆ ಆಕೆ ಪದೇ ಪದೇ ನಿರಾಕರಿಸಿದರೂ ಆತ ಕಿರುಕುಳ ನೀಡುತ್ತಲೇ ಇದ್ದ.
ಮತ್ತಷ್ಟು ಓದಿ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಹತ್ಯೆ; 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ
ಶನಿವಾರ ಸಂಜೆ, ಆಕೆಯ ಗ್ರಾಮದ ಇಬ್ಬರು ಸಂಬಂಧಿಕರು ಭೇಟಿ ನೀಡಿದ್ದಾಗ, ಶಾಹಿನ್ ಮತ್ತು ಆತನ ಸಹಚರ ಹಸನ್ ಮನೆಗೆ ಬಲವಂತವಾಗಿ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಪುರುಷರು ಮಹಿಳೆಯಿಂದ 50,000 ಟಾಕಾಗೆ ಬೇಡಿಕೆ ಇಟ್ಟಿದ್ದರು, ಆಕೆ ನಿರಾಕರಿಸಿದಾಗ, ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಗೆ ಹಾಕಿದ್ದಾರೆ ಎಂದು ವರದಿಯಾಗಿದೆ.
ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಎಂ. ಮೊಸ್ತಫಿಜುರ್ ರೆಹಮಾನ್ ಮಾತನಾಡಿ, ಮಹಿಳೆ ಆರಂಭದಲ್ಲಿ ಹಲ್ಲೆಯ ಬಗ್ಗೆ ಹೇಳಿರಲಿಲ್ಲ, ವೈದ್ಯಕೀಯ ಪರೀಕ್ಷೆಯ ನಂತರ, ಆಕೆ ಮೇಲೆ ದೌರ್ಜನ್ಯ ನಡೆದಿದೆ ಎಂದು ನಮಗೆ ತಿಳಿದುಬಂದಿದೆ” ಎಂದು ಅವರು ಹೇಳಿದರು.
ಪ್ರಜ್ಞೆ ಮರಳಿದ ನಂತರ, ಮಹಿಳೆ ಕಾಲಿಗಂಜ್ ಪೊಲೀಸ್ ಠಾಣೆಯಲ್ಲಿ ಶಾಹಿನ್ ಮತ್ತು ಹಸನ್ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ನಡುವೆಯೇ ಈ ಅಪರಾಧ ನಡೆದಿದೆ. ಶರಿಯತ್‌ಪುರ ಜಿಲ್ಲೆಯಲ್ಲಿ ಗುಂಪೊಂದು ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸಾವನ್ನಪ್ಪಿದ ದಿನವೇ ಆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು.
ಮತ್ತೊಂದು ಘಟನೆಯಲ್ಲಿ, ಡಿಸೆಂಬರ್ 24 ರಂದು ಕಲಿಮೋಹರ್ ಯೂನಿಯನ್‌ನಲ್ಲಿ ಹಿಂದೂ ಯುವಕ ಅಮೃತ್ ಮಂಡಲ್ ಅವರನ್ನು ಗುಂಪೊಂದು ಹತ್ಯೆ ಮಾಡಿತ್ತು. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಹತ್ಯೆಯನ್ನು ಖಂಡಿಸಿತು ಆದರೆ ವಿವಾದಾತ್ಮಕವಾಗಿ ಮಂಡಲ್ ಒಬ್ಬ ಸುಲಿಗೆಕೋರ ಎಂದು ಹೇಳಿಕೊಂಡಿತ್ತು.
ಇದಕ್ಕೂ ಮೊದಲು, ಡಿಸೆಂಬರ್ 18 ರಂದು, 25 ವರ್ಷದ ದೀಪು ಚಂದ್ರ ದಾಸ್ ಅವರನ್ನು ಸುಳ್ಳು ಆರೋಪದ ಮೇಲೆ ಗುಂಪೊಂದು ಹೊಡೆದು ಕೊಂದಿತ್ತು. ಅವರ ದೇಹವನ್ನು ಮರಕ್ಕೆ ನೇತುಹಾಕಿ ಬೆಂಕಿ ಹಚ್ಚಲಾಗಿತ್ತು ಎಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
