AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕ್ಷಮೆಯಾಚಿಸಿ; ಟ್ರಂಪ್ ಸುಂಕ ನೀತಿಗೆ ಅಮೆರಿಕದ ತಜ್ಞರಿಂದಲೇ ಟೀಕೆ

ರಷ್ಯಾದಿಂದ ತೈಲ ಖರೀದಿಸುತ್ತಿದೆ ಎಂಬ ಕಾರಣ ನೀಡಿ ಅಮೆರಿಕ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ವಿಧಿಸುವ ಮೂಲಕ ಒಟ್ಟು ಸುಂಕವನ್ನು ಶೇ. 50ಕ್ಕೆ ಏರಿಸಿದೆ. ಆದರೆ, ಇದಕ್ಕೆ ಅಮೆರಿಕದ ತಜ್ಞರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಚೀನಾದ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯ ರಾಜತಾಂತ್ರಿಕ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅಮೆರಿಕ ಆರ್ಥಿಕ ತಜ್ಞರೊಬ್ಬರು ಡೊನಾಲ್ಡ್ ಟ್ರಂಪ್ ಭಾರತದ ಕ್ಷಮೆ ಯಾಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತದ ಕ್ಷಮೆಯಾಚಿಸಿ; ಟ್ರಂಪ್ ಸುಂಕ ನೀತಿಗೆ ಅಮೆರಿಕದ ತಜ್ಞರಿಂದಲೇ ಟೀಕೆ
Trump
ಸುಷ್ಮಾ ಚಕ್ರೆ
|

Updated on: Sep 03, 2025 | 8:57 PM

Share

ವಾಷಿಂಗ್ಟನ್, ಸೆಪ್ಟೆಂಬರ್ 3: ಭಾರತದ ಮೇಲೆ ಅಮೆರಿಕ ಹೆಚ್ಚುವರಿ ಸುಂಕ ವಿಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚೀನಾದ ಶೃಂಗಸಭೆಯಲ್ಲಿ ಚೀನಾ ಮತ್ತು ರಷ್ಯಾದ ಅಧ್ಯಕ್ಷರ ಜೊತೆ ಬಹಳ ಆಪ್ತವಾಗಿ ಕಾಣಿಸಿಕೊಂಡು ಅಮೆರಿಕಕ್ಕೆ ಬಿಸಿ ಮುಟ್ಟಿಸಿದ್ದರು. ಈ ನಡುವೆ ಅಮೆರಿಕದ ತಜ್ಞರೊಬ್ಬರು ಟ್ರಂಪ್ ನಿರ್ಧಾರವನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಭಾರತದ ಮೇಲಿನ ಹೆಚ್ಚಿನ ಸುಂಕಗಳನ್ನು ಹಿಂದಕ್ಕೆ ಪಡೆಯಬೇಕು, ಆ ಸುಂಕವನ್ನು ಶೂನ್ಯಕ್ಕೆ ಇಳಿಸಬೇಕು ಮತ್ತು ಭಾರತದ ಕ್ಷಮೆ ಯಾಚಿಸಬೇಕು ಎಂದು ಅಮೆರಿಕದ ಪ್ರಮುಖ ತಜ್ಞರೊಬ್ಬರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಒತ್ತಾಯಿಸಿದ್ದಾರೆ.

ಹಾಗೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ, ರಷ್ಯಾ ಮತ್ತು ಚೀನಾದ ಜೊತೆಗಿನ ಸಂಬಂಧಗಳನ್ನು ನಿರ್ವಹಿಸುವಲ್ಲಿ ಬಹಳ ಉತ್ತಮ ರಾಜತಾಂತ್ರಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಬಣ್ಣಿಸಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಡ್ವರ್ಡ್ ಪ್ರೈಸ್ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದು, ಭಾರತವು 21ನೇ ಶತಮಾನವನ್ನು ರೂಪಿಸುವಲ್ಲಿ “ನಿರ್ಣಾಯಕ” ಪಾತ್ರ ಹೊಂದಿದೆ. ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಯು ವಾಷಿಂಗ್ಟನ್‌ನ ಅತ್ಯಂತ ಪ್ರಮುಖ ಪಾಲುದಾರಿಕೆಯನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಚೀನಾ, ರಷ್ಯಾದ ಅಧ್ಯಕ್ಷರಿಗೆ ಹಸ್ತಲಾಘವ, ಅಪ್ಪುಗೆ, ತಮಾಷೆ; ಟ್ರಂಪ್ ನಿದ್ರೆಗೆಡಿಸಿದ ಮೋದಿಯ ವಿಡಿಯೋ ಇಲ್ಲಿದೆ

“ಭಾರತ ಮತ್ತು ಅಮೆರಿಕದ ನಡುವಿನ ಪಾಲುದಾರಿಕೆಯನ್ನು 21ನೇ ಶತಮಾನದ ಅತ್ಯಂತ ನಿರ್ಣಾಯಕ ಪಾಲುದಾರಿಕೆ ಎಂದು ನಾನು ಪರಿಗಣಿಸುತ್ತೇನೆ. ಈ ಪಾಲುದಾರಿಕೆಯು ಚೀನಾ ಮತ್ತು ರಷ್ಯಾ ನಡುವೆ ಏನಾಗುತ್ತದೆ ಎಂಬುದನ್ನು ನಿರ್ಧರಿಸುತ್ತದೆ. 21ನೇ ಶತಮಾನದಲ್ಲಿ ಭಾರತವು ನಿರ್ಣಾಯಕ ಪಾತ್ರವನ್ನು ಹೊಂದಿದೆ. ಚೀನಾದೊಂದಿಗೆ ಮುಖಾಮುಖಿಯಾಗಿ ಮತ್ತು ರಷ್ಯಾದೊಂದಿಗಿನ ಯುದ್ಧದಲ್ಲಿ ಅಮೆರಿಕದ ಅಧ್ಯಕ್ಷ ಟ್ರಂಪ್ ಭಾರತದ ಮೇಲೆ ಶೇ. 50ರಷ್ಟು ಸುಂಕಗಳನ್ನು ಏಕೆ ವಿಧಿಸುತ್ತಾರೆ ಎಂಬುದನ್ನು ನನಗೆ ಅರ್ಥವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

“ನಾವು ಭಾರತದ ಮೇಲಿನ 50% ಸುಂಕವನ್ನು ತೆಗೆದುಹಾಕಬೇಕು. ನಾನು ಭಾರತದ ಮೇಲೆ ಸುಂಕವನ್ನು ಶೂನ್ಯಕ್ಕೆ ಇಳಿಸಬೇಕೆಂದು ಸೂಚಿಸುತ್ತೇನೆ ಮತ್ತು ಕ್ಷಮೆಯಾಚಿಸಬೇಕೆಂದು ಕೋರುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆಗೆ ಜಗ್ಗದ ಮೋದಿ, ಚೀನಾದಲ್ಲಿ ಷಿ ಜಿನ್​​ಪಿಂಗ್, ಪುಟಿನ್ ಜತೆ ಮಾತುಕತೆ

“ಪ್ರಧಾನಿ ಮೋದಿ ಸಾಕಷ್ಟು ಬುದ್ಧಿವಂತರಾಗಿದ್ದಾರೆ. ಅವರಿಗೆ ಅಮೆರಿಕದ ಹೊರತು ಆಯ್ಕೆಗಳಿವೆ, ಆದರೆ ಅವರು ಚೀನಾ ಮತ್ತು ರಷ್ಯಾವನ್ನು ಸಂಪೂರ್ಣವಾಗಿ ಸ್ವೀಕರಿಸಿಲ್ಲ. ಉದಾಹರಣೆಗೆ, ಅವರು ಮಿಲಿಟರಿ ಮೆರವಣಿಗೆಯಲ್ಲಿ ಭಾಗವಹಿಸುತ್ತಿಲ್ಲ” ಎಂದು ಎಡ್ವರ್ಡ್ ಪ್ರೈಸ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?