ಅಫ್ಘಾನಿಸ್ತಾನದ ವಿವಿಧ ಸ್ಥಳಗಳಿಂದ 500ಕ್ಕೂ ಹೆಚ್ಚು ಮಂದಿ ಸ್ಥಳಾಂತರ; ಭಾರತಕ್ಕೆ ಏರ್‌ಲಿಫ್ಟ್
Afghanistan: ಆಫ್ಘನ್‌ನ ಕಾಬೂಲ್‌ನಲ್ಲಿ ಸಿಲುಕಿದ್ದ 87 ಭಾರತೀಯರ ರಕ್ಷಣೆ ಮಾಡಲಾಗಿರುವ ಬಗ್ಗೆಯೂ ತಿಳಿದುಬಂದಿದೆ. 87 ಭಾರತೀಯರನ್ನು ರಕ್ಷಿಸಿ ತಜಕಿಸ್ತಾನದಿಂದ ಏರ್‌ಲಿಫ್ಟ್ ಮಾಡಲಾಗಿದೆ.
ದೆಹಲಿ: ಆಫ್ಘನ್‌ನಿಂದ ಮೊದಲ ಬ್ಯಾಚ್‌ನಲ್ಲಿ 135 ಜನ ಸ್ಥಳಾಂತರ ಮಾಡಲಾಗುವುದು. ದೋಹಾ ಮೂಲಕ ಒಟ್ಟು 135 ಭಾರತೀಯರ ಸ್ಥಳಾಂತರ ಮಾಡಲಾಗುತ್ತದೆ ಎಂದು ಕತಾರ್‌ನಲ್ಲಿರುವ ಭಾರತದ ದೂತಾವಾಸದಿಂದ ಮಾಹಿತಿ ಲಭ್ಯವಾಗಿದೆ. ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಹಿನ್ನೆಲೆಯಲ್ಲಿ ಅಲ್ಲಿನ ಜನರು ಹಾಗೂ ಅಫ್ಘಾನ್ನಲ್ಲಿ ನೆಲೆಸಿರುವ ವಿವಿಧ ದೇಶಗಳ ಪ್ರಜೆಗಳು ಅಭದ್ರತೆ, ಆತಂಕದಿಂದ ಇದ್ದಾರೆ. ಹೀಗಾಗಿ, ಹಲವು ದೇಶಗಳು ತಮ್ಮ ನಾಗರಿಕರನ್ನು ಸ್ವದೇಶಕ್ಕೆ ಮರಳಿ ಕರೆತರುವ ಪ್ರಯತ್ನದಲ್ಲಿ ಇದೆ. ಇದೀಗ ಆಫ್ಘನ್‌ನಿಂದ ಮೊದಲ ಬ್ಯಾಚ್‌ನಲ್ಲಿ 135 ಜನರನ್ನು ಸ್ಥಳಾಂತರ ಮಾಡಲಾಗುವುದು ಎಂದು ಮಾಹಿತಿ ತಿಳಿದುಬಂದಿದೆ.
ಆಫ್ಘನ್‌ನಿಂದ ಇಂದು 500ಕ್ಕೂ ಹೆಚ್ಚು ಜನರ ಸ್ಥಳಾಂತರ ಮಾಡಲಾಗುವುದು. ಅಫ್ಘಾನಿಸ್ತಾನದ ವಿವಿಧ ಸ್ಥಳಗಳಿಂದ ಭಾರತಕ್ಕೆ ಏರ್‌ಲಿಫ್ಟ್ ಮಾಡಲಾಗುವುದು ಎಂಬ ಬಗ್ಗೆಯೂ ತಿಳಿದುಬಂದಿದೆ. ಅಫ್ಘಾನಿಸ್ತಾನದ ವಿವಿಧ ಕಡೆಗಳಿಂದ ಸುಮಾರು 500ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗುವ ಬಗ್ಗೆ ಮಾಹಿತಿ ಲಭಿಸಿದೆ.
ಆಫ್ಘನ್‌ನ ಕಾಬೂಲ್‌ನಲ್ಲಿ ಸಿಲುಕಿದ್ದ 87 ಭಾರತೀಯರ ರಕ್ಷಣೆ ಮಾಡಲಾಗಿರುವ ಬಗ್ಗೆಯೂ ತಿಳಿದುಬಂದಿದೆ. 87 ಭಾರತೀಯರನ್ನು ರಕ್ಷಿಸಿ ತಜಕಿಸ್ತಾನದಿಂದ ಏರ್‌ಲಿಫ್ಟ್ ಮಾಡಲಾಗಿದೆ. ತಜಕಿಸ್ತಾನದಿಂದ ದೆಹಲಿಗೆ 87 ಭಾರತೀಯರ ಏರ್‌ಲಿಫ್ಟ್ ಮಾಡಲಾಗುತ್ತದೆ. ಭಾರತೀಯರ ಜತೆ ಇಬ್ಬರು ನೇಪಾಳಿಗರು ಕೂಡ ಸ್ಥಳಾಂತರ ಎಂದು ತಿಳಿದುಬಂದಿದೆ. ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆ ಮಾಡುವುದಾಗಿ ಭಾರತೀಯ ವಿದೇಶಾಂಗ ವ್ಯವಹಾರಗಳ ಇಲಾಖೆ ಭರವಸೆ ನೀಡಿದೆ.
ಭಾರತೀಯರ ರಕ್ಷಣೆಗೆ ವಾಯುಪಡೆಯ C-17 ಗ್ಲೋಬ್ ಮಾಸ್ಟರ್, C-130J ವಿಮಾನ ಸನ್ನದ್ಧವಾಗಿದೆ. ಭಾರತದ 2 ವಿಮಾನಗಳ ಹಾರಾಟಕ್ಕೆ ಅಮೆರಿಕ ಒಪ್ಪಿಗೆ ನೀಡಿದೆ. ಸದ್ಯ, ಅಮೆರಿಕದ ನಿಯಂತ್ರಣದಲ್ಲಿ ಕಾಬೂಲ್ ಏರ್‌ಪೋರ್ಟ್ ಇದೆ. 107 ಭಾರತೀಯರು ಸೇರಿದಂತೆ 168 ಜನರ ಏರ್‌ಲಿಫ್ಟ್ ಮಾಡಲಾಗಿದೆ.
ಕನ್ನಡಿಗರ ರಕ್ಷಣೆಯ ಬಗ್ಗೆಯೂ ಶ್ರಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕರ್ನಾಟಕದ ಜನರ ರಕ್ಷಣೆಗಾಗಿ ಹಾಗೂ ಅವರ ಸಹಾಯಕ್ಕಾಗಿ ಕರ್ನಾಟಕದಲ್ಲಿ ಒಬ್ಬ ನೋಡಲ್ ಅಧಿಕಾರಿಯ ನೇಮಕ ಮಾಡಲಾಗಿದೆ.
ಕಿಡ್ನ್ಯಾಪ್ ಆಗಿದ್ದಾರೆ ಎನ್ನಲಾದ 150 ಮಂದಿ ರಕ್ಷಣೆ ಅಫ್ಘಾನಿಸ್ತಾನದ ಕಾಬೂಲ್ ಏರ್ಪೋರ್ಟ್ನಿಂದ ಕಿಡ್ನ್ಯಾಪ್ ಆಗಿದ್ದಾರೆ ಎನ್ನಲಾಗಿದ್ದ 150 ಭಾರತೀಯರು ಸುರಕ್ಷಿತವಾಗಿರುವ ಕುರಿತು ಶನಿವಾರ (ಆಗಸ್ಟ್ 21) ಮಾಹಿತಿ ಲಭ್ಯವಾಗಿತ್ತು. ಭಾರತೀಯರ ಪಾಸ್ಪೋರ್ಟ್ ಪರಿಶೀಲಿಸಿದ ತಾಲಿಬಾನಿಗಳು ಕಾಬೂಲ್ ಏರ್‌ಪೋರ್ಟ್ ಬಳಿ ವಾಪಸ್ ಬಿಡುವ ಭರವಸೆ ನೀಡಿದ್ದರು. ಬಳಿಕ, ಅವರೆಲ್ಲರೂ ಸುರಕ್ಷಿತವಾಗಿದ್ದು ಕಾಬೂಲ್ ವಿಮಾನ ನಿಲ್ದಾಣದ ಬಳಿ ಇರುವ ಗ್ಯಾರೇಜ್ನಲ್ಲಿ ಇದ್ದಾರೆ ಎಂದು ತಿಳಿದುಬಂದಿತ್ತು.
150 ಭಾರತೀಯರನ್ನು ಕಿಡ್ನ್ಯಾಪ್ ಮಾಡಿರುವ ಬಗ್ಗೆ ಕಾಬೂಲ್ನ ಭಾರತೀಯ ದೂತಾವಾಸದ ಸಿಬ್ಬಂದಿ ಕೆಲ ಗಂಟೆಗಳ ಹಿಂದಷ್ಟೇ ಮಾಹಿತಿ ನೀಡಿದ್ದರು. ರಾಯಭಾರ ಕಚೇರಿಯ ಸ್ಥಳೀಯ ಸಿಬ್ಬಂದಿಯಿಂದ ಮಾಹಿತಿ ದೊರೆತಿದ್ದು, ಈ ಬಗ್ಗೆ ಅಫ್ಘಾನಿಸ್ತಾನದ ಮುಸ್ಲಿಂ ಶಿರಜಾದ್ನಿಂದ ಮಾಡಿರುವ ಟ್ವೀಟ್ ಲಭ್ಯವಾಗಿತ್ತು. ಆದರೆ, ಭಾರತೀಯರ ಕಿಡ್ನ್ಯಾಪ್ ಆಗಿರುವ ಬಗ್ಗೆ ಭಾರತ ಸರ್ಕಾರ ತಕ್ಷಣ ಯಾವುದೇ ಖಚಿತತೆ ನೀಡಿರಲಿಲ್ಲ. ಜತೆಗೆ, ಭಾರತದ ವಿದೇಶಾಂಗ ಇಲಾಖೆ ಕೂಡಾ ಅಧಿಕೃತ ಮಾಹಿತಿ ನೀಡಿರಲಿಲ್ಲ. ಅಫ್ಘಾನಿಸ್ತಾನದ ಸ್ಥಳೀಯ ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾದ ಮಾಹಿತಿ ಆಧರಿಸಿ ಘಟನೆಯ ಬಗ್ಗೆ ತಿಳಿದುಕೊಳ್ಳಲಾಗಿತ್ತು.
ಸ್ಥಳೀಯ ಮಾಧ್ಯಮಗಳು ನೀಡಿರುವ ಮಾಹಿತಿ ಪ್ರಕಾರ ಕಿಡ್ನ್ಯಾಪ್ ಆಗಿದ್ದಾರೆ ಎನ್ನಲಾಗಿದ್ದ 150 ಮಂದಿ ಭಾರತೀಯರೂ ಸುರಕ್ಷಿತವಾಗಿದ್ದಾರೆ. ಭಾರತೀಯರ ಪಾಸ್ಪೋರ್ಟ್ಗಳನ್ನು ತಾಲಿಬಾನ್ ಉಗ್ರರು ಪರಿಶೀಲಿಸಿದ್ದರಾದರೂ ಯಾವುದೇ ರೀತಿಯ ಜೀವಹಾನಿ ಮಾಡಿಲ್ಲ ಎಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: ಮಹಿಳೆಯರ ಮೇಲೆ ತಾಲಿಬಾನಿಗಳ ದೌರ್ಜನ್ಯ ಎಂಥದ್ದು? ಮಂಗಳೂರು ವಿವಿಯ ಆಫ್ಘನ್ ವಿದ್ಯಾರ್ಥಿ ಬಿಚ್ಚಿಟ್ಟ ವಿಚಾರ ಇದು
Published On - 6:50 am, Sun, 22 August 21