Arunachal Pradesh: ಅರುಣಾಚಲ ಭಾರತದ ಅವಿಭಾಜ್ಯ ಅಂಗ; ಚೀನಾ ಖಂಡಿಸಿ ಅಮೆರಿಕ ಸೆನೆಟ್​ನಿಂದ ನಿರ್ಣಯ ಅಂಗೀಕಾರ

ಭಾರತ-ಚೀನಾ ನಡುವೆ ಪೂರ್ವ ಗಡಿ ಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಉದ್ವಿಗ್ನ ಪರಿಸ್ಥಿತಿ ಇದೆ. ಈ ಮಧ್ಯೆ ಕಳೆದ ಕೆಲವು ದಿನಗಳಿಂದ ಕಣ್ಗಾವಲು ಬಲೂನ್ ಹಾರಾಟ ವಿಚಾರವಾಗಿ ಚೀನಾ - ಅಮೆರಿಕ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಇಂಥ ಸಂದರ್ಭದಲ್ಲೇ ಅಮೆರಿಕ ನಿಲುವಳಿ ಮಂಡಿಸಿದೆ ಎಂಬುದು ಗಮನಾರ್ಹ.

Arunachal Pradesh: ಅರುಣಾಚಲ ಭಾರತದ ಅವಿಭಾಜ್ಯ ಅಂಗ; ಚೀನಾ ಖಂಡಿಸಿ ಅಮೆರಿಕ ಸೆನೆಟ್​ನಿಂದ ನಿರ್ಣಯ ಅಂಗೀಕಾರ
ಭಾರತ ಮತ್ತು ಚೀನಾ ಯೋಧರು (ಪಿಟಿಐ ಸಂಗ್ರಹ ಚಿತ್ರ)Image Credit source: PTI
Follow us
Ganapathi Sharma
|

Updated on:Feb 17, 2023 | 9:01 AM

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಅರುಣಾಚಲ ಪ್ರದೇಶ (Arunachal Pradesh) ಭಾರತದ (India) ಅವಿಭಾಜ್ಯ ಅಂಗ ಎಂದು ಅಮೆರಿಕ (United States) ಸಂಸತ್​​ನಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಜತೆಗೆ, ಚೀನಾದ ಅತಿಕ್ರಮಣಕಾರಿ ವರ್ತನೆಯನ್ನು ಖಂಡಿಸಲಾಗಿದೆ. ಭಾರತದ ಸಾರ್ವಭೌಮತ್ವ ಮತ್ತು ಭೌಗೋಳಿಕ ಸಮಗ್ರತೆಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ವಾಸ್ತವ ನಿಯಂತ್ರಣ ರೇಖೆಯಲ್ಲಿ (LAC) ಬದಲಾವಣೆ ಮಾಡಲು ಚೀನಾ ಸೇನಾ ಪ್ರಚೋದನೆ ಮಾಡುತ್ತಿರುವುದು ಸರಿಯಲ್ಲ ಎಂದಿರುವ ಅಮೆರಿಕ, ಸ್ವ ರಕ್ಷಣೆಗೆ ಭಾರತ ಕೈಗೊಳ್ಳುತ್ತಿರುವ ಕ್ರಮಗಳನ್ನು ಬೆಂಬಲಿಸಿದೆ.

ಜಾನ್ ಕಾರ್ನಿನ್ ಬೆಂಬಲದೊಂದಿಗೆ ಜೆಫ್​​ ಮಾರ್ಕ್ಲೆ, ಬಿಲ್ ಹ್ಯಾಗರ್ಟಿ ನಿರ್ಣಯ ಮಂಡಿಸಿದ್ದಾರೆ. ಭಾರತವು ಸೇನೆಯನ್ನು ಆಧುನೀಕರಣಗೊಳಿಸುತ್ತಿರುವುದನ್ನು ನಿಲುವಳಿಯಲ್ಲಿ ಬೆಂಬಲಿಸಲಾಗಿದ್ದು, ಅರುಣಾಚಲ ಪ್ರದೇಶದ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಬಂಬಲ ಸೂಚಿಸಲಾಗಿದೆ. ಭಾರತ-ಅಮೆರಿಕ ದ್ವಿಪಕ್ಷೀಯ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಬೆಂಬಲ ಸೂಚಿಸಲಾಗಿದೆ ಎಂದು ಅಮೆರಿಕ ಹೇಳಿದೆ.

ಇದನ್ನೂ ಓದಿ: YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ಜೆಫ್​​ ಮಾರ್ಕ್ಲೆ ಡೆಮಾಕ್ರಟಿಕ್ ಪಕ್ಷದ ಪ್ರಮುಖ ಸೆನೆಟರ್ ಆಗಿದ್ದು ಒರೆಗಾನ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು, ಚೀನಾ ಜತೆಗಿನ ವ್ಯವಹಾರಗಳಿಗೆ ಸಂಬಂಧಿಸಿದ ಅಮೆರಿಕ ಕಾಂಗ್ರೆಷನಲ್ ಎಕ್ಸಿಕ್ಯೂಟಿವ್ ಕಮಿಷನ್​​ನ ಸಹ ಅಧ್ಯಕ್ಷರಾಗಿದ್ದಾರೆ. ಬಿಲ್ ಹ್ಯಾಗರ್ಟಿ ಜಪಾನ್​ನಲ್ಲಿ ಅಮೆರಿಕದ ರಾಯಭಾರಿಯಾಗಿದ್ದವರು. ಇಬ್ಬರೂ ಅಮೆರಿಕ ಸೆನೆಟ್​​​ನ ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯರಾಗಿದ್ದಾರೆ. ಹೀಗಾಗಿ ಅಮೆರಿಕದ ನಿಲುವಳಿ ಮಹತ್ವದ್ದು ಎನ್ನಲಾಗಿದೆ.

ಭಾರತ-ಚೀನಾ ನಡುವೆ ಪೂರ್ವ ಗಡಿ ಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಉದ್ವಿಗ್ನ ಪರಿಸ್ಥಿತಿ ಇದೆ. ಈ ಮಧ್ಯೆ ಕಳೆದ ಕೆಲವು ದಿನಗಳಿಂದ ಕಣ್ಗಾವಲು ಬಲೂನ್ ಹಾರಾಟ ವಿಚಾರವಾಗಿ ಚೀನಾ – ಅಮೆರಿಕ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಇಂಥ ಸಂದರ್ಭದಲ್ಲೇ ಅಮೆರಿಕ ನಿಲುವಳಿ ಮಂಡಿಸಿದೆ ಎಂಬುದು ಗಮನಾರ್ಹ. ಚೀನಾ ಬಲೂನ್​ಗಳು ಅಮೆರಿಕದ ವಾಯು ಪ್ರದೇಶದಲ್ಲಿ ಹಾರಾಟ ನಡೆಸಿರುವ ಬೆನ್ನಲ್ಲೇ ಚೀನಾದಲ್ಲಿಯೂ ಅಮೆರಿಕದ ಬಲೂನ್​ಗಳು ಹಾರಾಡಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದ್ದು, ತನ್ನ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:01 am, Fri, 17 February 23

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ