Accident: ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ, 48 ಜನ ದುರ್ಮರಣ

ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 48 ಜನ ಮೃತಪಟ್ಟಿದ್ದಾರೆ. ಕಂಟೈನರ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಾದಚಾರಿಗಲ ಮೇಲೆ ಹರಿದಿದೆ.

Accident: ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ, 48 ಜನ ದುರ್ಮರಣ
ಪಶ್ಚಿಮ ಕೀನ್ಯಾದಲ್ಲಿ ಭೀಕರ ರಸ್ತೆ ಅಪಘಾತ
Follow us
TV9 Web
| Updated By: ಆಯೇಷಾ ಬಾನು

Updated on: Jul 01, 2023 | 7:00 AM

ನೈರೋಬಿ: ಪಶ್ಚಿಮ ಕೀನ್ಯಾದ(Western Kenya) ಲೊಂಡಿಯಾನಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ( Road Accident). ದುರಂತದಲ್ಲಿ 48 ಜನ ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್, ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿಗಳ ಮೇಲೆ ಹರಿದಿದೆ. ಈ ಪರಿಣಾಮ 48 ಜನ ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜಧಾನಿ ನೈರೋಬಿಯ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ (125 ಮೈಲುಗಳು) ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಶುಕ್ರವಾರ ಸಂಜೆ ರಸ್ತೆ ಅಪಘಾತ ಸಂಭವಿಸಿದೆ.

ಸ್ಥಳದಲ್ಲೇ 48 ಜನ ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಪಷ್ಟ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ರಿಫ್ಟ್ ವ್ಯಾಲಿ ಪೊಲೀಸ್ ಕಮಾಂಡರ್ ಟಾಮ್ ಒಡೆರಾ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮಗಳು ಉಲ್ಲೇಖಿಸಿದ್ದಂತೆ, ಟ್ರಕ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳು ಮತ್ತು ಮಾರುಕಟ್ಟೆ ವ್ಯಾಪಾರಿಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ಘಟನೆಯ ವಿಡಿಯೋ, ಫೋಟೋಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾರಿಗೆ ಸಂಸ್ಥೆಯಿಂದ ಗುಡ್​ ನ್ಯೂಸ್​: ಜುಲೈ 15 ರವರೆಗೆ ಸಾಮಾನ್ಯ ಸೇವೆಯಲ್ಲಿ ಪ್ರಯಾಣಿಸಲು ಅವಕಾಶ

ರಾತ್ರಿ ಪೂರ್ತಿಯೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು ಭಾರೀ ಮಳೆಯು ಕಾರ್ಯಾಚರಣೆಗೆ ಅಡ್ಡಿಪಡಿಸಿತು. ಇನ್ನೂ ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್‌ಕ್ರಾಸ್ ಸೊಸೈಟಿ ಹೇಳಿದೆ.

ಲೊಂಡಿಯಾನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಂಬಂಧ ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದೇಶವು ಶೋಕಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ