UN Security Council: ಭಯೋತ್ಪಾದನೆ ಕುರಿತು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಸಚಿವರ ಕಿವಿ ಹಿಂಡಿದ ಜೈಶಂಕರ್​

ಜಗತ್ತು ಪಾಕಿಸ್ತಾನವನ್ನು ಭಯೋತ್ಪಾದನೆಯ ಕೇಂದ್ರಬಿಂದುವಾಗಿ ನೋಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಜಗತ್ತಿನಲ್ಲಿ ಮತ್ತೊಂದು ನ್ಯೂಯಾರ್ಕ್‌ನ 9/11 ಅಥವಾ ಮುಂಬೈನ 26/11 ದಾಳಿ ಸಂಭವಿಸಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

UN Security Council: ಭಯೋತ್ಪಾದನೆ ಕುರಿತು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಸಚಿವರ ಕಿವಿ ಹಿಂಡಿದ ಜೈಶಂಕರ್​
S Jaishankar
Follow us
TV9 Web
| Updated By: ನಯನಾ ರಾಜೀವ್

Updated on:Dec 16, 2022 | 10:49 AM

ಜಗತ್ತು ಪಾಕಿಸ್ತಾನವನ್ನು ಭಯೋತ್ಪಾದನೆಯ ಕೇಂದ್ರಬಿಂದುವಾಗಿ ನೋಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 24 ಗಂಟೆಗಳ ಅವಧಿಯಲ್ಲಿ 2ನೇ ಬಾರಿಗೆ ಮತ್ತೆ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಜೈಶಂಕರ್, ಮುಂಬೈ ಭಯೋತ್ಪಾದನಾ ದಾಳಿ ಮತ್ತು ನ್ಯೂಯಾರ್ಕ್‌ನ ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿ ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

ಜಗತ್ತಿನಲ್ಲಿ ಮತ್ತೊಂದು ನ್ಯೂಯಾರ್ಕ್‌ನ 9/11 ಅಥವಾ ಮುಂಬೈನ 26/11 ದಾಳಿ ಸಂಭವಿಸಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನಲ್ಲಿ ತನ್ನ ಭಯೋತ್ಪಾದನೆ ನಿಗ್ರಹ ಕಾರ್ಯಸೂಚಿಯನ್ನು ಪುನಶ್ಚೇತನಗೊಳಿಸಲು ಭಾರತ ನಡೆಸುತ್ತಿರುವ ಪ್ರಯತ್ನಗಳ ಒಂದು ಭಾಗವಾಗಿದೆ. ಭಯೋತ್ಪಾದನೆಯ ಬೆದರಿಕೆ ನಿಜವಾಗಿಯೂ ಹೆಚ್ಚು ಗಂಭೀರವಾಗಿದೆ ಎಂದರು.

ಚೀನಾ ಮತ್ತು ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡ ಜೈಶಂಕರ್, ಡಬಲ್ ಸ್ಟಾಂಡರ್ಡ್ ಅನ್ನು ಹೇಗೆ ಎದುರಿಸುವುದು ಎಂಬುದು ಒಂದು ಸವಾಲು. ಭಯೋತ್ಪಾದನೆಯು ಮತ್ತೊಂದು ಸಾಧನ ಅಥವಾ ತಂತ್ರವಾಗಿದೆ ಎಂದು ಬಹಳ ಸಮಯದಿಂದ ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ದೇಶವು ಭಯೋತ್ಪಾದನೆಯಿಂದ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಬಾರದು.

UN Security Council: ಬಿನ್ ಲಾಡೆನ್‌ಗೆ ಆತಿಥ್ಯ ನೀಡಿದವರಿಗೆ ಬೋಧಿಸುವ ಅರ್ಹತೆಯಿಲ್ಲ ಎಂದು ಪಾಕ್ ವಿರುದ್ಧ ಸಚಿವ ಜೈಶಂಕರ್ ವಾಗ್ದಾಳಿ

ಈ ಇಬ್ಬರೂ ದಾಳಿಕೋರರಿಗೂ ಪಾಕಿಸ್ತಾನದೊಂದಿಗೆ ನೇರ ಸಂಪರ್ಕವಿದೆ. ಮತ್ತೆ ಮುಂಬೈನಲ್ಲಿ 26/11 ಅಥವಾ ನ್ಯೂಯಾರ್ಕ್‌ನಲ್ಲಿ 9/11 ದಾಳಿಗಳು ನಡೆಯಲು ನಾವು ಬಿಡುವುದಿಲ್ಲ. ಭಯೋತ್ಪಾದನೆಯ ಬೆದರಿಕೆ ನಿಜವಾಗಿಯೂ ಹೆಚ್ಚು ಗಂಭೀರವಾಗಿದೆ ಎಂದು ಹೇಳಿದರು.

ಭಯೋತ್ಪಾದನೆಯೊಂದಿಗೆ ವ್ಯವಹರಿಸುವಾಗ, ನಾವು ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಶೂನ್ಯ-ಸಹಿಷ್ಣು ವಿಧಾನವನ್ನು ವ್ಯಕ್ತಪಡಿಸಬೇಕು ಎಂದರು.

ಭಯೋತ್ಪಾದನಾ ಕೃತ್ಯಗಳಿಂದ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಬೆದರಿಕೆಗಳು: ಜಾಗತಿಕ ಭಯೋತ್ಪಾದನೆ ನಿಗ್ರಹ ವಿಧಾನ – ತತ್ವಗಳು ಮತ್ತು ಮಾರ್ಗಗಳು’ ಎಂಬ ವಿಷಯದ ಮೇಲೆ ಸಭೆಯನ್ನು ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಮಾತನಾಡಿದ ಜೈಶಂಕರ್, ಯಾವುದೇ ರಾಷ್ಟ್ರವು ಭಯೋತ್ಪಾದನೆಯಿಂದ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಬಾರದು ಮತ್ತು ನಾವು ಯಾರೂ ಅಂತಹ ಲೆಕ್ಕಾಚಾರಗಳಿಗೆ ಎಂದಿಗೂ ಮುಂದಾಗಬಾರದು ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Fri, 16 December 22

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ