AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Titanic Submarine: ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಟೈಟಾನಿಕ್ (Titanic)ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ.

Titanic Submarine: ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ
ಟೈಟಾನಿಕ್ ಹಡಗು
Follow us
ನಯನಾ ರಾಜೀವ್
|

Updated on: Jun 20, 2023 | 9:53 AM

ಟೈಟಾನಿಕ್ (Titanic)ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್​ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ದೃಢಪಟ್ಟಿಲ್ಲ.

ಏಪ್ರಿಲ್ 14, 1912 ರಂದು ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ದೊಡ್ಡ ಮಂಜುಗಡ್ಡೆಗೆ (ಐಸ್ ರಾಕ್) ಡಿಕ್ಕಿ ಹೊಡೆದ ನಂತರ ಟೈಟಾನಿಕ್ ಹಡಗು ಎರಡು ತುಂಡಾಗಿ ಸಮುದ್ರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ, ಟೈಟಾನಿಕ್ ಮುಳುಗುವಿಕೆಯಿಂದ 1500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಏಪ್ರಿಲ್ 10 ರಂದು, ಈ ಹಡಗು ಬ್ರಿಟನ್‌ನ ಸೌತಾಂಪ್ಟನ್ ಬಂದರಿನಿಂದ ನ್ಯೂಯಾರ್ಕ್‌ಗೆ ಪ್ರಯಾಣ ಬೆಳೆಸಿತ್ತು, ಅದು ಅಪಘಾತಕ್ಕೆ ಬಲಿಯಾಯಿತು.

ಮತ್ತಷ್ಟು ಓದಿ: Titanic Movie: ಹೊಸ ಅವತಾರದಲ್ಲಿ ರಿಲೀಸ್ ಆಗುತ್ತಿದೆ ‘ಟೈಟಾನಿಕ್​’ ಸಿನಿಮಾ; ಇಲ್ಲಿದೆ ವಿವರ

ಹಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಕೂಡ ಟೈಟಾನಿಕ್ ಹಡಗು ದುರಂತದ ಬಗ್ಗೆ ಅದೇ ಹೆಸರಿನಲ್ಲಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಇದರಲ್ಲಿ ಟೈಟಾನಿಕ್ ಅಪಘಾತವನ್ನು ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಯಿತು.

ನೌಕೆಯಲ್ಲಿದ್ದವರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆದರೆ ಎಷ್ಟು ಮಂದಿ ಇದ್ದರು ಎನ್ನುವ ಕುರಿತು ನಿಖರವಾದ ಮಾಹಿತಿ ಇಲ್ಲ ಎಂದು ಓಸಿಂಗೇಟ್ ಕಂಪನಿ ಹೇಳಿದೆ.

ಸಮುದ್ರಯಾನವು ನ್ಯೂಫೌಂಡ್​ಲ್ಯಾಂಡ್​ನ ಸೇಂಟ್​ ಜಾನ್ಸ್​ನಲ್ಲಿ ಪ್ರಾರಂಭವಾಗುತ್ತದೆ. ಅಟ್ಲಾಂಟಿಕ್​ನಾದ್ಯಂತ ಸುಮಾರು 400 ಮೈಲಿಗಳಷ್ಟು ಸಂಚರಿಸುತ್ತದೆ. ಐವರು ಮಾತ್ರ ಈ ನೌಕೆಯನ್ನು ಒಂದೇ ಸಮಯದಲ್ಲಿ ಹತ್ತಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್