AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಹಿಂದೂ ದೇವಾಲಯದ ಮೇಲೆ ದಾಳಿ, ದೇವತೆಗಳ ವಿಗ್ರಹಗಳು ಧ್ವಂಸ!

ಪಾಕಿಸ್ತಾನದ ಕೋರಂಗಿ ಪೊಲೀಸ್ ಠಾಣಾ ವ್ಯಾಪ್ತಿಯ "ಜೆ" ಪ್ರದೇಶದಲ್ಲಿರುವ ಶ್ರೀ ಮಾರಿ ಮಾತಾ ಮಂದಿರದಲ್ಲಿರುವ ದೇವಾಲಯದ ಮೇಲೆ ದಾಳಿ ನಡೆಸಿ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದ್ದು, ಎಫ್​ಐಆರ್ ದಾಖಲಾಗಿದೆ.

Pakistan: ಹಿಂದೂ ದೇವಾಲಯದ ಮೇಲೆ ದಾಳಿ, ದೇವತೆಗಳ ವಿಗ್ರಹಗಳು ಧ್ವಂಸ!
ಪಾಕಿಸ್ತಾನ ಧ್ವಜ
TV9 Web
| Updated By: Rakesh Nayak Manchi|

Updated on: Jun 09, 2022 | 3:34 PM

Share

ಕರಾಚಿ: ಪಾಕಿಸ್ತಾನ (Pakistan)ದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪೂಜಾ ಸ್ಥಳಗಳ ಮೇಲೆ ದಾಳಿಗಳು ಮುಂದುವರೆದಿದ್ದು, ಇಲ್ಲಿನ ಒರಂಗಿ ಪ್ರದೇಶದಲ್ಲಿ ಇರುವ ಹಿಂದೂ ದೇವಾಲಯವನ್ನು ಕಿಡಿಗೇಡಿಗಳು ಬುಧವಾರ ಧ್ವಂಸಗೊಳಿಸಿದ್ದಾರೆ. ಕೋರಂಗಿ ಪೊಲೀಸ್ ಠಾಣಾ ವ್ಯಾಪ್ತಿಯ “ಜೆ” ಪ್ರದೇಶದಲ್ಲಿರುವ ಶ್ರೀ ಮಾರಿ ಮಾತಾ ಮಂದಿರದಲ್ಲಿರುವ ದೇವಾಲಯದ ಮೇಲೆ ದಾಳಿ ನಡೆಸಿ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ದೇವಸ್ಥಾನವನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ಘಟನೆಯ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಕೂಡಲೇ ಕಾನೂನು ಜಾರಿ ಸಂಸ್ಥೆಗಳು ಸ್ಥಳಕ್ಕೆ ಬಂದು ಘಟನೆಯ ಕುರಿತು ಮಾಹಿತಿ ಕಲೆಹಾಕಿದ್ದು, ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಟ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಧ್ಯರಾತ್ರಿ ವೇಳೆ ಅಪರಿಚಿತ ವ್ಯಕ್ತಿಗಳು ದೇವಾಲಯದ ಆವರಣಕ್ಕೆ ನುಗ್ಗಿ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯು ಕರಾಚಿಯಲ್ಲಿ ವಾಸಿಸುವ ಹಿಂದೂ ಸಮುದಾಯದವರಲ್ಲಿ ಭಯದ ವಾತಾವರಣ ಸೃಷ್ಟಿಸಿತು. ಕೋರಂಗಿ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: Sri Lanka Crisis: ಭಾರತ ಬಿಟ್ಟು ಬೇರಾವ ದೇಶವೂ ನಮಗೆ ಹಣ ನೀಡುತ್ತಿಲ್ಲ; ಶ್ರೀಲಂಕಾ ಪ್ರಧಾನಿ ಹೇಳಿಕೆ

ಆರರಿಂದ ಎಂಟು ವ್ಯಕ್ತಿಗಳು ದ್ವಿಚಕ್ರವಾಹನದಲ್ಲಿ ಬಂದು ದೇವಾಲಯದ ಮೇಲೆ ದಾಳಿ ಮಾಡಿದ್ದಾರೆ. ಯಾಕೆ ದಾಳಿ ನಡೆಸಿದ್ದಾರೆ ಎಂದು ನಮಗೆ ತಿಳಿದಿಲ್ಲ ಎಂದು ಪ್ರದೇಶದ ಹಿಂದೂ ನಿವಾಸಿ ಸಂಜೀವ್ ಅವರು ಪತ್ರಿಕೆಗೆ ತಿಳಿಸಿದರು. ದಾಳಿ ಬಗ್ಗೆ ಮಾತನಾಡಿದ ಕೋರಂಗಿ ಎಸ್‌ಎಚ್‌ಒ ಫಾರೂಕ್ ಸಂಜರಾಣಿ, ಐದರಿಂದ ಆರು ಅಪರಿಚಿತ ಶಂಕಿತರು ದೇವಾಲಯಕ್ಕೆ ಪ್ರವೇಶಿಸಿ ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ. ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಗೆ ಸೇರಿದ ದೇವಾಲಯಗಳು ಗುಂಪು ಹಿಂಸಾಚಾರಕ್ಕೆ ಗುರಿಯಾಗುತ್ತಿವೆ. ಅಕ್ಟೋಬರ್‌ನಲ್ಲಿ ಕೊಟ್ರಿಯ ಸಿಂಧೂ ನದಿಯ ದಡದಲ್ಲಿರುವ ಐತಿಹಾಸಿಕ ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್‌ನಲ್ಲಿ ಸ್ಥಳೀಯ ಸೆಮಿನರಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ ಎಂಟು ವರ್ಷದ ಹಿಂದೂ ಹುಡುಗನಿಗೆ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಿದ ನಂತರ ದುಷ್ಕರ್ಮಿಗಳು ಭೋಂಗ್ ಪಟ್ಟಣದಲ್ಲಿರುವ ಶ್ರೀ ಗಣೇಶ ದೇವಾಲಯವನ್ನು ಧ್ವಂಸಗೊಳಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಇರಾನ್ನಲ್ಲಿ ಭೀಕರ ಅಪಘಾತ; ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪ್ಯಾಸೆಂಜರ್ ರೈಲು, 22 ಪ್ರಯಾಣಿಕರ ಸಾವು

ಅಧಿಕೃತ ಅಂದಾಜಿನ ಪ್ರಕಾರ ಪಾಕಿಸ್ತಾನದಲ್ಲಿ 75 ಲಕ್ಷ ಹಿಂದೂಗಳು ವಾಸಿಸುತ್ತಿದ್ದಾರೆ. ಆದಾಗ್ಯೂ ಸಮುದಾಯದ ಪ್ರಕಾರ, 90 ಲಕ್ಷಕ್ಕೂ ಹೆಚ್ಚು ಹಿಂದೂಗಳು ದೇಶದಲ್ಲಿ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಬಹುಪಾಲು ಹಿಂದೂ ಜನಸಂಖ್ಯೆಯು ಸಿಂಧ್ ಪ್ರಾಂತ್ಯದಲ್ಲಿ ನೆಲೆಸಿದೆ. ಅಲ್ಲಿ ಅವರು ಮುಸ್ಲಿಂ ನಿವಾಸಿಗಳೊಂದಿಗೆ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಭಾಷೆಯನ್ನು ಹಂಚಿಕೊಳ್ಳುತ್ತಾರೆ. ಅವರು ಆಗಾಗ್ಗೆ ಉಗ್ರರ ಕಿರುಕುಳದ ಬಗ್ಗೆ ದೂರು ನೀಡುತ್ತಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?