ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಮೇಲೆ ಖಲಿಸ್ತಾನ್ ಬೆಂಬಲಿಗರಿಂದ ದಾಳಿ

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನ್ ಬೆಂಬಲಿಗರು ದಾಳಿ ನಡೆಸಿದ್ದಾರೆ.

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಮೇಲೆ ಖಲಿಸ್ತಾನ್ ಬೆಂಬಲಿಗರಿಂದ ದಾಳಿ
ಭಾರತದ ರಾಯಭಾರಿ ಕಚೇರಿ ಮೇಲೆ ದಾಳಿ
Updated By: ಅಕ್ಷಯ್​ ಪಲ್ಲಮಜಲು​​

Updated on: Mar 20, 2023 | 5:35 PM

ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ (San Francisco) ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನ್ ಬೆಂಬಲಿಗರು ದಾಳಿ ನಡೆಸಿದ್ದಾರೆ. ಅಮೃತಪಾಲ್ ಸಿಂಗ್ ವಿರುದ್ಧದ ದಬ್ಬಾಳಿಕೆ ನಡುವೆಯೇ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸಕ್ಕೆ ಖಲಿಸ್ತಾನ್ ಬೆಂಬಲಿಗರಿಂದ ದಾಳಿ ನಡೆಸಿದ್ದು,  ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಟ್ಟಡದಲ್ಲಿ ಖಲಿಸ್ತಾನ್ ಬೆಂಬಲಿಗರು ರಾಷ್ಟ್ರಧ್ವಜವನ್ನು ಕೆಳಗಿಳಿದ ಕೂಡಲೇ, ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸದ ಮೇಲೆ ಭಾರಿ ಜನಸಮೂಹ ದಾಳಿ ನಡೆಸುತ್ತಿರುವ ವೀಡಿಯೊಗಳು ಕಂಡುಬಂದಿವೆ. ಅವರು ಕಟ್ಟಡದ ಹೊರ ಗೋಡೆಯ ಮೇಲೆ Free Amritpal ಎಂಬ ಗೀಚುಬರಹವನ್ನು ಸಹ ಸಿಂಪಡಿಸಿದ್ದಾರೆ.

ದಾಳಿಕೋರರು ಸ್ವತಃ ಚಿತ್ರೀಕರಿಸಿದ ಹಲವಾರು ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  ಯುವಕರು ಖಲಿಸ್ತಾನ್ ಧ್ವಜವನ್ನು ಹಾಕಿರುವ ಮರದ ತುಂಡುಗಳ ಬುಡದಿಂದ ಕಾನ್ಸುಲೇಟ್ ಕಟ್ಟಡದ ಬಾಗಿಲುಗಳು ಮತ್ತು ಕಿಟಕಿಗಳ ಗಾಜನ್ನು ಒಡೆದು ಹಾಕುವುದನ್ನು ವಿಡಿಯೊದಲ್ಲಿ ತೋರಿಸಲಾಗಿದೆ

Published On - 5:28 pm, Mon, 20 March 23