Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನಿಗಳಿಂದ ದಾಳಿ

ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರಿ ಗುರಿಯಾಗಿಸಿ ದಾಳಿ ಮಾಡಲಾಗಿದೆ. ದೇವಸ್ಥಾನಗಳ ಮೇಲೆ ದಾಳಿ ನಂತರ ಭಾರತದ ರಾಯಭಾರಿ ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ವರದಿ ಹೇಳಿದೆ.

Australia: ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನಿಗಳಿಂದ ದಾಳಿ
ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರಿ ಮೇಲೆ ದಾಳಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 24, 2023 | 3:19 PM

ಬ್ರಿಸ್ಬೇನ್: ಆಸ್ಟ್ರೇಲಿಯಾದಲ್ಲಿರುವ (Australia) ಭಾರತೀಯ ರಾಯಭಾರಿ ಗುರಿಯಾಗಿಸಿ (Indian Embassy in Australia) ದಾಳಿ ಮಾಡಲಾಗಿದೆ. ದೇವಸ್ಥಾನಗಳ ಮೇಲೆ ದಾಳಿ ನಂತರ ಭಾರತದ ರಾಯಭಾರಿ ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ವರದಿ ಹೇಳಿದೆ. ಇದರ ಜತೆಗೆ ದಾಲಿ ವೇಳೆ ಭಾರತೀಯ ರಾಯಭಾರ ಕಚೇರಿ ಮೇಲೆ ಖಲಿಸ್ತಾನ ಧ್ವಜ ಹಾರಾಟ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಖಲಿಸ್ತಾನಿ ಗುಂಪುಗಳು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ್ದು, ಇದೀಗ ಆಸ್ಟ್ರೇಲಿಯಾ ಮತ್ತು ಕೆನಡಾ, ಖಲಿಸ್ತಾನಿ ಗೂಂಡಾಗಳು ಬ್ರಿಸ್ಬೇನ್‌ನಲ್ಲಿರುವ ಭಾರತೀಯ ದೂತಾವಾಸದ ಮೇಲೆ ದಾಳಿ ಮಾಡಿದ್ದಾರೆ ಮತ್ತು ಖಲಿಸ್ತಾನಿ ಧ್ವಜಗಳನ್ನು ಹಾರಿಸಿದ್ದಾರೆ. ಫೆಬ್ರವರಿ 21 ರಂದು ಬ್ರಿಸ್ಬೇನ್‌ನಲ್ಲಿ ದಾಳಿ ನಡೆದಿತ್ತು.

ಈ ಬಗ್ಗೆ ಮಾತನಾಡಿದ ಕಾನ್ಸುಲ್ ಅರ್ಚನಾ ಸಿಂಗ್ಖಾಲಿಸ್ತಾನ್ ಪ್ರಚಾರಕ್ಕಾಗಿ ಹಿಂದೂ ದೇವಾಲಯಗಳಿಗೆ ಬೆದರಿಕೆ ಹಾಕುತ್ತಿರುವುದನ್ನು ನೋಡಿ ತುಂಬಾ ಅಸಮಾಧಾನಗೊಂಡಿದ್ದೇನೆ, ಈ ಬಗ್ಗೆ ಕ್ವೀನ್ಸ್‌ಲ್ಯಾಂಡ್ ಪೊಲೀಸರಿಗೆ ತಿಳಿಸಲಾಗಿದ್ದು, ಅವರು ಸ್ಥಳಕ್ಕೆ ಬಂದು ಧ್ವಜವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರ್ಚನಾ ಸಿಂಗ್ ದಿ ಆಸ್ಟ್ರೇಲಿಯ ಟುಡೆಗೆ ತಿಳಿಸಿದರು, ಈ ಬಗ್ಗೆ ನಮಗೆ ರಕ್ಷಣೆ ನೀಡಲು ಪೊಲೀಸರು ಈ ಪ್ರದೇಶದಲ್ಲಿ ಭದ್ರತೆಯನ್ನು ನೀಡಿದ್ದಾರೆ. ಈ ಬಗ್ಗೆ ನಮಗೆ ಪೊಲೀಸ್ ಮೇಲೆ ಬಲವಾದ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Hindu Temples: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ಕಿಡಿಗೇಡಿಗಳಿಂದ ದಾಳಿ, ವಿಗ್ರಹಗಳ ಧ್ವಂಸ

ಖಲಿಸ್ತಾನಿಗಳಿಂದ ದೇವಾಲಯ ಧ್ವಂಸ

ಖಲಿಸ್ತಾನಿ ಬೆಂಬಲಿಗರು ಆಸ್ಟ್ರೇಲಿಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಕೇವಲ ಒಂದು ತಿಂಗಳ ನಂತರ ಈ ಘಟನೆಯು ಸಂಭವಿಸಿದೆ, ಮತ್ತೊಮ್ಮೆ ಗೋಡೆಗಳ ಮೇಲೆ ಮೋದಿ ದ್ವೇಷಿಸಿ ಬರೆಯಲಾಗಿದೆ. ಕನಿಷ್ಠ ಎರಡು ವಾರಗಳಲ್ಲಿ ದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆದ ಮೂರನೇ ದಾಳಿ ಇದಾಗಿದೆ. ಈ ಹಿಂದೆ, ಕ್ಯಾರಮ್ ಡೌನ್ಸ್‌ನಲ್ಲಿರುವ ಶಿವ ವಿಷ್ಣು ದೇವಾಲಯ ಮತ್ತು ಮಿಲ್ ಪಾರ್ಕ್‌ನಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರದಲ್ಲಿ ಹಿಂದೂಗಳು ಮತ್ತು ಭಾರತದ ವಿರುದ್ಧ ದ್ವೇಷದ ಸಂದೇಶಗಳನ್ನು ಹರಡಲಾಗಿತ್ತು. ಇದರಿಂದ ಆಸ್ಟೇಲಿಯಾದಲ್ಲಿರುವ ಭಾರತೀಯರಿಗೆ ಕಳವಳ ಉಂಟಾಗಿದೆ.

ಜನವರಿ 17ರಂದು ಕ್ಯಾರಮ್ ಡೌನ್ಸ್‌ನಲ್ಲಿರುವ ಹಿಂದೂ ದೇವಾಲಯವಾದ ಶಿವ ವಿಷ್ಣು ಮಂದಿರವನ್ನು ಗೀಚುಬರಹದಿಂದ ದಾಳಿ ನಡೆಸಲಾಗಿತ್ತು. ಈ ಘಟನೆಯು ಜನವರಿ 15-16 ರ ಮಧ್ಯರಾತ್ರಿಯ ಸಮಯದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.

Published On - 3:19 pm, Fri, 24 February 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ