AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಸಿಡ್ನಿಯಲ್ಲಿ ಪೊಲೀಸರ ಗುಂಡೇಟಿಗೆ ಭಾರತೀಯ ಪ್ರಜೆ ಬಲಿ

ಆಸ್ಟ್ರೇಲಿಯಾ(Australia)ದಲ್ಲಿ ಭಾರತದ ಪ್ರಜೆಯೊಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಸಿಡ್ನಿಯ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

Australia: ಸಿಡ್ನಿಯಲ್ಲಿ ಪೊಲೀಸರ ಗುಂಡೇಟಿಗೆ ಭಾರತೀಯ ಪ್ರಜೆ ಬಲಿ
ಆಸ್ಟ್ರೇಲಿಯಾ ಪೊಲೀಸ್
ನಯನಾ ರಾಜೀವ್
|

Updated on: Mar 01, 2023 | 8:02 AM

Share

ಆಸ್ಟ್ರೇಲಿಯಾ(Australia)ದಲ್ಲಿ ಭಾರತದ ಪ್ರಜೆಯೊಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಸಿಡ್ನಿಯ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಆತ ರೈಲ್ವೆ ನಿಲ್ದಾಣದಲ್ಲಿ ಕೆಲಸಗಾರರೊಬ್ಬರಿಗೆ ಚೂರಿಯಿಂದ ಇರಿದಿದ್ದ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಎಂದು ಹೇಳಲಾಗಿದೆ. ಭಾರತದ ಕಾನ್ಸುಲೇಟ್ ಜನರಲ್ ಈ ಸಂಬಂಧ ಆಸ್ಟ್ರೇಲಿಯಾದಿಂದ ಸಂಪೂರ್ಣ ವರದಿಯನ್ನು ಕೇಳಿದೆ.

ಮೃತನನ್ನು ಸೈಯದ್ ಅಹ್ಮದ್ ಎಂದು ಗುರುತಿಸಲಾಗಿದೆ, ಅವರು ತಮಿಳುನಾಡಿನ ನಿವಾಸಿ ಎಂದು ಗುರುತಿಸಲಾಗಿದೆ. ಮಂಗಳವಾರ ಸಿಡ್ನಿಯ ಆಬರ್ನ್ ರೈಲು ನಿಲ್ದಾಣದಲ್ಲಿ 28 ವರ್ಷದ ಕ್ಲೀನರ್ ಮೇಲೆ ಅಹ್ಮದ್ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ.

ಇದಾದ ಬಳಿಕ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ. ಅದೇ ಸಮಯದಲ್ಲಿ, ಪೊಲೀಸ್ ಅಧಿಕಾರಿ ಮೂರು ಗುಂಡುಗಳನ್ನು ಹಾರಿಸಿದರು, ಅದರಲ್ಲಿ ಎರಡು ಅಹ್ಮದ್ ಎದೆಗೆ ಬಿದ್ದಿತ್ತು.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ತಕ್ಷಣ ಆತನಿಗೆ ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರೂ ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ವರದಿಗಳ ಪ್ರಕಾರ, ಮೃತ ಭಾರತೀಯ ಪ್ರಜೆ ಬ್ರಿಡ್ಜಿಂಗ್ ವೀಸಾದಲ್ಲಿ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದ.

ಗುಂಡು ಹಾರಿಸುವುದನ್ನು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಇದು ನೋವಿನ ಸಂಗತಿ ಎಂದರು. ನಮ್ಮ ಪೊಲೀಸ್ ಠಾಣೆಯೊಂದರಲ್ಲಿ ಇದೊಂದು ಮಹತ್ವದ ಘಟನೆ. ಈ ಬಗ್ಗೆ ತನಿಖೆ ನಡೆಸಲು ಭಯೋತ್ಪಾದನಾ ನಿಗ್ರಹ ದಳದ ಸಹಾಯವನ್ನೂ ಪಡೆಯಲಾಗುವುದು ಎಂದಿದ್ದಾರೆ.

ಆಬರ್ನ್ ರೈಲು ನಿಲ್ದಾಣದಲ್ಲಿ ನಡೆದ ಚೂರಿ ಇರಿತ ಘಟನೆಯಲ್ಲಿ ಅಹ್ಮದ್ ಶಂಕಿತ ಎಂದು ಗುರುತಿಸಲಾಗಿದೆ ಎಂದು ಭಾರತೀಯ ಕಾನ್ಸುಲೇಟ್ ಜನರಲ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ