ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!

ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on:Jan 31, 2021 | 5:25 PM

ಆಸ್ಟ್ರೇಲಿಯಾದ ಪರ್ತ್​ನಲ್ಲಿ ಹೊಸದಾಗಿ ಒಂದು ಕೊರೊನಾ ಕೇಸ್​ ಪತ್ತೆ ಆಗಿದೆ. ಇದರಿಂದ ಆತಂಕಗೊಂಡಿರುವ ಅಲ್ಲಿನ ಸ್ಥಳೀಯ ಆಡಳಿತ ಐದು ದಿನ ಲಾಕ್​ಡೌನ್​ ಘೋಷಣೆ ಮಾಡಿದೆ. ಅಷ್ಟೇ ಅಲ್ಲ, ನಿಯಮ ಮೀರಿದವರಿಗೆ ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ್ದಾರೆ.

ಪರ್ತ್​ನಲ್ಲಿರುವ ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ. ಭಾನುವಾರದಿಂದಲೇ ಲಾಕ್​ಡೌನ್​ ನಿಯಮ ಜಾರಿಗೆ ಬಂದಿದೆ. ಹೀಗಾಗಿ, ಮುಂಜಾನೆ ವ್ಯಾಯಾಮ, ಆರೋಗ್ಯ ಸೇವೆ, ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮಾತ್ರ ಜನರು ಹೊರಗೆ ಬರಹುದಾಗಿದೆ. ಇನ್ನು, ಪರ್ತ್​​ನ ಶಾಲೆಗಳಿಗೆ ಐದು ದಿನ ಬರದಂತೆ ಮಕ್ಕಳಿಗೆ ಸೂಚಿಸಲಾಗಿದ್ದು, ಆನ್​ಲೈನ್​ ಮೂಲಕ ತರಗತಿ ನಡೆಯಲಿದೆ.

ಕೊರೊನಾ ವೈರಸ್​ ಹರಡದಂತೆ ನೋಡಿಕೊಳ್ಳಲು ಪರ್ತ್​​ನಲ್ಲಿ ಈ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ನಿಟ್ಟಿನಲ್ಲೂ ಅಧಿಕಾರಿಗಳು ಗಮನ ಹರಿಸುತ್ತಿದ್ದಾರೆ.

ಆಸ್ಟ್ರೇಲಿಯಾದ ಜನಸಂಖ್ಯೆ ಕೇವಲ 2.5 ಕೋಟಿ. ಈ ಪೈಕಿ 28,800 ಜನರಿಗೆ ಕೊರೊನಾ ದೃಢವಾಗಿದೆ. 909 ಜನರು ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕಳೆದ ಬಾರಿ ಅಕ್ಟೋಬರ್​ನಲ್ಲಿ ನಡೆಯಬೇಕಿದ್ದ ಟಿ-20 ವಿಶ್ವಕಪ್​ ಮುಂದೂಡಲಾಗಿತ್ತು.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

Published On - 5:24 pm, Sun, 31 January 21

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು