Covaxin Vaccine: ಕೊವ್ಯಾಕ್ಸಿನ್ ಲಸಿಕೆಯನ್ನು ಅಂಗೀಕರಿಸಿದ ಆಸ್ಟ್ರೇಲಿಯಾ

Covid19 Vaccine: ಇದರ ಜೊತೆಗೆ ಭಾರತದ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಹಾಗೂ ಕೊರೊನಾವ್ಯಾಕ್ ಮತ್ತು BBIBP- CorV ಲಸಿಕೆಗಳು ಆಸ್ಟ್ರೇಲಿಯಾದಲ್ಲಿ ಅನುಮೋದನೆ ಪಡೆದುಕೊಂಡಿದೆ.

Covaxin Vaccine: ಕೊವ್ಯಾಕ್ಸಿನ್ ಲಸಿಕೆಯನ್ನು ಅಂಗೀಕರಿಸಿದ ಆಸ್ಟ್ರೇಲಿಯಾ
ಕೊವ್ಯಾಕ್ಸಿನ್ ಲಸಿಕೆ
Follow us
TV9 Web
| Updated By: ganapathi bhat

Updated on:Nov 01, 2021 | 6:26 PM

ದೆಹಲಿ: ಆಸ್ಟ್ರೇಲಿಯಾದ ಥೆರಪೆಟಿಕ್ ಗೂಡ್ಸ್ ಅಡ್ಮಿನಿಸ್ಟ್ರೇಷನ್ (ಟಿಜಿಎ) ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ ಹೆಸರಿನ ಕೊವಿಡ್ 19 ವಿರುದ್ಧದ ಲಸಿಕೆಯನ್ನು ಅಂಗೀಕರಿಸಿದೆ. ಈ ಲಸಿಕೆಯು ಆಸ್ಟ್ರೇಲಿಯಾದಲ್ಲಿ ರಿಜಿಸ್ಟರ್ ಆಗಿಲ್ಲ. ಆದರೆ ಗಣನೀಯ ಪ್ರಮಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ಈ ಲಸಿಕೆಯನ್ನು ಹಾಕಿಸಿಕೊಂಡಿರುವುದನ್ನು ಗುರುತಿಸಿ ಈ ನಿರ್ಧಾರ ಕೈಗೊಂಡಿದೆ.

ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಜೊತೆಗೆ ಚೀನಾದ BBIBP- CorV ಕೂಡ ಆಸ್ಟ್ರೇಲಿಯಾದ ಪಟ್ಟಿ ಸೇರಿಕೊಂಡಿದೆ. ಟಿಜಿಎಯು ಇತ್ತೀಚೆಗಿನ ವಾರದಲ್ಲಿ ಕಂಡುಕೊಂಡ ಮಾಹಿತಿಯನ್ನು ಮತ್ತು ಅಂಕಿ ಅಂಶಗಳನ್ನು ಹೇಳಿದೆ. ಅದರಂತೆ, ಮೇಲೆ ಉಲ್ಲೇಖಿಸಿರುವ ಲಸಿಕೆಗಳು ಕೊರೊನಾ ಹರಡುವಿಕೆಯನ್ನು ತಡೆಗಟ್ಟುತ್ತವೆ ಎಂದು ತಿಳಿಸಿದೆ.

ಇದರ ಜೊತೆಗೆ ಭಾರತದ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಹಾಗೂ ಕೊರೊನಾವ್ಯಾಕ್ ಮತ್ತು BBIBP- CorV ಲಸಿಕೆಗಳು ಆಸ್ಟ್ರೇಲಿಯಾದಲ್ಲಿ ಅನುಮೋದನೆ ಪಡೆದುಕೊಂಡಿದೆ. ಆಸ್ಟ್ರೇಲಿಯಾದಲ್ಲಿ ಏಷ್ಯಾದ ಈ ಉಭಯ ದೇಶಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು, ಕೆಲಸಗಾರರು ಬಹಳಷ್ಟು ಸಂಖ್ಯೆಯಲ್ಲಿ ಇದ್ದಾರೆ.

ಕೊವ್ಯಾಕ್ಸಿನ್ ಭಾರತದ ಮೊದಲ ಸ್ವದೇಶಿ ಕೊವಿಡ್ 19 ಲಸಿಕೆ ಆಗಿದೆ. ಇದನ್ನು ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದೆ. ಐಸಿಎಮ್​ಆರ್ ಮತ್ತು ಎನ್​ಐವಿ ಜೊತೆಗೂಡಿ ಈ ಲಸಿಕೆ ಸಿದ್ಧಪಡಿಸಲಾಗಿದೆ. ಮಾರಿಷಸ್, ಓಮನ್, ಫಿಲಿಫೈನ್ಸ್, ನೇಪಾಳ, ಮೆಕ್ಸಿಕೊ, ಇರಾನ್, ಶ್ರೀಲಂಕಾ, ಗ್ರೀಸ್, ಎಸ್ಟೋನಿಯಾ ಮತ್ತು ಜಿಂಬಾಬ್ವೆ ಈ ಲಸಿಕೆಗೆ ಅನುಮೋದನೆ ಸೂಚಿಸಿವೆ.

ಇದನ್ನೂ ಓದಿ: ಝೈಡಸ್ ಕ್ಯಾಡಿಲಾ ಕೊವಿಡ್ ಲಸಿಕೆ ಬೆಲೆಯನ್ನು ₹265ಗೆ ಇಳಿಸಲು ಒಪ್ಪಿಗೆ, ಶೀಘ್ರದಲ್ಲೇ ಅಂತಿಮ ನಿರ್ಧಾರ: ವರದಿ

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

Published On - 6:02 pm, Mon, 1 November 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್