AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಅಧಿಕೃತ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಅವರನ್ನು ಇಂದು ಸಂಜೆ ಬೇರೆಡೆ ಸ್ಥಳಾಂತರಿಸಲಾಯಿತು. ಆಸ್ಟ್ರೇಲಿಯಾದ ಪ್ರಧಾನಿಯನ್ನು ದಿ ಲಾಡ್ಜ್‌ನಿಂದ ಹೊರಗೆ ಕರೆದೊಯ್ಯಲಾಯಿತು. ಆವರಣದ ಸಂಪೂರ್ಣ ಶೋಧ ಪೂರ್ಣಗೊಂಡ ನಂತರ ರಾತ್ರಿ 9 ಗಂಟೆಯ ನಂತರ ಅವರಿಗೆ ಹಿಂತಿರುಗಲು ಅವಕಾಶ ನೀಡಲಾಯಿತು.

ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ
Anthony Albanese
ಸುಷ್ಮಾ ಚಕ್ರೆ
|

Updated on: Feb 24, 2026 | 9:33 PM

Share

ನವದೆಹಲಿ, ಫೆಬ್ರವರಿ 24: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರನ್ನು ಅವರ ಅಧಿಕೃತ ನಿವಾಸವಾದ ಕ್ಯಾನ್‌ಬೆರಾದಿಂದ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ 62 ವರ್ಷದ ಪ್ರಧಾನಿ ಅಲ್ಬನೀಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಯಿತು. ಅವರ ಅಧಿಕೃತ ನಿವಾಸದಲ್ಲಿ ಶೋಧ ಪೂರ್ಣಗೊಂಡ ನಂತರ ಅವರು ಮತ್ತೆ ತಮ್ಮ ನಿವಾಸಕ್ಕೆ ಹಿಂತಿರುಗಿದರು.

ಸಂಸತ್ ಭವನದ ಬಳಿ ಇರುವ ಪ್ರಧಾನಿ ನಿವಾಸದ ಬಳಿ ನಡೆದಿರುವ ಭದ್ರತಾ ಬೆದರಿಕೆಯ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಆಸ್ಟ್ರೇಲಿಯಾದ ಫೆಡರಲ್ ಪೊಲೀಸ್ ವಕ್ತಾರರು ದೃಢಪಡಿಸಿದ್ದಾರೆ. “ಸಂಪೂರ್ಣ ಶೋಧ ನಡೆಸಲಾಯಿತು. ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ. ಸಾರ್ವಜನಿಕ ಸುರಕ್ಷತೆಗೆ ಯಾವುದೇ ಬೆದರಿಕೆ ಇಲ್ಲ. ಸೂಕ್ತ ಸಮಯದಲ್ಲಿ ಹೆಚ್ಚಿನ ಮಾಹಿತಿಯನ್ನು ಒದಗಿಸಲಾಗುವುದು” ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ: “ನೀನು ಭಾರತದ ನಾಯಿ”: ಆಸ್ಟ್ರೇಲಿಯಾದಲ್ಲಿ ಜನಾಂಗೀಯವಾಗಿ ನಿಂದಿಸಿ, ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ

ಇಂದು ಬೆಳಗ್ಗೆ ಅಲ್ಬನೀಸ್ ತಮ್ಮ ನಿವಾಸದಲ್ಲಿ ಪತ್ರಕರ್ತರೊಬ್ಬರೊಂದಿಗೆ 1 ಗಂಟೆಯ ಸಂದರ್ಶನವನ್ನು ರೆಕಾರ್ಡ್ ಮಾಡಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಬಾಂಬ್ ಬೆದರಿಕೆ ಬಂದಿತ್ತು. ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮತ್ತು ಹಲವಾರು ಫೆಡರಲ್ ಸಂಸದರು ಇತ್ತೀಚಿನ ತಿಂಗಳುಗಳಲ್ಲಿ ಹಲವಾರು ಭದ್ರತಾ ಬೆದರಿಕೆಗಳನ್ನು ಎದುರಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ