AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಹಾನಿಯಾಗಿದೆ; ಅಮೆರಿಕದ ದಾಳಿಯನ್ನು ಮೊದಲ ಬಾರಿ ಒಪ್ಪಿಕೊಂಡ ಇರಾನ್

ಅಮೆರಿಕ ಇರಾನ್​​ನ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿತ್ತು. ಅದಾದ ನಂತರ ಇಸ್ರೇಲ್ ಮತ್ತು ಇರಾನ್ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಮಧ್ಯಸ್ಥಿಕೆ ವಹಿಸಿ ಕದನವಿರಾಮ ಒಪ್ಪಂದ ಮಾಡಿಸಿದ್ದರು. ಇದೀಗ ಇರಾನ್ ಅಮೆರಿಕದ ದಾಳಿಯಿಂದ ತನ್ನ ದೇಶದ ಪರಮಾಣು ತಾಣಗಳಿಗೆ ಆಗಿರುವ ಹಾನಿಯನ್ನು ಮೊದಲ ಬಾರಿಗೆ ಒಪ್ಪಿಕೊಂಡಿದೆ.

ತೀವ್ರ ಹಾನಿಯಾಗಿದೆ; ಅಮೆರಿಕದ ದಾಳಿಯನ್ನು ಮೊದಲ ಬಾರಿ ಒಪ್ಪಿಕೊಂಡ ಇರಾನ್
Us Attack On Iran
ಸುಷ್ಮಾ ಚಕ್ರೆ
|

Updated on: Jun 25, 2025 | 9:11 PM

Share

ನವದೆಹಲಿ, ಜೂನ್ 25: ಇರಾನ್ ಮೇಲೆ ಅಮೆರಿಕ (United States) ದಾಳಿ ನಡೆಸಿದ್ದನ್ನು ಇರಾನ್ ಇದೀಗ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಅಮೆರಿಕದ ವೈಮಾನಿಕ ದಾಳಿಯ ನಂತರ ಮೊದಲ ಬಾರಿಗೆ ಇರಾನ್ (Iran) ತನ್ನ ಪರಮಾಣು ಸೌಲಭ್ಯಗಳಿಗೆ ಆದ ಭಾರೀ ಹಾನಿಯನ್ನು ಅಧಿಕೃತವಾಗಿ ಒಪ್ಪಿಕೊಂಡಿದೆ. ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದರು. ಆದರೆ ಬಂಕರ್ ಬಸ್ಟರ್ ಬಾಂಬ್‌ಗಳನ್ನು ಬಳಸಿಕೊಂಡು ಅಮೆರಿಕದ ಬಿ -2 ಬಾಂಬರ್‌ಗಳು ಭಾನುವಾರ ನಡೆಸಿದ ದಾಳಿಗಳು ಮಹತ್ವದ್ದಾಗಿವೆ, ಅದರಿಂದ ಭಾರೀ ಹಾನಿಯಾಗಿದೆ ಎಂದು ಅವರು ಒಪ್ಪಿಕೊಂಡರು. ಬಂಕರ್-ಬಸ್ಟರ್ ಬಾಂಬ್‌ಗಳನ್ನು ಬಳಸಿಕೊಂಡು ಇರಾನಿನ 3 ಪ್ರಮುಖ ಪರಮಾಣು ತಾಣಗಳನ್ನು ಗುರಿಯಾಗಿಸಿಕೊಂಡ ಯುಎಸ್ ಬಿ -2 ಬಾಂಬರ್ ದಾಳಿಗಳ ಪರಿಣಾಮದ ಬಗ್ಗೆ ಇರಾನ್‌ನ ಮೊದಲ ಬಾರಿ ದೃಢೀಕರಣವನ್ನು ನೀಡಿದೆ.

ಈ ಬಗ್ಗೆ ಅಲ್ ಜಜೀರಾ ಜೊತೆ ಮಾತನಾಡಿದ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘಾಯ್, “ನಮ್ಮ ಪರಮಾಣು ಸ್ಥಾಪನೆಗಳು ತೀವ್ರವಾಗಿ ಹಾನಿಗೊಳಗಾಗಿವೆ, ಅದು ಸತ್ಯ. ಆದರೆ, ಹೆಚ್ಚಿನ ವಿವರಗಳನ್ನು ಸದ್ಯಕ್ಕೆ ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ. ಇರಾನ್ ಮಾತುಕತೆಗಳನ್ನು ಕೈಬಿಟ್ಟಿಲ್ಲ ಎಂದು ಹೇಳಿರುವ ಎಸ್ಮಾಯಿಲ್ ಬಘಾಯ್, ಯುಎಸ್ ವೈಮಾನಿಕ ದಾಳಿಗಳನ್ನು ಅಂತಾರಾಷ್ಟ್ರೀಯ ಕಾನೂನು, ನೀತಿಶಾಸ್ತ್ರ ಮತ್ತು ರಾಜತಾಂತ್ರಿಕತೆಗೆ ಆದ ಹಾನಿಕರ ಹೊಡೆತ ಎಂದು ಖಂಡಿಸಿದರು. ಅಮೆರಿಕದ ಅಧ್ಯಕ್ಷರು ಸಂವಾದ ಮತ್ತು ರಾಜತಾಂತ್ರಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅದರ ಜೊತೆಗೆ ಅವರು ಆಕ್ರಮಣಕಾರಿ ಕೃತ್ಯಗಳನ್ನು ಮಾಡುತ್ತಿದ್ದಾರೆ. ಈ ವಿರೋಧಾಭಾಸಗಳು ಹೆಚ್ಚು ಹೆಚ್ಚು ಸಮಸ್ಯೆಗಳನ್ನು ಸೃಷ್ಟಿಸಿವೆ” ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಕ್ಕೆ ಇರಾನ್​ನ ಸಂಪೂರ್ಣ ಪರಮಾಣು ಸಾಮರ್ಥ್ಯ ನಾಶಮಾಡಲು ಸಾಧ್ಯವಾಗಿಲ್ಲ: ಗುಪ್ತಚರ ವರದಿ

ಇದನ್ನೂ ಓದಿ
Image
ಟ್ರಂಪ್​ಗೆ ಶಾಂತಿ ಪುರಸ್ಕಾರ ಘೋಷಿಸಿ, ಈಗ ಪ್ರತಿಭಟನೆ ಮಾಡಿದ ಪಾಕಿಸ್ತಾನ
Image
ಇರಾನ್ ಮೇಲೆ ದಾಳಿ ನಡೆಸಿ ಸುಮ್ಮನಾದ ಟ್ರಂಪ್, ರಷ್ಯಾಗೆ ಹೊರಟ ಅಬ್ಬಾಸ್
Image
ಅಮೆರಿಕ-ಇರಾನ್ ನಡುವೆ ಹೆಚ್ಚಿದ ಉದ್ವಿಗ್ನತೆ, ರಷ್ಯಾದ ಮೊರೆ ಹೋದ ಇರಾನ್
Image
ಅಮೆರಿಕ ದೊಡ್ಡ ತಪ್ಪು ಮಾಡಿದೆ, ತಕ್ಕ ಶಿಕ್ಷೆ ಅನುಭವಿಸಲಿದೆ: ಖಮೇನಿ

ಇರಾನ್‌ನ ಪರಮಾಣು ಮೂಲಸೌಕರ್ಯದ ಮೇಲಿನ ಅಮೆರಿಕ ವೈಮಾನಿಕ ದಾಳಿಯಲ್ಲಿ 125 ಮಿಲಿಟರಿ ವಿಮಾನಗಳು ಸೇರಿದ್ದವು. ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಎಂಬ ಮೂರು ಪ್ರಮುಖ ಸೌಲಭ್ಯಗಳನ್ನು ಹೊಡೆದುರುಳಿಸಲಾಗಿತ್ತು. ನಂತರ ಉಪಗ್ರಹ ಚಿತ್ರಣವು ಫೋರ್ಡೋದಲ್ಲಿನ ಎರಡು ಪ್ರವೇಶ ಬಿಂದುಗಳ ಸುತ್ತಲೂ 6 ಹೊಸ ಕುಳಿಗಳನ್ನು ಬಹಿರಂಗಪಡಿಸಿತು. ಬಂಕರ್-ಬಸ್ಟರ್ ಬಾಂಬ್‌ಗಳ ಬಳಕೆಯ ಕಾರಣದಿಂದಾಗಿ ಇಸ್ಫಹಾನ್‌ನಲ್ಲಿ ಇದೇ ರೀತಿಯ ಪ್ರಭಾವದ ಗುರುತುಗಳಿವೆ. ಇದರ ನಂತರ, ಡೊನಾಲ್ಡ್ ಟ್ರಂಪ್ ಈ ದಾಳಿಗಳನ್ನು “ಅದ್ಭುತ ಮಿಲಿಟರಿ ಯಶಸ್ಸು” ಎಂದು ಶ್ಲಾಘಿಸಿದರು. ಆದರೂ ಪೆಂಟಗನ್‌ನ ರಕ್ಷಣಾ ಗುಪ್ತಚರ ಸಂಸ್ಥೆ (DIA) ಆ ಹೇಳಿಕೆಯ ಮೇಲೆ ಅನುಮಾನ ವ್ಯಕ್ತಪಡಿಸಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್