Balakot Airstrike: ಬಾಲಾಕೋಟ್ ದಾಳಿ ಬಳಿಕ ಪಾಕಿಸ್ತಾನವು ಪ್ರತೀಕಾರವಾಗಿ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ಮುಂದಾಗಿತ್ತು: ಮೈಕ್ ಪಾಂಪಿಯೋ

2019ರಲ್ಲಿ ಬಾಲಾಕೋಟ್​ನಲ್ಲಿ ನಡೆದ ಏರ್​ ಸ್ಟ್ರೈಕ್ ಬಳಿಕ ಪಾಕಿಸ್ತಾನವು ಭಾರತದ ಮೇಲೆ ದಾಳಿ ನಡೆಸಲು ಅಣ್ವಸ್ತ್ರ ಸಿದ್ಧಪಡಿಸಿತ್ತು ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.

Balakot Airstrike: ಬಾಲಾಕೋಟ್ ದಾಳಿ ಬಳಿಕ ಪಾಕಿಸ್ತಾನವು ಪ್ರತೀಕಾರವಾಗಿ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ಮುಂದಾಗಿತ್ತು: ಮೈಕ್ ಪಾಂಪಿಯೋ
ಮೈಕ್ ಪಾಂಪಿಯೋ
Follow us
ನಯನಾ ರಾಜೀವ್
|

Updated on: Jan 25, 2023 | 11:43 AM

2019ರಲ್ಲಿ ಬಾಲಾಕೋಟ್​ನಲ್ಲಿ ನಡೆದ ಏರ್​ ಸ್ಟ್ರೈಕ್ ಬಳಿಕ ಪಾಕಿಸ್ತಾನವು ಭಾರತದ ಮೇಲೆ ದಾಳಿ ನಡೆಸಲು ಅಣ್ವಸ್ತ್ರ ಸಿದ್ಧಪಡಿಸಿತ್ತು ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಅವರು ಬರೆದಿರುವ ‘Never Give an Inch’ ಎನ್ನುವ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ. ಬಾಲಾಕೋಟ್ ದಾಳಿಯ ನಂತರ ಪಾಕಿಸ್ತಾನವು ಭಾರತದ ಮೇಲೆ ಪರಮಾಣು ದಾಳಿಗೆ ತಯಾರಿ ನಡೆಸುತ್ತಿದೆ ಎಂದು ಆ ಸಮಯದಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದರು ಎಂದು ಮೈಕ್ ಪಾಂಪಿಯೋ ಹೇಳಿದ್ದಾರೆ. ಭಾರತವೂ ಅದಕ್ಕೆ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ ಎಂದಿದ್ದರು.

ಮಂಗಳವಾರ ಬಿಡುಗಡೆಯಾದ ‘ನೆವರ್ ಗಿವ್ ಆನ್ ಇಂಚ್: ಫೈಟಿಂಗ್ ಫಾರ್ ದಿ ಅಮೇರಿಕಾ ಐ ಲವ್’ ಪುಸ್ತಕದಲ್ಲಿ ಮೈಕ್ ಪಾಂಪಿಯೊ ಅವರು ಆ ದಿನ ಯುಎಸ್ ಮತ್ತು ಉತ್ತರ ಕೊರಿಯಾ ನಡುವಿನ ಶೃಂಗಸಭೆಗಾಗಿ ಹನೋಯ್‌ನಲ್ಲಿದ್ದರು. ರಾತ್ರಿಯಿಡೀ, ಅವರು ಮತ್ತು ಅವರ ತಂಡವು ಭಾರತ ಮತ್ತು ಪಾಕಿಸ್ತಾನದ ಸರ್ಕಾರಗಳೊಂದಿಗೆ ಎರಡು ದೇಶಗಳ ನಡುವೆ ಪರಮಾಣು ಯುದ್ಧವನ್ನು ತಡೆಯಲು ಮಾತುಕತೆ ನಡೆಸಿತು.

ಪಾಂಪಿಯೋ ಪ್ರಕಾರ 2019ರ ಫೆಬ್ರವರಿ 27-28ರಂದು ನಡುವೆ ಬೆಳವಣಿಗೆ ಇದು. ಅವರು ಅಮೆರಿಕ-ಉತ್ತರ ಕೊರಿಯಾ ಶೃಂಗಸಭೆಗಾಗಿ ಹನೋಯಿಯಲ್ಲಿದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು.

ಈ ಬಿಕ್ಕಟ್ಟನ್ನು ಶಮನಗೊಳಿಸಲು ರಾತ್ರಿಯಿಡೀ ನವದೆಹಲಿ ಮತ್ತು ಇಸ್ಲಾಮಾಬಾದ್ ಎರಡೂ ಕಡೆಗಳಲ್ಲಿ ಕಸರತ್ತು ನಡೆದಿದ್ದವು. ಫೆಬ್ರವರಿ 2019ರಲ್ಲಿ ಭಾರತ-ಪಾಕಿಸ್ತಾನದ ಪೈಪೋಟಿಯು ಪರಮಾಣು ದಹನಕ್ಕೆ ಹತ್ತಿರವಾಗುತ್ತಿತ್ತು ಎಂಬುದು ಜಗತ್ತಿಗೆ ತಿಳಿದಿರಲಿಲ್ಲ.

2019ರ ಫೆಬ್ರವರಿಯಲ್ಲಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಪುಲ್ವಾಮಾದಲ್ಲಿ ದಾಳಿ ನಡೆಸಿದ್ದ ಕಾರಣ ಭಾರತ 40 ಸಿಆರ್​ಪಿಎಫ್ ಯೋಧರನ್ನು ಕಳೆದುಕೊಂಡಿತ್ತು. ಪಾಂಪಿಯೋ ಅವರ ಹೇಳಿಕೆಗೆ ಭಾರತದ ವಿದೇಶಾಂಗ ಸಚಿವಾಲಯ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಈ ಭಯಾನಕ ಯುದ್ಧವನ್ನು ತಪ್ಪಿಸಲು ನಾವು ಆ ರಾತ್ರಿ ಮಾಡಿದ್ದನ್ನು ಬೇರೆ ಯಾವ ರಾಷ್ಟ್ರವೂ ಮಾಡಲಾರದು. ಎಲ್ಲಾ ರಾಜತಾಂತ್ರಿಕತೆಯಂತೆ ಸಮಸ್ಯೆಯ ಮೇಲೆ ಕೆಲಸ ಮಾಡುವ ಜನರು ಬಹಳ ಮುಖ್ಯ ಎಂದಿದ್ದಾರೆ.

ಪುಲ್ವಾಮಾ ಭಯೋತ್ಪಾಸಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಯುದ್ಧ ವಿಮಾನಗಳು ಪಾಕಿಸ್ತಾನದ ಬಾಲಾಕೋಟ್​ನಲ್ಲಿರುವ ಜೈಶ್​ ಎ ಮೊಹಮ್ಮದ್ ಭಯೋತ್ಪಾದಕ ತರಬೇತಿ ಕೇಂದ್ರವನ್ನು ಧ್ವಂಸಗೊಳಿಸಿದ್ದವು. ಈ ಸರ್ಜಿಕಲ್ ಸ್ಟ್ರೈಕ್ ಬಳಿಕ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ಪಾಕಿಸ್ತಾನ ಹೊಂಚು ಹಾಕಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್