AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baltimore Bridge Collapse: ಬಾಲ್ಟಿಮೋರ್​ನ ಅತಿ ಉದ್ದದ ಸೇತುವೆ ಕುಸಿತ

ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಸೇತುವೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.

Baltimore Bridge Collapse: ಬಾಲ್ಟಿಮೋರ್​ನ ಅತಿ ಉದ್ದದ ಸೇತುವೆ ಕುಸಿತ
ಸೇತುವೆ ಕುಸಿತ
ನಯನಾ ರಾಜೀವ್
|

Updated on:Mar 26, 2024 | 2:27 PM

Share

ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಸೇತುವೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.

ಸೇತುವೆ ಕುಸಿದಾಗ ಸುಮಾರು ಏಳು ಮಂದಿ ಕಟ್ಟಡ ಕಾರ್ಮಿಕರು ಮತ್ತು ಮೂರ್ನಾಲ್ಕು ನಾಗರಿಕ ವಾಹನಗಳು ಸೇತುವೆ ಮೇಲೆ ಇದ್ದವು ಎಂದು ಹೇಳಲಾಗಿದೆ. ಘಟನೆಯ ನಂತರ ಸೇತುವೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಅಧಿಕಾರಿಗಳು ಎರಡೂ ದಿಕ್ಕುಗಳಲ್ಲಿ ಎಲ್ಲಾ ಲೇನ್‌ಗಳನ್ನು ಮುಚ್ಚಿದ್ದಾರೆ.

ಸೇತುವೆ

ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವುನೋವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 47 ವರ್ಷಗಳಷ್ಟು ಹಳೆಯದಾದ ಸೇತುವೆ ಇದಾಗಿದೆ.

ವರದಿಗಳ ಪ್ರಕಾರ ಸೇತುವೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಹಡಗು ಕಂಟೈನರ್ ಹಡಗು. ‘ಡಾಲಿ’ ಹೆಸರಿನ ಈ ಹಡಗು ಬಾಲ್ಟಿಮೋರ್‌ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಹೋಗುತ್ತಿತ್ತು. ರಾತ್ರಿ 1:30ರ ಸುಮಾರಿಗೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಇದರ ನಂತರ ಹಡಗು ನೀರಿನಲ್ಲಿ ಮುಳುಗಿತು ಮತ್ತು ಸೇತುವೆಯೂ ಮುರಿದು ನದಿಗೆ ಬಿದ್ದಿತು.

ಈ ಸೇತುವೆಯನ್ನು ಬಾಲ್ಟಿಮೋರ್ ಬಂದರಿನಲ್ಲಿ ಪಟಾಪ್ಸ್ಕೋ ನದಿಯ ಮೇಲೆ ನಿರ್ಮಿಸಲಾಗಿದೆ. ಸುಮಾರು 3 ಕಿಲೋಮೀಟರ್ ಉದ್ದದ ಈ ಸೇತುವೆಯ ನಿರ್ಮಾಣವು 1972 ರಲ್ಲಿ ಪ್ರಾರಂಭವಾಯಿತು ಮತ್ತು ಸೇತುವೆಯನ್ನು 1977 ರಲ್ಲಿ ಸಂಚಾರಕ್ಕೆ ತೆರೆಯಲಾಯಿತು. ಪ್ರತಿ ವರ್ಷ ಸರಾಸರಿ 1.1 ಕೋಟಿ ವಾಹನಗಳು ಈ ಸೇತುವೆಯ ಮೂಲಕ ಹಾದು ಹೋಗುತ್ತವೆ. ಈ ಸೇತುವೆಯನ್ನು ಕೀ ಸೇತುವೆ ಎಂದೂ ಕರೆಯಲಾಗುತ್ತಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:46 pm, Tue, 26 March 24

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ