ಬಾಂಗ್ಲಾದೇಶ: ಹೊತ್ತಿ ಉರಿದ ಕಂಟೈನರ್ ಡಿಪೋ, 16 ಮಂದಿ ಸಾವು, 450 ಮಂದಿಗೆ ಗಂಭೀರ ಗಾಯ
Fire At Container Depot:ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 16 ಮಂದಿ ಮೃತಪಟ್ಟು, 450ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 16 ಮಂದಿ ಮೃತಪಟ್ಟು, 450ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದ್ದು, ಶೇ.60-90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ದೇಶದ ಪ್ರಮುಖ ಬಂದರು ಚಿತ್ತಗಾಂಗ್‌ನ ಹೊರಗೆ 40 ಕಿಲೋಮೀಟರ್ (25 ಮೈಲಿ) ದೂರದಲ್ಲಿರುವ ದೇಶೀಯ ಕಂಟೇನರ್ ಸಂಗ್ರಹಣಾ ಘಟಕದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಖಾಸಗಿ ಗೋದಾಮಿನಲ್ಲಿದ್ದ ಕೆಲವು ಕಂಟೈನರ್ ಗಳಲ್ಲಿ ಹೈಡ್ರೋಜನ್ ಪೆರಾಕ್ಸೈಡ್ ಸೇರಿದಂತೆ ರಾಸಾಯನಿಕಗಳಿದ್ದವು ಎನ್ನಲಾಗಿದೆ. ಅಪಘಾತದ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಉಪಝಿಲಾದ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಪ್ರಾಥಮಿಕ ತನಿಖೆಯ ಪ್ರಕಾರ, ಕಂಟೈನರ್ ಡಿಪೋದಲ್ಲಿ ರಾಸಾಯನಿಕಗಳಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆ (ಸಿಎಂಸಿಎಚ್) ಪೊಲೀಸ್ ಔಟ್‌ಪೋಸ್ಟ್ ಸಬ್-ಇನ್‌ಸ್ಪೆಕ್ಟರ್ (ಎಸ್‌ಐ), ನೂರುಲ್ ಆಲಂ ಅವರು ಹೇಳಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯೂ ಲಘುವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ವೀದೇಶಕ್ಕೆ ಸಂಬಂಧಿಸಿದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ