ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ ವಿರೋಧಿಸಿ ಪ್ರತಿಭಟನೆ; 30 ಜನರ ಬಂಧನ

ಮುಸ್ಲಿಂ ರಾಷ್ಟ್ರದಲ್ಲಿ ಹಿಂದೂಗಳಿಗೆ ಭದ್ರತೆಗಾಗಿ ರ್ಯಾಲಿಗಳನ್ನು ಮುನ್ನಡೆಸುತ್ತಿದ್ದ ಪ್ರಮುಖ ಬಾಂಗ್ಲಾದೇಶದ ಹಿಂದೂ ನಾಯಕನನ್ನು ಮಂಗಳವಾರ ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದೆ. ಇಸ್ಕಾನ್ ಸನ್ಯಾಸಿಯಾದ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಭಾರತವೂ ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಹಿಂದೂಗಳ ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿ, ದಾಳಿ ಮಾಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆರೋಪಿಸಿದೆ.

ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ ವಿರೋಧಿಸಿ ಪ್ರತಿಭಟನೆ; 30 ಜನರ ಬಂಧನ
ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ ವಿರೋಧಿಸಿ ಪ್ರತಿಭಟನೆ
Follow us
ಸುಷ್ಮಾ ಚಕ್ರೆ
|

Updated on: Nov 27, 2024 | 8:53 PM

ನವದೆಹಲಿ: ಬಾಂಗ್ಲಾದೇಶದ ಚಟ್ಟೋಗ್ರಾಮ್ ನಗರದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಬಾಂಗ್ಲಾದೇಶದ ಸಮ್ಮಿಲಿತಾ ಸನಾತನಿ ಜಾಗರಣ್ ಜೋಟೆಯ ವಕ್ತಾರರೂ ಆಗಿರುವ ಚಿನ್ಮಯ್ ಕೃಷ್ಣ ದಾಸ್ ಅವರ ಅನುಯಾಯಿಗಳು ನಡೆಸಿದ ಪ್ರತಿಭಟನೆಯಲ್ಲಿ ಮಂಗಳವಾರ ಸಹಾಯಕ ಸರ್ಕಾರಿ ಪ್ರಾಸಿಕ್ಯೂಟರ್ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನಿಷ್ಠ 30 ಶಂಕಿತರನ್ನು ಬಂಧಿಸಲಾಗಿದೆ.

ದೇಶದಲ್ಲಿ ಹಿಂದೂ ಸಮುದಾಯದ ಜನರಿಗೆ “ಶಾಂತಿಯುತ ಸಹಬಾಳ್ವೆ”ಯನ್ನು ಬೆಳೆಸಲು ಬಾಂಗ್ಲಾದೇಶ ಸರ್ಕಾರಕ್ಕೆ ಇಂಟರ್​ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಇಂದು ಮನವಿ ಮಾಡಿದೆ. ಪ್ರಮುಖ ಸಮುದಾಯದ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಇಸ್ಕಾನ್ ಬಲವಾಗಿ ಖಂಡಿಸಿದೆ. ಚಿನ್ಮಯ್ ಕೃಷ್ಣ ದಾಸ್ ಅವರು ಸೋಮವಾರ ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಚಟ್ಟೋಗ್ರಾಮ್ಗೆ ತೆರಳಲು ಹೊರಟಿದ್ದಾಗ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಇಸ್ಕಾನ್ ಉಗ್ರ ಸಂಘಟನೆಯೆಂದು ಘೋಷಿಸಿದ ಬಾಂಗ್ಲಾದೇಶ!

ಚಿನ್ಮಯ್ ದಾಸ್ ಅವರು ಸೋಮವಾರ ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಟ್ಟೋಗ್ರಾಮ್‌ಗೆ ರ್ಯಾಲಿಯಲ್ಲಿ ಸೇರಲು ಹೊರಟಿದ್ದಾಗ ಅವರನ್ನು ಬಂಧಿಸಲಾಯಿತು. ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಚಿನ್ಮಯ್ ದಾಸ್​ ಅವರ ಬಂಧನ ಮತ್ತು ಜಾಮೀನು ನಿರಾಕರಣೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದೆ. “ಈ ಘಟನೆಯು ಬಾಂಗ್ಲಾದೇಶದಲ್ಲಿ ಉಗ್ರಗಾಮಿ ಶಕ್ತಿಗಳಿಂದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ಅನೇಕ ದಾಳಿಗಳನ್ನು ಅನುಸರಿಸುತ್ತದೆ” ಎಂದು ಅದು ಹೇಳಿದೆ. ಅಲ್ಪಸಂಖ್ಯಾತರ ಮನೆಗಳು ಮತ್ತು ವ್ಯಾಪಾರ ಸಂಸ್ಥೆಗಳಿಗೆ ಬೆಂಕಿ ಹಚ್ಚುವುದು ಮತ್ತು ಲೂಟಿ ಮಾಡಲಾಗುತ್ತಿದೆ. ಜೊತೆಗೆ ದೇವರು ಮತ್ತು ದೇವಾಲಯಗಳನ್ನು ಅಪವಿತ್ರಗೊಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಬಾಂಗ್ಲಾದೇಶದ ಹಿಂದೂ ಪರ ವಕೀಲ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ

ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಪರಿಸ್ಥಿತಿಯ ಕಠೋರ ಪರಿಸ್ಥಿತಿಯನ್ನು ಮಹಮೂದ್ ಯೂನಸ್ ಚಿತ್ರಿಸಿದ್ದಾರೆ. ಹಿಂದೂ ಮತ್ತು ಬೌದ್ಧ ದೇವಾಲಯಗಳ ಮೇಲಿನ ದಾಳಿಗಳು ಆತಂಕಕಾರಿಯಾಗಿ ಆಗಾಗ ಆಗುತ್ತಿವೆ. ದೇಶದ ಪ್ರತಿಯೊಂದು ಮೂಲೆಯು ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಹಿಂದೂಗಳ ವಿರುದ್ಧ ಕೆಲವು ರೀತಿಯ ಆಕ್ರಮಣಗಳನ್ನು ಕಂಡಿದೆ ಎಂದು 61 ವರ್ಷದ ಮಹಮೂದ್ ಯೂನಸ್ ದೂರವಾಣಿ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ