AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Bus Accident: ಬಾಂಗ್ಲಾದೇಶದಲ್ಲಿ ಕೆರೆಗೆ ಉರುಳಿದ ಬಸ್, ನೀರಿನಲ್ಲಿ ಮುಳುಗಿ 17 ಪ್ರಯಾಣಿಕರು ಸಾವು, 35 ಜನರಿಗೆ ಗಾಯ

ಬಾಂಗ್ಲಾದೇಶದ ಝಲಕತಿ ಸದರ್ ಉಪಜಿಲಾದ ಛತ್ರಕಾಂಡ ಪ್ರದೇಶದಲ್ಲಿ ಬಸ್(Bus) ಕೆರೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Bangladesh Bus Accident: ಬಾಂಗ್ಲಾದೇಶದಲ್ಲಿ ಕೆರೆಗೆ ಉರುಳಿದ ಬಸ್, ನೀರಿನಲ್ಲಿ ಮುಳುಗಿ 17 ಪ್ರಯಾಣಿಕರು ಸಾವು, 35 ಜನರಿಗೆ ಗಾಯ
ಬಸ್ ಅಪಘಾತ
ನಯನಾ ರಾಜೀವ್
|

Updated on: Jul 23, 2023 | 9:57 AM

Share

ಬಾಂಗ್ಲಾದೇಶದ ಝಲಕತಿ ಸದರ್ ಉಪಜಿಲಾದ ಛತ್ರಕಾಂಡ ಪ್ರದೇಶದಲ್ಲಿ ಬಸ್(Bus) ಕೆರೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಶನಿವಾರ ನಡೆದಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಬದುಕುಳಿದವರು ಆರೋಪಿಸಿದ್ದಾರೆ. ಅಲ್ಲದೇ ಬಸ್​ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರು ಎಂದು ಆರೋಪಿಸಿದ್ದಾರೆ.

52 ಜನರ ಸಾಮರ್ಥ್ಯದ ಬಶರ್ ಸ್ಮಾರಕ ಸಾರಿಗೆ ಬಸ್ 60 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿತ್ತು ಎಂದು ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ ಅನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಪಿರೋಜ್‌ಪುರದ ಭಂಡಾರಿಯಾದಿಂದ ಹೊರಟ ಬಸ್ 10 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯ ಛತ್ರಕಾಂಡದಲ್ಲಿ ರಸ್ತೆ ಬದಿಯ ಕೆರೆಗೆ ಬಿದ್ದಿದೆ.

ಮತ್ತಷ್ಟು ಓದಿ: ಯಲ್ಲಾಪುರ ಬಳಿ ಇಂಟರ್​ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ; 25ಕ್ಕೂ ಹೆಚ್ಚು ಮಂದಿಗೆ ಗಾಯ

ಎಲ್ಲಾ 17 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಾರಿಶಾಲ್ ವಿಭಾಗೀಯ ಆಯುಕ್ತ ಎಂಡಿ ಶೋಕತ್ ಅಲಿ ಖಚಿತಪಡಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು ಪಿರೋಜ್‌ಪುರದ ಭಂಡಾರಿಯಾ ಉಪಜಿಲಾ ಮತ್ತು ಝಲಕತಿಯ ರಾಜಾಪುರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಬಸ್ ಅಪಘಾತಗಳು ಸಾಮಾನ್ಯವಾಗಿದೆ. ರೋಡ್ ಸೇಫ್ಟಿ ಫೌಂಡೇಶನ್ (ಆರ್‌ಎಸ್‌ಎಫ್) ಪ್ರಕಾರ ಜೂನ್ ತಿಂಗಳೊಂದರಲ್ಲೇ ಒಟ್ಟು 559 ರಸ್ತೆ ಅಪಘಾತಗಳು ಸಂಭವಿಸಿವೆ.

ಅಪಘಾತಗಳಲ್ಲಿ 562 ಜನರು ಸಾವನ್ನಪ್ಪಿದ್ದಾರೆ ಮತ್ತು 812 ಜನರು ಗಾಯಗೊಂಡಿದ್ದಾರೆ. ದೇಶಾದ್ಯಂತ 207 ಮೋಟಾರ್ ಸೈಕಲ್ ಅಪಘಾತಗಳಲ್ಲಿ 169 ಜನರು ಸಾವನ್ನಪ್ಪಿದ್ದಾರೆ, ದು ಒಟ್ಟು ಸಾವಿನ ಶೇಕಡಾ 33.75 ರಷ್ಟಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ