ಬಾಂಗ್ಲಾದೇಶದ ಝಲಕತಿ ಸದರ್ ಉಪಜಿಲಾದ ಛತ್ರಕಾಂಡ ಪ್ರದೇಶದಲ್ಲಿ ಬಸ್(Bus) ಕೆರೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಶನಿವಾರ ನಡೆದಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಬದುಕುಳಿದವರು ಆರೋಪಿಸಿದ್ದಾರೆ. ಅಲ್ಲದೇ ಬಸ್ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರು ಎಂದು ಆರೋಪಿಸಿದ್ದಾರೆ.
52 ಜನರ ಸಾಮರ್ಥ್ಯದ ಬಶರ್ ಸ್ಮಾರಕ ಸಾರಿಗೆ ಬಸ್ 60 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿತ್ತು ಎಂದು ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ ಅನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಪಿರೋಜ್‌ಪುರದ ಭಂಡಾರಿಯಾದಿಂದ ಹೊರಟ ಬಸ್ 10 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯ ಛತ್ರಕಾಂಡದಲ್ಲಿ ರಸ್ತೆ ಬದಿಯ ಕೆರೆಗೆ ಬಿದ್ದಿದೆ.
ಮತ್ತಷ್ಟು ಓದಿ: ಯಲ್ಲಾಪುರ ಬಳಿ ಇಂಟರ್ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ; 25ಕ್ಕೂ ಹೆಚ್ಚು ಮಂದಿಗೆ ಗಾಯ
ಎಲ್ಲಾ 17 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಾರಿಶಾಲ್ ವಿಭಾಗೀಯ ಆಯುಕ್ತ ಎಂಡಿ ಶೋಕತ್ ಅಲಿ ಖಚಿತಪಡಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು ಪಿರೋಜ್‌ಪುರದ ಭಂಡಾರಿಯಾ ಉಪಜಿಲಾ ಮತ್ತು ಝಲಕತಿಯ ರಾಜಾಪುರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಬಸ್ ಅಪಘಾತಗಳು ಸಾಮಾನ್ಯವಾಗಿದೆ. ರೋಡ್ ಸೇಫ್ಟಿ ಫೌಂಡೇಶನ್ (ಆರ್‌ಎಸ್‌ಎಫ್) ಪ್ರಕಾರ ಜೂನ್ ತಿಂಗಳೊಂದರಲ್ಲೇ ಒಟ್ಟು 559 ರಸ್ತೆ ಅಪಘಾತಗಳು ಸಂಭವಿಸಿವೆ.
ಅಪಘಾತಗಳಲ್ಲಿ 562 ಜನರು ಸಾವನ್ನಪ್ಪಿದ್ದಾರೆ ಮತ್ತು 812 ಜನರು ಗಾಯಗೊಂಡಿದ್ದಾರೆ. ದೇಶಾದ್ಯಂತ 207 ಮೋಟಾರ್ ಸೈಕಲ್ ಅಪಘಾತಗಳಲ್ಲಿ 169 ಜನರು ಸಾವನ್ನಪ್ಪಿದ್ದಾರೆ, ದು ಒಟ್ಟು ಸಾವಿನ ಶೇಕಡಾ 33.75 ರಷ್ಟಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ