ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ

ಬಾಂಗ್ಲಾದೇಶದಲ್ಲಿ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದು 23 ಜನರು ಸಾವನ್ನಪ್ಪಿದ್ದಾರೆ. ಬುಧವಾರ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಈ ಘಟನೆ ನಡೆದಿದೆ. ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಉರುಳಿ 23 ಜನರು ಸಾವನ್ನಪ್ಪಿದ್ದಾರೆ. ರಾಜ್ಬರಿಯಿಂದ ಪ್ರಯಾಣಿಸುತ್ತಿದ್ದ ಬಸ್, ಸಾರಿಗೆ ದೋಣಿಗೆ ಹತ್ತಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಘಟನೆಯ ಬಗ್ಗೆ ಬಾಂಗ್ಲಾದೇಶದ ಪ್ರಧಾನಿ ತನಿಖೆಗೆ ಆದೇಶ ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ
Bangladesh Bus Accident
Image Credit source: DD News

Updated on: Mar 26, 2026 | 8:10 AM

ಢಾಕಾ, ಮಾರ್ಚ್ 26: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ (ಬುಧವಾರ) ಬಾಂಗ್ಲಾದೇಶದ (Bangladesh) ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಈ ಅಪಘಾತ (Bus Accident) ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ.

ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು. ಬಸ್ ಸಾರಿಗೆ ದೋಣಿಯ ಮೇಲೆ ಹತ್ತುವಾಗ ಈ ಅಪಘಾತ ಸಂಭವಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ನೀರಿಗೆ ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ಸೇವೆ ಮತ್ತು ಡೈವರ್‌ಗಳ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿವೆ.


ಇದನ್ನೂ ಓದಿ: Video: ಡಬಲ್ ಡೆಕ್ಕರ್ ಬಸ್ ಪಲ್ಟಿ, ಇಬ್ಬರು ಸಾವು

ಬಸ್​​ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ 50 ಜನರನ್ನು ತುಂಬಿಸಿಕೊಂಡಿತ್ತು. ವಿಪರೀತ ಭಾರವಾಗಿ ಬಸ್​ ಆಯತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಕ್ಷಣಾ ಹಡಗು ಹಮ್ಜಾ ಈ ಘಟನೆ ನಡೆದ 6 ಗಂಟೆಗಳ ನಂತರ ನದಿಯಿಂದ ಬಸ್ ಅನ್ನು ಹೊರತೆಗೆದಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಹಡಗಿನ ಕ್ರೇನ್ ಬಳಸಿ ಇಡೀ ಬಸ್ ಅನ್ನು ಮೇಲಕ್ಕೆತ್ತಲಾಯಿತು.

ಈ ಘಟನೆಯ ಬಗ್ಗೆ ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ತನಿಖೆಗೆ ಆದೇಶಿಸಿದ್ದಾರೆ. ನದಿಗೆ ಬಿದ್ದ ಸುಮಾರು 11 ಪ್ರಯಾಣಿಕರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಹೆಚ್ಚಿನವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳು ಮತ್ತು ಅಧಿಕಾರಿಗಳ ಪ್ರಕಾರ, ಆ ಬಸ್​​ನಲ್ಲಿದ್ದ ಅನೇಕ ಪ್ರಯಾಣಿಕರು ಒಂದೇ ಕುಟುಂಬದ ಸದಸ್ಯರಾಗಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us