ಶೇಖ್ ಹಸೀನಾ ಅವರ ಹಸ್ತಾಂತರಕ್ಕೆ ಕಾದಿದೆ ಬಾಂಗ್ಲಾದೇಶ: ವಿದೇಶಾಂಗ ಸಚಿವ

ರಾಯಿಟರ್ಸ್ ಪ್ರಕಾರ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ವಿಷಯದಲ್ಲಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದಲ್ಲಿ ಹೊಸೈನ್ ವಿದೇಶಾಂಗ ವ್ಯವಹಾರಗಳ ಸಲಹೆಗಾರರಾಗಿದ್ದಾರೆ.ಶೇಖ್ ಹಸೀನಾ ಅವರ ಪಕ್ಷದ ಅವಾಮಿ ಲೀಗ್‌ನ ಇತರ ಸದಸ್ಯರೊಂದಿಗೆ ಬಾಂಗ್ಲಾದೇಶದಲ್ಲಿ ಎರಡು ಕೊಲೆ ಪ್ರಕರಣಗಳಲ್ಲಿ ಹೆಸರಿಸಲಾಗಿದೆ.

ಶೇಖ್ ಹಸೀನಾ ಅವರ ಹಸ್ತಾಂತರಕ್ಕೆ ಕಾದಿದೆ ಬಾಂಗ್ಲಾದೇಶ: ವಿದೇಶಾಂಗ ಸಚಿವ
ಬಾಂಗ್ಲಾದೇಶ
Follow us
ರಶ್ಮಿ ಕಲ್ಲಕಟ್ಟ
|

Updated on: Aug 15, 2024 | 8:23 PM

ಢಾಕಾ ಆಗಸ್ಟ್ 15: ಬಾಂಗ್ಲಾದೇಶದ (Bangladesh) ವಿದೇಶಾಂಗ ಸಚಿವ ಮೊಹಮ್ಮದ್ ತೌಹಿದ್ ಹೊಸೈನ್ (Mohammad Touhid Hossain) ಅವರು ಗುರುವಾರ, ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರ ವಿರುದ್ಧದ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಅವರನ್ನು ಹಸ್ತಾಂತರಿಸುವ ಬಗ್ಗೆ ಸರ್ಕಾರವು ಶೀಘ್ರದಲ್ಲೇ ನಿರ್ಧರಿಸಲಿದೆ ಎಂದು ಹೇಳಿದ್ದಾರೆ. ತನ್ನ ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ಹಸೀನಾ ಈ ತಿಂಗಳ ಆರಂಭದಲ್ಲಿ ಭಾರತಕ್ಕೆ ಪಲಾಯನ ಮಾಡಿದ್ದರು. ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ, ಹೊಸೈನ್ ತಾವು ಊಹಾಪೋಹ ಮಾಡಲು ಬಯಸುವುದಿಲ್ಲ ಎಂದು ಹೇಳಿದರು, ಆದರೆ ಹಸೀನಾ “ಹಲವು ಪ್ರಕರಣಗಳನ್ನು” ಎದುರಿಸುತ್ತಿದ್ದಾರೆ. ಮಾಜಿ ಪ್ರಧಾನಿಯನ್ನು ಹಸ್ತಾಂತರಿಸುವ ಅಂತಿಮ ನಿರ್ಧಾರವು ದೇಶದ ಗೃಹ ಮತ್ತು ಕಾನೂನು ಸಚಿವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

ರಾಜಕೀಯ ಆಶ್ರಯ ಪಡೆಯುವ ಆಯ್ಕೆಗಳನ್ನು ಅನ್ವೇಷಿಸುವಾಗ ಹಸೀನಾ ನವದೆಹಲಿಯಲ್ಲಿ ತನ್ನ ವಾಸ್ತವ್ಯವನ್ನು ಮುಂದುವರೆಸುತ್ತಿರುವುದರಿಂದ ಇದು ನೆರೆಯ ಭಾರತಕ್ಕೆ “ಮುಜುಗರದ ಪರಿಸ್ಥಿತಿಯನ್ನು” ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.

“ಇದು ಭಾರತ ಸರ್ಕಾರಕ್ಕೆ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸುತ್ತದೆ”. ಇದು ಭಾರತಕ್ಕೂ ತಿಳಿದಿದೆ. ಅವರು ಅದನ್ನು ನೋಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಹೊಸೈನ್ ಹೇಳಿದ್ದಾರೆ.

ರಾಯಿಟರ್ಸ್ ಪ್ರಕಾರ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ವಿಷಯದಲ್ಲಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದಲ್ಲಿ ಹೊಸೈನ್ ವಿದೇಶಾಂಗ ವ್ಯವಹಾರಗಳ ಸಲಹೆಗಾರರಾಗಿದ್ದಾರೆ.

ಶೇಖ್ ಹಸೀನಾ ಅವರ ಪಕ್ಷದ ಅವಾಮಿ ಲೀಗ್‌ನ ಇತರ ಸದಸ್ಯರೊಂದಿಗೆ ಬಾಂಗ್ಲಾದೇಶದಲ್ಲಿ ಎರಡು ಕೊಲೆ ಪ್ರಕರಣಗಳಲ್ಲಿ ಹೆಸರಿಸಲಾಗಿದೆ. ದೇಶಾದ್ಯಂತ ಹಿಂಸಾತ್ಮಕ ಗಲಭೆಗಳು ಮತ್ತು ಪ್ರತಿಭಟನೆಗಳ ಮಧ್ಯೆ ಹಸೀನಾ ಆಗಸ್ಟ್ 5 ರಂದು ದೇಶವನ್ನು ತೊರೆದಿದ್ದರು. ಬಾಂಗ್ಲಾ ಹಿಂಸಾಚಾರದಲ್ಲಿ 300 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ದೇಶೀಯ ನ್ಯಾಯಾಲಯದ ಅಂತರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ ತನಿಖಾ ಕೋಶದ ಉಪನಿರ್ದೇಶಕ ಅತೌರ್ ರಹಮಾನ್ ಅವರು ಮೂರನೇ ಪ್ರಕರಣವನ್ನು ಪ್ರಾರಂಭಿಸಿದ್ದಾರೆ. ಹಸೀನಾ ಢಾಕಾದಿಂದ ಪಲಾಯನ ಮಾಡಿದ ನಂತರ, ಪ್ರತಿಭಟನಾಕಾರರು ಅವರ ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಂಡರು ಮತ್ತು ಅವಾಮಿ ಲೀಗ್‌ಗೆ ಸಂಬಂಧಿಸಿದ ಜನರು ಮತ್ತು ಸ್ಮಾರಕಗಳ ಮೇಲೆ ದಾಳಿ ಮಾಡಿದರು. ಕೋಪಗೊಂಡ ಜನಸಮೂಹವು ಅನೇಕ ಪಕ್ಷದ ಮುಖಂಡರ ಮೇಲೆ ಹಲ್ಲೆ ನಡೆಸಿ ಥಳಿಸಿ ಕೊಂದಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಇದನ್ನೂ ಓದಿ: Sheikh Hasina: ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು; ಬಾಂಗ್ಲಾದೇಶದಿಂದ ಪಲಾಯನವಾದ ಬಳಿಕ ಮೊದಲ ಬಾರಿ ಮೌನ ಮುರಿದ ಶೇಖ್ ಹಸೀನಾ

ಹಸೀನಾ ಅವರ ಕನಿಷ್ಠ ಮೂವರು ಮಾಜಿ ಸಚಿವರು ಮತ್ತು ಸಲಹೆಗಾರರನ್ನು ಈಗಾಗಲೇ ಬಾಂಗ್ಲಾದೇಶದಲ್ಲಿ ಬಂಧಿಸಲಾಗಿದೆ. ತನ್ನ ಉಚ್ಚಾಟನೆಯ ನಂತರದ ತನ್ನ ಏಕೈಕ ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ ನಡೆದ ಹತ್ಯೆಗಳು ಮತ್ತು ವಿಧ್ವಂಸಕ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಹಸೀನಾ ಒತ್ತಾಯಿಸಿದ್ದಾರೆ. ತನ್ನ ವಿರುದ್ಧದ ಆರೋಪಗಳ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ