ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾದೇಶ ನ್ಯಾಯಾಲಯ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ಮಾಡಿ ಹಾಗೂ ಹಿಂದೂಗಳ ಪರ ನಿಂತ ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ದೇಶ ದ್ರೋಹದ ಆರೋಪ ಮಾಡಿ ಬಂಧಿಸಲಾಗಿತ್ತು. ನಂತರ ಅವರನ್ನು ಬಾಂಗ್ಲಾದೇಶದ ಕೋರ್ಟ್​​​​ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಇಂದು ಅವರ ಅರ್ಜಿ ವಿಚಾರಣೆ ಮಾಡಿದ ಬಾಂಗ್ಲಾದೇಶದ ಕೋರ್ಟ್​​. ಅವರ ಜಾಮೀನು ಅರ್ಜಿಯನ್ನು ತಿರಸ್ಕರ ಮಾಡಿದ.

ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾದೇಶ ನ್ಯಾಯಾಲಯ
ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 02, 2025 | 2:12 PM

ಬಾಂಗ್ಲಾದೇಶ ಸಮ್ಮಿಲಿತ್ ಸನಾತನ ಜಾಗರಣ ಜೋಟೆಯ ವಕ್ತಾರ ಮತ್ತು ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಅವರ ಜಾಮೀನು ಅರ್ಜಿಯನ್ನು ಬಾಂಗ್ಲಾದೇಶ ನ್ಯಾಯಾಲಯವು ಗುರುವಾರ ತಿರಸ್ಕರಿಸಿದೆ. ಚಟ್ಟೋಗ್ರಾಮ್ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂಡಿ ಸೈಫುಲ್ ಇಸ್ಲಾಂ ಅವರು ಮಾಜಿ ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್ (ಇಸ್ಕಾನ್) ನಾಯಕ ದಾಸ್‌ಗೆ ಜಾಮೀನು ನೀಡಲು ನಿರಾಕರಿಸಿದರು, 30 ನಿಮಿಷಗಳ ವಿಚಾರಣೆಯ ನಂತರ ಈ ಆದೇಶವನ್ನು ನೀಡಿದ್ದಾರೆ. ದೇಶದ್ರೋಹದ ಆರೋಪದ ಮೇಲೆ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಬಂಧಿಸಿಲಾಗಿತ್ತು. ಬಾಂಗ್ಲಾದೇಶದ ದಿ ಡೈಲಿ ಸ್ಟಾರ್ ಪ್ರಕಾರ, 11 ವಕೀಲರ ತಂಡವು ಅವರ ಜಾಮೀನು ವಿಚಾರಣೆಯಲ್ಲಿ ಭಾಗವಹಿಸಿತು.

ಮಧುಮೇಹ ಮತ್ತು ಉಸಿರಾಟದ ತೊಂದರೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಸನ್ಯಾಸಿ ದಾಸ್ ಅವರನ್ನು ಸುಳ್ಳು ಮತ್ತು ಕಪೋಲಕಲ್ಪಿತ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಅವರು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿತ್ತು. ಈ ಬೆಳವಣಿಗೆಯನ್ನು ದುಃಖಕರ ಎಂದು ಕರೆದಿರುವ ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷ ರಾಧಾ ರಾಮನ್ ದಾಸ್, ಹಿಂದೂ ಸನ್ಯಾಸಿಗೆ ನ್ಯಾಯ ಸಿಗುವಂತೆ ಬಾಂಗ್ಲಾದೇಶ ಸರ್ಕಾರವನ್ನು ಒತ್ತಾಯಿಸಿದರು. ಇದು ತುಂಬಾ ದುಃಖದ ಸುದ್ದಿ. ಇಡೀ ಜಗತ್ತು ಇದನ್ನು ಗಮನಿಸುತ್ತಿದೆ. ಹೊಸ ವರ್ಷದಲ್ಲಿ ಚಿನ್ಮಯ್ ಪ್ರಭುಗೆ ಸ್ವಾತಂತ್ರ್ಯ ಸಿಗುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ 42 ದಿನಗಳ ನಂತರವೂ ಇಂದು ವಿಚಾರಣೆಯಲ್ಲಿ ಅವರ ಜಾಮೀನು ತಿರಸ್ಕರಿಸಲಾಗಿದೆ. ಸರ್ಕಾರ ಅವರಿಗೆ ನ್ಯಾಯ ನೀಡಬೇಕು ಎಂದು ಹೇಳಿದ್ದಾರೆ.

ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಿಂದ ನವೆಂಬರ್ 25 ರಂದು ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು.ಇದಕ್ಕೂ ಮೊದಲು, ಚಿನ್ಮೋಯ್ ಕೃಷ್ಣ ದಾಸ್ ಪರ ವಕೀಲರು ಹಾಜರಾಗಿದ್ದರಿಂದ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಬೇಕಾಯಿತು. ಡಿಸೆಂಬರ್ 11 ರಂದು, ಚಟ್ಟೋಗ್ರಾಮ್ ನ್ಯಾಯಾಲಯವು ದಾಸ್ ಅವರ ಪರವಾಗಿ ವಕೀಲರ ಪತ್ರವನ್ನು ಹೊಂದಿಲ್ಲದ ಕಾರಣ ಮನವಿಯನ್ನು ತಿರಸ್ಕರಿಸಲಾಗಿದೆ ಹೇಳಿತ್ತು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಎಲ್ಲಾ ಬಂಧಿತರಿಗೂ ಕಾನೂನು ಸಹಾಯ ಸಿಗಬೇಕು: ಅಮೆರಿಕ

ಅಕ್ಟೋಬರ್ 25 ರಂದು ಚಿತ್ತಗಾಂಗ್‌ನಲ್ಲಿ ಬಾಂಗ್ಲಾದೇಶದ ರಾಷ್ಟ್ರೀಯ ಧ್ವಜದ ಮೇಲೆ ಕೇಸರಿ ಧ್ವಜವನ್ನು ಹಾರಿಸಿದ ಆರೋಪದ ಮೇಲೆ ಚಿನ್ಮೋಯ್ ಕೃಷ್ಣ ದಾಸ್ ವಿರುದ್ಧ ದೇಶದ್ರೋಹದ ಆರೋಪ ಮಾಡಲಾಗಿತ್ತು. ಇದರಿಂದ ಬಾಂಗ್ಲಾದಲ್ಲಿ ಅಶಾಂತಿ ಸೃಷ್ಟಿಯಾಗಿತ್ತು. ಕೋರ್ಟ್​ ಮುಂದೆ ಅವರ ಅನುಯಾಯಿಗಳು ಬಂದು ಪ್ರತಿಭಟನೆ ಮಾಡಿದ್ದಾರೆ. ಇದರಿಂದ ಘರ್ಷಣೆ ಕೂಡ ಉಂಟಾಗಿ, ಒಬ್ಬರು ವಕೀಲರು ಸಾವನ್ನಪ್ಪಿದ್ದಾರೆ.

ವಿದೇಶ ಸುಸ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:10 pm, Thu, 2 January 25

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ