Bangladesh Violence: ಬಾಂಗ್ಲಾದೇಶದಲ್ಲಿ ತಮ್ಮ ಮೇಲಿನ ಹಿಂಸಾಚಾರ ಖಂಡಿಸಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ

ಆಗಸ್ಟ್ 5ರಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಸರ್ಕಾರವು ಪತನಗೊಂಡ ನಂತರ ಬಾಂಗ್ಲಾದೇಶದಲ್ಲಿ ನೂರಾರು ಹಿಂದೂಗಳ ಮೇಲೆ ದಾಳಿ ನಡೆದಿದೆ. ಅಲ್ಲಿನ ಹಿಂದೂಗಳ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

Bangladesh Violence: ಬಾಂಗ್ಲಾದೇಶದಲ್ಲಿ ತಮ್ಮ ಮೇಲಿನ ಹಿಂಸಾಚಾರ ಖಂಡಿಸಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ
ಹಿಂದೂಗಳ ಪ್ರತಿಭಟನೆ
Follow us
ಸುಷ್ಮಾ ಚಕ್ರೆ
|

Updated on: Aug 11, 2024 | 11:17 AM

ಢಾಕಾ: ನದಿಗಳ ನಾಡು ಎಂದು ಕರೆಯಲಾಗುವ ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದಾರೆ. ಇದಾದ ಬಳಿಕವೂ ತೀವ್ರ ಪ್ರತಿಭಟನೆಗಳು ಮುಂದುವರೆದಿವೆ. 1971ರ ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರು ಸೇರಿದಂತೆ ನಿರ್ದಿಷ್ಟ ಗುಂಪುಗಳಿಗೆ ನಾಗರಿಕ ಸೇವಾ ಉದ್ಯೋಗಗಳನ್ನು ಕಾಯ್ದಿರಿಸುವ ಕೋಟಾ ವ್ಯವಸ್ಥೆಯನ್ನು ಸುಧಾರಿಸುವ ಬೇಡಿಕೆಗಳಿಂದಾಗಿ ಜುಲೈ ಆರಂಭದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರಿಗೆ ಸರ್ಕಾರಿ ಉದ್ಯೋಗಗಳನ್ನು ಹಂಚುವ ಹೊಸ ನೀತಿಯನ್ನು ವಿದ್ಯಾರ್ಥಿಗಳು ವಿರೋಧಿಸಿದಾಗ ಅಶಾಂತಿ ಉಲ್ಬಣಗೊಂಡಿತು. ಇದು ಢಾಕಾದಲ್ಲಿನ ರಾಜ್ಯ ಟೆಲಿವಿಷನ್ ಪ್ರಧಾನ ಕಚೇರಿ ಮತ್ತು ಪೊಲೀಸ್ ಬೂತ್‌ಗಳ ಮೇಲೆ ದಾಳಿಗಳನ್ನು ಒಳಗೊಂಡ ಹಿಂಸಾಚಾರವನ್ನು ಹುಟ್ಟುಹಾಕಿತು.

ಇದೀಗ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಲಕ್ಷಾಂತರ ಹಿಂದೂಗಳು ಶನಿವಾರ ಬೀದಿಗಿಳಿದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾ ಮತ್ತು ದೇಶದ ಎರಡನೇ ಅತಿದೊಡ್ಡ ನಗರವಾದ ಚಿತ್ತಗಾಂಗ್, ಬೃಹತ್ ರ್ಯಾಲಿಗಳಿಗೆ ಲಕ್ಷಾಂತರ ಜನರು ಸಾಕ್ಷಿಯಾದರು.

ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಗಡಿಯ ಪರಿಸ್ಥಿತಿ ಗಮನಿಸಲು ಭಾರತ ಸರ್ಕಾರದಿಂದ ಸಮಿತಿ ರಚನೆ; ಅಮಿತ್ ಶಾ ಘೋಷಣೆ

ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5ರಂದು ಶೇಖ್ ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಹಲವಾರು ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಲಾಗಿದೆ ಮತ್ತು ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಇಬ್ಬರು ಹಿಂದೂ ನಾಯಕರು ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಸಾವಿರಾರು ಬಾಂಗ್ಲಾದೇಶಿ ಹಿಂದೂಗಳು ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವವರ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಮಂಡಳಿಗಳ ರಚನೆ, ಅಲ್ಪಸಂಖ್ಯಾತರಿಗೆ ಶೇ. 10ರಷ್ಟು ಸಂಸದೀಯ ಸ್ಥಾನಗಳ ಹಂಚಿಕೆ ಮತ್ತು ಇತರರೊಂದಿಗೆ ಅಲ್ಪಸಂಖ್ಯಾತರ ರಕ್ಷಣೆಗಾಗಿ ಕಾನೂನು ಜಾರಿಗೆ ಒತ್ತಾಯಿಸಿ ಹಿಂದೂ ಪ್ರತಿಭಟನಾಕಾರರ ರ್ಯಾಲಿಯು ಕೇಂದ್ರದ ಶಾಹಬಾಗ್‌ನಲ್ಲಿ 3 ಗಂಟೆಗಳ ಕಾಲ ಸಂಚಾರವನ್ನು ನಿರ್ಬಂಧಿಸಿತು.

ಇದನ್ನೂ ಓದಿ: Bangladesh Violence: ಬಾಂಗ್ಲಾದೇಶದಲ್ಲಿ ಹಿಂದೂಗಳು, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರಕ್ಕೆ ಆರ್‌ಎಸ್‌ಎಸ್ ಖಂಡನೆ

ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮುಸ್ಲಿಂ ಪ್ರತಿಭಟನಾಕಾರರು ಅಲ್ಪಸಂಖ್ಯಾತರ ಪರವಾಗಿ ಒಗ್ಗಟ್ಟನ್ನು ವ್ಯಕ್ತಪಡಿಸಿದರು. ಚಿತ್ತಗಾಂಗ್‌ನಲ್ಲಿ ಐತಿಹಾಸಿಕ ಚೆರಗಿ ಪಹಾರ್ ಚೌಕದಲ್ಲಿ ಬೃಹತ್ ಸಮಾವೇಶ ನಡೆಯಿತು. ಕೆಲವು ವರದಿಗಳ ಪ್ರಕಾರ, 7 ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಮುಹಮ್ಮದ್ ಯೂನಸ್ ಪ್ರತಿಕ್ರಿಯೆ:

ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಶನಿವಾರ ಹಿಂಸಾಚಾರ ಪೀಡಿತ ರಾಷ್ಟ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಈ ಕೃತ್ಯವನ್ನು “ಹೇಯ ಕೃತ್ಯ” ಎಂದು ಟೀಕಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತರಾದ ಮುಹಮ್ಮದ್ ಯೂನಸ್ ಅವರು ಪ್ರತಿಭಟನೆಯ ಮುಂಚೂಣಿಯಲ್ಲಿರುವ ವಿದ್ಯಾರ್ಥಿಗಳನ್ನು, ಎಲ್ಲಾ ಹಿಂದೂ, ಕ್ರಿಶ್ಚಿಯನ್ ಮತ್ತು ಬೌದ್ಧ ಕುಟುಂಬಗಳನ್ನು ಹಾನಿಯಿಂದ ರಕ್ಷಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ