Bangladesh Crisis: ಬಾಂಗ್ಲಾದೇಶದಲ್ಲಿ ಗುರುವಾರ ಮುಹಮ್ಮದ್ ಯೂನಸ್ ನೇತೃತ್ವದ ಹಂಗಾಮಿ ಸರ್ಕಾರ ಪ್ರಮಾಣ ವಚನ ಸ್ವೀಕಾರ

Muhammad Yunus: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಮುಹಮ್ಮದ್ ಯೂನಸ್ ಅವರನ್ನು ನೇಮಿಸಿದರು.

Bangladesh Crisis: ಬಾಂಗ್ಲಾದೇಶದಲ್ಲಿ ಗುರುವಾರ ಮುಹಮ್ಮದ್ ಯೂನಸ್ ನೇತೃತ್ವದ ಹಂಗಾಮಿ ಸರ್ಕಾರ ಪ್ರಮಾಣ ವಚನ ಸ್ವೀಕಾರ
ಮುಹಮ್ಮದ್ ಯೂನಸ್
Follow us
ಸುಷ್ಮಾ ಚಕ್ರೆ
|

Updated on: Aug 07, 2024 | 7:40 PM

ಢಾಕಾ: ಬಾಂಗ್ಲಾದೇಶದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ನಾಳೆ (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜನರಲ್ ವಾಕರ್, ಮಧ್ಯಂತರ ಸರ್ಕಾರವು ಗುರುವಾರ ರಾತ್ರಿ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು.

ಸಲಹಾ ಮಂಡಳಿಯು 15 ಸದಸ್ಯರನ್ನು ಹೊಂದಿರಲಿದೆ ಎಂದು ಅವರು ಹೇಳಿದರು. 84 ವರ್ಷದ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ಅವರನ್ನು ಮಂಗಳವಾರ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಕ ಮಾಡಿದ್ದರು. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ವಿರುದ್ಧ ತಮ್ಮ ಸರ್ಕಾರದ ವಿರುದ್ಧ ಮಾರಣಾಂತಿಕ ಪ್ರತಿಭಟನೆಗಳ ನಂತರ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಅದಾದ ಮರುದಿನವೇ ಈ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ: Sheikh Hasina: ಆ ಒಂದು ಫೋನ್ ಕಾಲ್​ನಿಂದ ಬಾಂಗ್ಲಾದೇಶ ಬಿಟ್ಟು ಹೊರಟ ಶೇಖ್ ಹಸೀನಾ

ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ, ಯುವಕರ ಚಳವಳಿ ನಡೆಯುತ್ತಿತ್ತು. ಇದಕ್ಕೆ ಮುಖ್ಯ ಕಾರಣವೆಂದರೆ ಶೇಖ್ ಹಸೀನಾ ಅವರ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗಗಳಲ್ಲಿ ನೀಡಿದ್ದ ಮೀಸಲಾತಿ. ಇದುವರೆಗೂ ಶೇಖ್ ಹಸೀನಾ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಕಳೆದ ತಿಂಗಳು ಬಾಂಗ್ಲಾದೇಶದಲ್ಲಿ ಆರಂಭವಾದ ಪ್ರತಿಭಟನೆಗಳು, 1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮುಕ್ತಿಜೋದ್ಧರ ಕುಟುಂಬದ ಸದಸ್ಯರಿಗೆ ಶೇ. 30ರಷ್ಟು ಸರ್ಕಾರಿ ಉದ್ಯೋಗಗಳನ್ನು ಮೀಸಲಿಡುವ ಕೋಟಾ ವ್ಯವಸ್ಥೆಯ ವಿರುದ್ಧ ಆಂದೋಲನವಾಗಿ ಪ್ರಾರಂಭವಾಯಿತು. ಈ ವ್ಯವಸ್ಥೆಯು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರನ್ನು ಬೆಂಬಲಿಸುತ್ತದೆ ಮತ್ತು ಅದನ್ನು ಬದಲಿಸಲು ಅರ್ಹತೆ ಆಧಾರಿತ ವ್ಯವಸ್ಥೆಯನ್ನು ಬಯಸಿತು.

ಇದನ್ನೂ ಓದಿ: Sheikh Hasina: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ

ಈ ಕುರಿತು ಪ್ರತಿಭಟನೆಗಳು ಹೆಚ್ಚಾದಂತೆ, ಅವಾಮಿ ಲೀಗ್ ಸರ್ಕಾರ ಅದನ್ನು ತನ್ನ ಅಧಿಕಾರ ಬಳಸಿ ಹತ್ತಿಕ್ಕಲು ಪ್ರಯತ್ನಿಸಿತು. ಶೇಖ್ ಹಸೀನಾ ಆ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ಮತ್ತು ಅವರ ಕೆಲವು ಹೇಳಿಕೆಗಳು ಜನರಲ್ಲಿ ತೀವ್ರ ಆಕ್ರೋಶ ಉಂಟುಮಾಡಿತು. ಮೊದಲು ಉದ್ಯೋಗಗಳಲ್ಲಿ ಮೀಸಲಾತಿ ಕೋಟಾದ ವಿರುದ್ಧ ಚಳುವಳಿ ಪ್ರಾರಂಭವಾಯಿತು. ಆದರೆ ನಂತರ ಅದು ಶೇಖ್ ಹಸೀನಾ ಸರ್ಕಾರದ ವಿರುದ್ಧ ವ್ಯಾಪಕ ಕೋಪಕ್ಕೆ ತಿರುಗಿತು. ಸಮಾಜದ ಎಲ್ಲ ವರ್ಗದ ಜನರು ಇದರಲ್ಲಿ ಭಾಗಿಯಾಗಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!