Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ ಚುನಾವಣೆ: ನಾಲ್ಕನೇ ಬಾರಿಗೆ ಪ್ರಧಾನಿಯಾಗ್ತಾರಾ ಶೇಖ್​ ಹಸೀನಾ

ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಭಾನುವಾರ ಬೆಳಗ್ಗೆ ಮತದಾನ ಆರಂಭವಾಗಿದೆ. ದೇಶದ ಪ್ರಮುಖ ವಿರೋಧ ಪಕ್ಷವಾದ ಬಿಎನ್​ಪಿ ಚುನಾವಣೆಯನ್ನು ಬಹಿಷ್ಕರಿಸಿದೆ. ಅಷ್ಟೇ ಅಲ್ಲದೆ ಸರ್ಕಾರದ ವಿರುದ್ಧ 48 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೂ ಕರೆ ನೀಡಿದೆ, ಇದು ಕಾನೂನು ಬಾಹಿರ ಎಂದು ಬಣ್ಣಿಸಿದೆ. ಈ ಸರ್ಕಾರದ ಅಡಿಯಲ್ಲಿ ಯಾವುದೇ ಚುನಾವಣೆಯು ನ್ಯಾಯಯುತ ಮತ್ತು ವಿಶ್ವಾಸಾರ್ಹವಾಗಿರುವುದಿಲ್ಲ ಎಂದು ಪಕ್ಷ ಹೇಳಿಕೊಂಡಿದೆ.

ಬಾಂಗ್ಲಾದೇಶ ಚುನಾವಣೆ: ನಾಲ್ಕನೇ ಬಾರಿಗೆ ಪ್ರಧಾನಿಯಾಗ್ತಾರಾ ಶೇಖ್​ ಹಸೀನಾ
ಶೇಖ್ ಹಸೀನಾImage Credit source: Oneindia
Follow us
ನಯನಾ ರಾಜೀವ್
|

Updated on: Jan 07, 2024 | 10:16 AM

ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಭಾನುವಾರ ಬೆಳಗ್ಗೆ ಮತದಾನ ಆರಂಭವಾಗಿದೆ. ದೇಶದ ಪ್ರಮುಖ ವಿರೋಧ ಪಕ್ಷವಾದ ಬಿಎನ್​ಪಿ ಚುನಾವಣೆಯನ್ನು ಬಹಿಷ್ಕರಿಸಿದೆ. ಅಷ್ಟೇ ಅಲ್ಲದೆ ಸರ್ಕಾರದ ವಿರುದ್ಧ 48 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೂ ಕರೆ ನೀಡಿದೆ, ಇದು ಕಾನೂನು ಬಾಹಿರ ಎಂದು ಬಣ್ಣಿಸಿದೆ. ಈ ಸರ್ಕಾರದ ಅಡಿಯಲ್ಲಿ ಯಾವುದೇ ಚುನಾವಣೆಯು ನ್ಯಾಯಯುತ ಮತ್ತು ವಿಶ್ವಾಸಾರ್ಹವಾಗಿರುವುದಿಲ್ಲ ಎಂದು ಪಕ್ಷ ಹೇಳಿಕೊಂಡಿದೆ.

ಮಧ್ಯಂತರ ಪಕ್ಷೇತರ ಸರ್ಕಾರ ಚುನಾವಣೆ ನಡೆಸಬೇಕು ಎಂದು ಬಿಎನ್​ಪಿ ಆಗ್ರಹಿಸಿದೆ. ಆದರೆ ಪ್ರಧಾನಿ ಶೇಖ್ ಹಸೀನಾ(Sheikh Hasina) ನೇತೃತ್ವದ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿದೆ.

ಪ್ರಮುಖ ವಿರೋಧ ಪಕ್ಷವಾದ ಬಿಎನ್​ಪಿ ಇಲ್ಲದ ಕಾರಣ ಶೇಖ್ ಹಸೀನಾ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆ ಇದೆ. 2009ರಿಂದ ಬಾಂಗ್ಲಾದೇಶದಲ್ಲಿ ಹಸೀನಾ ಪ್ರಧಾನಿಯಾಗಿ ಅಧಿಕಾರ ನಿರ್ವಹಿಸುತ್ತಿದ್ದಾರೆ, ಅವರು ಇದೀಗ ಸತತ ನಾಲ್ಕನೇ ಬಾರಿಗೆ ಪ್ರಧಾನಿಯಾಗಲು ಹೋರಾಡುತ್ತಿದ್ದಾರೆ.

ಮತ್ತಷ್ಟು ಓದಿ: G20 Summit: ಉಭಯ ದೇಶಗಳ ನಡುವಿನ ಸಂಬಂಧವನ್ನು ಮೋದಿ ನಡೆ ಬಲಪಡಿಸುತ್ತದೆ: ಬಾಂಗ್ಲಾದೇಶ ಅವಾಮಿ ಲೀಗ್ ನಾಯಕಿ ಶೇಖ್ ಹಸೀನಾ ಇಂದು ರಾಜಧಾನಿ ಢಾಕಾದಲ್ಲಿ ಮತ ಚಲಾಯಿಸಿದರು. ಮತಚಲಾಯಿಸಿ ಬಳಿಕ ಮಾತನಾಡಿದ ಶೇಖ್, ಭಾರತ ನಮ್ಮ ವಿಶ್ವಾಸಾರ್ಹ ಸ್ನೇಹಿತ, ನಮ್ಮ ವಿಮೋಚನಾ ಹೋರಾಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಿದ್ದಾರೆ.

1975ರ ನಂತರ ನಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಾಗ ನಮಗೆ ಆಶ್ರಯ ನೀಡಿದ್ದು, ಅವರೇ ಎಂದಿದ್ದಾರೆ. ಪ್ರಧಾನಿ ಶೇಖ್ ಹಸೀನಾ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ದೇಶದ ಪ್ರಮುಖ ವಿರೋಧ ಪಕ್ಷದ ಉಪಾಧ್ಯಕ್ಷರಾದ ನಿತಾಯಿ ರಾಯ್ ಚೌಧರಿ ಆರೋಪಿಸಿದ್ದಾರೆ.

ಇದು ಪ್ರಜಾಸತ್ತಾತ್ಮಕ ಸರ್ಕಾರವಲ್ಲ, ಪ್ರಜಾಪ್ರಭುತ್ವವಿಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ, ಜನರ ಸಹಭಾಗಿತ್ವ ಇರಬೇಕು ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ