Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Election: ಬಾಂಗ್ಲಾದೇಶ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಶೇಖ್ ಹಸೀನಾ

ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥೆಯಾದ ಶೇಖ್ ಹಸೀನಾ ಗೆಲುವಿನ ನಗೆ ಬೀರಿದ್ದಾರೆ. 76 ವರ್ಷದ ಶೇಖ್ ಹಸೀನಾ 249,965 ಮತಗಳನ್ನು ಪಡೆದರೆ, ಅವರ ಹತ್ತಿರದ ಪ್ರತಿಸ್ಪರ್ಧಿ ಮತ್ತು ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ಎಂ ನಿಜಾಮ್ ಉದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಪಡೆದಿದ್ದಾರೆ.

Bangladesh Election: ಬಾಂಗ್ಲಾದೇಶ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಶೇಖ್ ಹಸೀನಾ
ಶೇಖ್ ಹಸೀನಾImage Credit source: India Today
Follow us
ನಯನಾ ರಾಜೀವ್
|

Updated on: Jan 08, 2024 | 9:16 AM

ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥೆಯಾದ ಶೇಖ್ ಹಸೀನಾ(Sheikh Hasina) ಗೆಲುವಿನ ನಗೆ ಬೀರಿದ್ದಾರೆ. 76 ವರ್ಷದ ಶೇಖ್ ಹಸೀನಾ 249,965 ಮತಗಳನ್ನು ಪಡೆದರೆ, ಅವರ ಹತ್ತಿರದ ಪ್ರತಿಸ್ಪರ್ಧಿ ಮತ್ತು ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ಎಂ ನಿಜಾಮ್ ಉದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಪಡೆದಿದ್ದಾರೆ.

ಗೋಪಾಲಗಂಜ್ ಡೆಪ್ಯುಟಿ ಕಮಿಷನರ್ ಮತ್ತು ಚುನಾವಣಾ ಅಧಿಕಾರಿ ಖಾಜಿ ಮಹಬೂಬೂಲ್ ಆಲಂ ಈ ಫಲಿತಾಂಶವನ್ನು ಪ್ರಕಟಿಸಿದರು. ಶೇಖ್ ಹಸೀನಾ ಅವರು 1986 ರಿಂದ ಎಂಟು ಬಾರಿ ಗೋಪಾಲಗಂಜ್-3 ಸ್ಥಾನವನ್ನು ಗೆದ್ದಿದ್ದಾರೆ. ಪ್ರಧಾನಿ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಅಧಿಕಾರ ಹಿಡಿಯಲಿದ್ದಾರೆ.

ಮತದಾನ ಆರಂಭವಾದ ಬೆನ್ನಲ್ಲೇ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾ ಸಿಟಿ ಕಾಲೇಜ್ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಈ ವೇಳೆ ಅವರ ಪುತ್ರಿ ಸೈಮಾ ವಾಜಿದ್ ಕೂಡ ಜೊತೆಗಿದ್ದರು.

ಮತ್ತಷ್ಟು ಓದಿ: ಬಾಂಗ್ಲಾದೇಶ ಚುನಾವಣೆ: ನಾಲ್ಕನೇ ಬಾರಿಗೆ ಪ್ರಧಾನಿಯಾಗ್ತಾರಾ ಶೇಖ್​ ಹಸೀನಾ

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಹಸೀನಾ, ಭಾರತ ಬಾಂಗ್ಲಾದೇಶದ ವಿಶ್ವಾಸಾರ್ಹ ಸ್ನೇಹಿತ ಎಂದು ಪತ್ರಕರ್ತರಿಗೆ ತಿಳಿಸಿದರು. ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮತ್ತು ಅದರ ಮಿತ್ರಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಿತ್ತು. ಭಾನುವಾರವೇ ಮತದಾನ ಮುಗಿದ ಬಳಿಕ ಮತ ಎಣಿಕೆ ಆರಂಭವಾಯಿತು.

ಹಿಂಸಾಚಾರದ ಕೆಲವು ಪ್ರತ್ಯೇಕ ಘಟನೆಗಳನ್ನು ಹೊರತುಪಡಿಸಿ, 300 ಕ್ಷೇತ್ರಗಳ ಪೈಕಿ 299 ಕ್ಷೇತ್ರಗಳಲ್ಲಿ ಮತದಾನವು ಶಾಂತಿಯುತವಾಗಿತ್ತು.

ದೇಶದ ಚುನಾವಣಾ ಆಯೋಗದ ಪ್ರಕಾರ, 42,000 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ನಡೆಯಿತು. 27 ರಾಜಕೀಯ ಪಕ್ಷಗಳಿಂದ 1,500 ಕ್ಕೂ ಹೆಚ್ಚು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಅವರನ್ನು ಹೊರತುಪಡಿಸಿ 436 ಸ್ವತಂತ್ರ ಅಭ್ಯರ್ಥಿಗಳೂ ಇದ್ದರು. ಭಾರತದ ಮೂವರು ವೀಕ್ಷಕರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು 12ನೇ ಸಾರ್ವತ್ರಿಕ ಚುನಾವಣೆಯ ಮೇಲೆ ನಿಗಾ ಇರಿಸಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ