ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು

ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಹಿಂದೂ ಯುವಕನನ್ನು ಕ್ರೂರವಾಗಿ ಕೊಲ್ಲಲಾಗಿದೆ. ಮೃತ ವ್ಯಕ್ತಿಯನ್ನು ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಭೀಕರ ಘಟನೆಯಲ್ಲಿ, ಗುಂಪೊಂದು ದೀಪು ಚಂದ್ರ ಅವರನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು
ಬಾಂಗ್ಲಾದೇಶ

Updated on: Dec 19, 2025 | 12:56 PM

ಢಾಕಾ, ಡಿಸೆಂಬರ್ 19: ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಹಿಂದೂ ಯುವಕನನ್ನು ಕ್ರೂರವಾಗಿ ಕೊಲ್ಲಲಾಗಿದೆ. ಮೃತ ವ್ಯಕ್ತಿಯನ್ನು ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಭೀಕರ ಘಟನೆಯಲ್ಲಿ, ಗುಂಪೊಂದು ದೀಪು ಚಂದ್ರ ಅವರನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ.

ವಿಪಕ್ಷ ನಾಯಕ ಷರೀಫ್ ಉಸ್ಮಾನ್ ಹಾದಿ ಕೊಲೆ ಬಳಿಕ ನಂತರ ದೇಶಾದ್ಯಂತ ವ್ಯಾಪಕ ಹಿಂಸಾಚಾರ ಮತ್ತು ಪ್ರತಿಭಟನೆಗಳು ನಡೆಯುತ್ತಿರುವಾಗಲೇ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಸ್ಥಳೀಯರ ಗುಂಪೊಂದು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಿದೆ.

ಹೊಡೆದು ಕೊಂದ ಜನ

ಗುಂಪು ದೀಪು ಚಂದ್ರ ದಾಸ್ ಅವರನ್ನು ಹೊಡೆದು ಕೊಂದು, ನಂತರ ಅವರ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದೆ ಎಂದು ಆರೋಪಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಶವವನ್ನು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಮೈಮೆನ್ಸಿಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: Video: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ, ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ

ಪ್ರಕರಣದಲ್ಲಿ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಮೃತರ ಕುಟುಂಬವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಮತ್ತು ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಗಳು ಮುಂದುವರೆದಿವೆ

ಷರೀಫ್ ಉಸ್ಮಾನ್ ಹಾದಿ ಅವರ ಮರಣದ ನಂತರ ಬಾಂಗ್ಲಾದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ . ಪ್ರತಿಭಟನಾಕಾರರು ಪತ್ರಿಕಾ ಕಚೇರಿಗಳು, ಅವಾಮಿ ಲೀಗ್ ನಾಯಕರ ಮನೆಗಳು ಮತ್ತು ಐತಿಹಾಸಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿಯೂ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಯಿತು ಮತ್ತು ಭಾರತೀಯ ರಾಜತಾಂತ್ರಿಕ ಆವರಣಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ