Temple Vandalised: ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದಾಳಿ, ವಿಗ್ರಹಗಳ ಧ್ವಂಸ
ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳಲ್ಲಿ ದುಷ್ಕರ್ಮಿಗಳು ಬಾಂಗ್ಲಾದೇಶದ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳಲ್ಲಿ ಎಂಟು ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶೇಖ್ ಹಸೀನಾ ದೇಶ ತೊರೆದ ನಂತರ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮುಂದುವರೆದಿವೆ. ಬಾಂಗ್ಲಾದೇಶದಲ್ಲಿ ದಂಗೆ ನಡೆದಾಗಿನಿಂದ ಅಲ್ಲಿ ಪರಿಸ್ಥಿತಿ ಶಾಂತಿಯುತವಾಗಿಲ್ಲ. ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳಲ್ಲಿ ದುಷ್ಕರ್ಮಿಗಳು ಬಾಂಗ್ಲಾದೇಶದ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳಲ್ಲಿ ಎಂಟು ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ಹೆಚ್ಚಿದೆ. ಗುರುವಾರ ಮೈಮೆನ್ಸಿಂಗ್ನ ಹಲುಘಾಟ್ ಹಾಗೂ ಶುಕ್ರವಾರದಂದು ಶಕುವಾಯ್ನ ಯೂನಿಯನ್ನಲ್ಲಿರುವ ಬೋಂಡರ್ ಪಾರಾ ದೇವಾಲಯದಲ್ಲಿ ಎರಡು ವಿಗ್ರಹಗಳಿಗೆ ಹಾನಿಯಾಗಿದೆ. ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಮೈಮೆನ್‌ಸಿಂಗ್‌ನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಲಸಕಂಡ ಗ್ರಾಮದ ಅಲಾಲ್ ಉದ್ದೀನ್ (27) ಎಂಬಾತನನ್ನು ಪೋಲಸಕಂಡ ಕಾಳಿ ದೇವಸ್ಥಾನದಲ್ಲಿ ವಿಗ್ರಹವನ್ನು ಒಡೆದ ಆರೋಪದ ಮೇಲೆ ಗುರುವಾರ ಬಂಧಿಸಲಾಗಿದೆ.
ಮತ್ತಷ್ಟು ಓದಿ: Fact Check: ಬಾಂಗ್ಲಾದೇಶದಲ್ಲಿ ಮುಸ್ಲಿಮರು ಧ್ವಂಸ ಮಾಡಿದ್ದು ಹಿಂದೂ ದೇವಸ್ಥಾನವನ್ನಲ್ಲ: ನಿಜಾಂಶ ಇಲ್ಲಿದೆ
ಮಂಗಳವಾರ ದಿನಜ್‌ಪುರದ ಬಿರ್‌ಗಂಜ್ ಜಿಲ್ಲೆಯ ಜರ್ಬರಿ ಶಶನ್ ಕಾಳಿ ದೇವಸ್ಥಾನದಲ್ಲಿ ಐದು ವಿಗ್ರಹಗಳನ್ನು ಅಪವಿತ್ರಗೊಳಿಸಲಾಗಿದೆ. ಹೆಚ್ಚುತ್ತಿರುವ ಹಿಂಸಾಚಾರವು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸಿದೆ.
ಹಸೀನಾ ಅವರನ್ನು ಅಧಿಕಾರದಿಂದ ಕೆಳಗಿಳಿಸಿದಾಗಿನಿಂದ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ 88 ಕೋಮುಗಲಭೆ ಪ್ರಕರಣಗಳು ನಡೆದಿವೆ. ಈ ಘಟನೆಗಳು ದೇಶದೊಳಗೆ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ಹೆಚ್ಚುತ್ತಿರುವ ಅಭದ್ರತೆಯನ್ನು ಪ್ರತಿಬಿಂಬಿಸುತ್ತವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ