ಬಾಂಗ್ಲಾದೇಶ: ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ, 100 ಮಂದಿ ಸಾವು

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದ್ದು, ಅದು ಹಿಂಸಾಚಾರಕ್ಕೆ ತಿರುಗಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶ: ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ, 100 ಮಂದಿ ಸಾವು
ಪ್ರತಿಭಟನೆImage Credit source: Business Today
Follow us
|

Updated on:Aug 05, 2024 | 8:27 AM

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ  ನಡೆದ ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಇಸ್ಕಾನ್ ಮತ್ತು ಕಾಳಿ ದೇವಾಲಯಗಳು ಸೇರಿದಂತೆ ಹಿಂದೂ ದೇವಾಲಯ ಹಾಗೂ ಮನೆಗಳನ್ನು ಗುರಿಯಾಗಿಸಲಾಗಿದೆ. ಇದರಿಂದಾಗಿ ಭಕ್ತರು ಪರದಾಡಬೇಕಾಯಿತು. ಹಿಂಸಾಚಾರದಲ್ಲಿ ಒಬ್ಬ ಹಿಂದೂ ಕೂಡ ಸಾವನ್ನಪ್ಪಿದ್ದಾನೆ.

ಭಾರತೀಯರು ಮನೆಯಿಂದ ಆಚೆ ಬಾರದಂತೆ ಸೂಚನೆ ನೀಡಲಾಗಿದೆ. ಹಿಂಸಾಚಾರದ ಪರಿಣಾಮವಾಗಿ ಅಧಿಕಾರಿಗಳು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದರು ಮತ್ತು ಅನಿರ್ದಿಷ್ಟ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆ ವಿಚಾರವಾಗಿ ಗದ್ದಲ ಎದ್ದಿರುವ ಹಿನ್ನೆಲೆಯಲ್ಲಿ ಶೇಖ್ ಹಸೀನಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ವಿವಾದಾತ್ಮಕ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹೋರಾಡಿದ ಮಾಜಿ ಸೈನಿಕರ ಸಂಬಂಧಿಕರಿಗೆ ಈ ಕೋಟಾ ವ್ಯವಸ್ಥೆಯಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಶೇ.30ರಷ್ಟು ಮೀಸಲಾತಿಯನ್ನು ನೀಡಲಾಯಿತು.

ಮತ್ತಷ್ಟು ಓದಿ: ಬಾಂಗ್ಲಾದೇಶದಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮಗಳಿಗೆ ಶೇಖ್ ಹಸೀನಾ ಆಹ್ವಾನ

ದೇಶಾದ್ಯಂತ ವಿಧ್ವಂಸಕ ಕೃತ್ಯಗಳಲ್ಲಿ ತೊಡಗುವವರು ವಿದ್ಯಾರ್ಥಿಗಳಲ್ಲ ಆದರೆ ಭಯೋತ್ಪಾದಕರು ಎಂದು ಪ್ರಧಾನಿ ಹಸೀನಾ ಹೇಳಿದ್ದಾರೆ. ಇದೀಗ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳಲ್ಲ, ರಾಷ್ಟ್ರವನ್ನು ಅಸ್ಥಿರಗೊಳಿಸಲು ಹೊರಟಿರುವ ಭಯೋತ್ಪಾದಕರು. ಅವರನ್ನು ದೃಡವಾಗಿ ನಿಗ್ರಹಿಸುವಂತೆ ದೇಶವಾಸಿಗಳಿಗೂ ಮನವಿ ಮಾಡಿದ್ದಾರೆ.

ಭಾರತವು ವಿದ್ಯಾರ್ಥಿಗಳು ಸೇರಿದಂತೆ ತನ್ನ ಪ್ರಜೆಗಳಿಗೆ ಸಲಹೆಯನ್ನು ನೀಡಿದೆ, ಅಲ್ಲಿನ ಭಾರತೀಯ ಹೈಕಮಿಷನ್‌ನೊಂದಿಗೆ ಸಂಪರ್ಕದಲ್ಲಿರಲು ಮತ್ತು ಜಾಗರೂಕರಾಗಿರಲು ಕೇಳಿಕೊಳ್ಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:26 am, Mon, 5 August 24

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?