AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು

ಉಸ್ಮಾನ್ ಹಾದಿ ಹತ್ಯೆಯಾದ ಕೆಲವು ದಿನಗಳ ನಂತರ ಮತ್ತೊಬ್ಬ ಬಾಂಗ್ಲಾದೇಶ ವಿದ್ಯಾರ್ಥಿ ನಾಯಕನ ಮೇಲೆ ಗುಂಡು ಹಾರಿಸಲಾಗಿದೆ. ಹಾದಿ ಹತ್ಯೆಯನ್ನು ಖಂಡಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ಸಂದರ್ಭದಲ್ಲಿ ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕನ ಮೇಲೆ ತಲೆಗೆ ಗುಂಡು ಹಾರಿಸಲಾಗಿದೆ. ಬಾಂಗ್ಲಾದೇಶದ ರಾಷ್ಟ್ರೀಯ ನಾಗರಿಕರ ಪಕ್ಷದ (ಎನ್‌ಸಿಪಿ) ಹಿರಿಯ ಕಾರ್ಮಿಕ ನಾಯಕರೊಬ್ಬರ ತಲೆಗೆ ಇಂದು ಖುಲ್ನಾದಲ್ಲಿ ತಲೆಗೆ ಗುಂಡು ಹಾರಿಸಲಾಗಿದೆ. ಈ ತಿಂಗಳು ಬಾಂಗ್ಲಾದೇಶದ ಯುವ ನಾಯಕರೊಬ್ಬರ ಮೇಲೆ ನಡೆದ ಎರಡನೇ ಗುಂಡಿನ ದಾಳಿ ಇದಾಗಿದೆ. 

ಬಾಂಗ್ಲಾದೇಶದಲ್ಲಿ ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು
Bangladesh Violence
ಸುಷ್ಮಾ ಚಕ್ರೆ
|

Updated on: Dec 22, 2025 | 5:13 PM

Share

ಢಾಕಾ, ಡಿಸೆಂಬರ್ 22: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹುಟ್ಟುಹಾಕಿದ ಷರೀಫ್ ಉಸ್ಮಾನ್ ಬಿನ್ ಹಾದಿ ಹತ್ಯೆಯ ಕೆಲವು ದಿನಗಳ ನಂತರ ಇಂದು ಬಾಂಗ್ಲಾದೇಶದಲ್ಲಿ (Bangladesh) ಮತ್ತೊಬ್ಬ ಯುವ ನಾಯಕನ ಮೇಲೆ ಗುಂಡು ಹಾರಿಸಲಾಗಿದೆ. ಯುವ ನಾಯಕನನ್ನು ಬಾಂಗ್ಲಾದೇಶದ ರಾಷ್ಟ್ರೀಯ ನಾಗರಿಕ ಪಕ್ಷದ ಖುಲ್ನಾ ವಿಭಾಗೀಯ ಮುಖ್ಯಸ್ಥ ಮೋತಲೆಬ್ ಸಿಕ್ದರ್ ಎಂದು ಗುರುತಿಸಲಾಗಿದೆ. ಅವರ ತಲೆಗೆ ಗುಂಡು ಹಾರಿಸಲಾಗಿದೆ.

ಮೋತಲೆಬ್ ಸಿಕ್ದರ್ ಅವರ ತಲೆಯ ಎಡಭಾಗಕ್ಕೆ ಗುಂಡು ಹಾರಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರು ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಎನ್‌ಸಿಪಿಯ ಕಾರ್ಮಿಕರ ಸಂಘಟನೆಯ ನಾಯಕ 42 ವರ್ಷದ ಮೊಹಮ್ಮದ್ ಮೋತಲೆಬ್ ಸಿಕ್ದರ್ ಅವರ ಮೇಲೆ ಇಂದು ಮಧ್ಯಾಹ್ನ 12.15ರ ಸುಮಾರಿಗೆ ಖುಲ್ನಾದ ಸೋನದಂಗ ಪ್ರದೇಶದ ಮನೆಯೊಂದರಲ್ಲಿ ಗುಂಡು ಹಾರಿಸಲಾಯಿತು.

ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ

32 ವರ್ಷದ ಹಾದಿ ಇಂಕಿಲಾಬ್ ಮೊಂಚೊ ಸ್ಥಾಪಕರಾಗಿದ್ದು, ಅವರು ಪದಚ್ಯುತ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಶೇಖ್ ಹಸೀನಾ ಅವರ ಸರ್ಕಾರದ ಪತನಕ್ಕೆ ಕಾರಣವಾಯಿತು. ಫೆಬ್ರವರಿ 12ರ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ಲಾನ್ ಮಾಡಿದ್ದ ಹಾದಿಗೆ ಈ ತಿಂಗಳ ಆರಂಭದಲ್ಲಿ ಢಾಕಾದಲ್ಲಿ ಪ್ರಚಾರ ನಡೆಸುತ್ತಿದ್ದಾಗ ತಲೆಗೆ ಗುಂಡು ಹಾರಿಸಲಾಗಿತ್ತು. ತಕ್ಷಣ ಹಾದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಅವರನ್ನು ಸಿಂಗಾಪುರಕ್ಕೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಕಳೆದ ವಾರ ನಿಧನರಾದರು. ಅವರ ಸಾವು ಬಾಂಗ್ಲಾದೇಶದಾದ್ಯಂತ ಭಾರಿ ಪ್ರತಿಭಟನೆಗಳನ್ನು ಹುಟ್ಟುಹಾಕಿತು. ಹಾದಿಯ ಹಂತಕರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಅವರ ಬೆಂಬಲಿಗರು ಆರೋಪಿಸಿ, ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. ಆದರೆ, ಈ ಆರೋಪವನ್ನು ಭಾರತ ತಳ್ಳಿಹಾಕಿತ್ತು.

ಇದನ್ನೂ ಓದಿ: Video: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ, ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ

ಹಾದಿ ಅವರ ಅಂತ್ಯಕ್ರಿಯೆಯನ್ನು ಶನಿವಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಸಮ್ಮುಖದಲ್ಲಿ ಬಿಗಿ ಭದ್ರತೆಯ ನಡುವೆ ನಡೆಸಲಾಯಿತು. ಹಾದಿಯ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಯೂನಸ್ ಭರವಸೆ ನೀಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ