AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Violence: ಬಾಂಗ್ಲಾದೇಶದಲ್ಲಿ ಪ್ರತಿಭಟನೆಯ ವೇಳೆ ಕಾರ್ಮಿಕನ ಸಾವು; ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು

ಜುಲೈ ಮಧ್ಯದಲ್ಲಿ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ ಸುಮಾರು 560 ಜನರು ಮೃತಪಟ್ಟಿದ್ದಾರೆ. ಇದು ಸರ್ಕಾರದ ವಿರೋಧಿ ಆಂದೋಲನವಾಗಿ ಬದಲಾಗಿ ಶೇಖ್ ಹಸೀನಾ ಅವರ ಉಚ್ಚಾಟನೆಯಲ್ಲಿ ಕೊನೆಗೊಂಡಿತು. ಬಾಂಗ್ಲಾದಿಂದ ಪಲಾಯನ ಮಾಡಿರುವ ಶೇಖ್ ಹಸೀನಾ ಪ್ರಸ್ತುತ ಭಾರತದಲ್ಲಿ ವಾಸಿಸುತ್ತಿದ್ದಾರೆ.

Bangladesh Violence: ಬಾಂಗ್ಲಾದೇಶದಲ್ಲಿ ಪ್ರತಿಭಟನೆಯ ವೇಳೆ ಕಾರ್ಮಿಕನ ಸಾವು; ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು
ಶೇಖ್ ಹಸೀನಾ
ಸುಷ್ಮಾ ಚಕ್ರೆ
|

Updated on: Aug 13, 2024 | 4:37 PM

Share

ಢಾಕಾ: ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕಿರಾಣಿ ಅಂಗಡಿಯ ಕೆಲಸಗಾರನ ಸಾವಿನ ನಡುವೆ ಉದ್ಯೋಗ ಕೋಟಾದ ವ್ಯಾಪಕ ಪ್ರತಿಭಟನೆಯ ಸಂದರ್ಭದಲ್ಲಿ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರತಿಭಟನೆಗಳು ಪ್ರಾರಂಭವಾಗುವ ಮೊದಲೇ ವಿವಾದಗಳಲ್ಲಿ ಮುಳುಗಿರುವ 76 ವರ್ಷದ ನಾಯಕಿ ಶೇಖ್ ಹಸೀನಾ ಅವರ ವಿರುದ್ಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ಢಾಕಾ ಟ್ರಿಬ್ಯೂನ್ ಪ್ರಕಾರ, ಮೊಹಮ್ಮದ್‌ಪುರದಲ್ಲಿ ಕೋಟಾ ಸುಧಾರಣಾ ಆಂದೋಲನವನ್ನು ಬೆಂಬಲಿಸುವ ಮೆರವಣಿಗೆಯಲ್ಲಿ ಜುಲೈ 19ರಂದು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಕಿರಾಣಿ ಅಂಗಡಿಯ ಮಾಲೀಕ ಅಬು ಸೈಯದ್ ಅವರ ಹಿತೈಷಿ ಈ ಪ್ರಕರಣವನ್ನು ದಾಖಲಿಸಿದ್ದಾರೆ. ಅವಾಮಿ ಲೀಗ್‌ನ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾಡರ್, ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಕಮಾಲ್ ಮತ್ತು ಮಾಜಿ ಪೊಲೀಸ್ ಮಹಾನಿರೀಕ್ಷಕ ಚೌಧುರಿ ಅಬ್ದುಲ್ಲಾ ಅಲ್ ಮಾಮುನ್ ಸೇರಿದಂತೆ ಇತರರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಬಾಂಗ್ಲಾದೇಶದ ಸೇಂಟ್ ಮಾರ್ಟಿನ್ ದ್ವೀಪದ ಮೇಲೆ ಅಮೆರಿಕ ಕಣ್ಣಿಟ್ಟಿದ್ದೇಕೆ?; ಇದೇ ಶೇಖ್ ಹಸೀನಾ ಪತನಕ್ಕೆ ಕಾರಣವಾಯಿತೇ?

ಅಲ್ಲದೆ, ಹಲವಾರು ಹೆಸರು ಹೇಳಲಿಚ್ಛಿಸದ ಉನ್ನತ ಶ್ರೇಣಿಯ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ಆಗಸ್ಟ್ 5ರಂದು ಶೇಖ್ ಹಸೀನಾ ಸರ್ಕಾರದ ಪತನದ ನಂತರ ದೇಶಾದ್ಯಂತ ಭುಗಿಲೆದ್ದ ಹಿಂಸಾಚಾರದ ಘಟನೆಗಳಲ್ಲಿ ಬಾಂಗ್ಲಾದೇಶದಲ್ಲಿ 230ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜುಲೈನಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ವಿರುದ್ಧ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ ಸಾವಿನ ಸಂಖ್ಯೆ 560ಕ್ಕೆ ತಲುಪಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ