AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ ಹಿಂಸಾಚಾರ: ಮೀಸಲಾತಿ ಕಡಿಮೆಗೊಳಿಸಿದ ಸುಪ್ರೀಂಕೋರ್ಟ್; ಪ್ರತಿಭಟನೆ ಬಿಟ್ಟು ತರಗತಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶ

Bangladesh Supreme Court order: ಮೀಸಲಾತಿ ವಿಚಾರದಲ್ಲಿ ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಶೇ. 56ರಷ್ಟಿದ್ದ ಮೀಸಲಾತಿಯನ್ನು ಶೇ. 7ಕ್ಕೆ ಇಳಿಸಿದೆ. ಆದರೆ, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡುತ್ತಿರುವ ಮೀಸಲಾತಿಯನ್ನು ಹಿಂಪಡೆಯಲು ಕೋರ್ಟ್ ನಿರಾಕರಿಸಿದೆ. ಆದರೆ, ಅವರಿಗೆ ಕೊಡಲಾಗುತ್ತಿದ್ದ ಶೇ. 30ರಷ್ಟು ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಿದೆ.

ಬಾಂಗ್ಲಾದೇಶ ಹಿಂಸಾಚಾರ: ಮೀಸಲಾತಿ ಕಡಿಮೆಗೊಳಿಸಿದ ಸುಪ್ರೀಂಕೋರ್ಟ್; ಪ್ರತಿಭಟನೆ ಬಿಟ್ಟು ತರಗತಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶ
ಬಾಂಗ್ಲಾ ಸುಪ್ರೀಂಕೋರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2024 | 3:09 PM

Share

ಢಾಕಾ, ಜುಲೈ 21: ಬಾಂಗ್ಲಾದೇಶದಲ್ಲಿ ಹೊತ್ತಿ ಉರಿಯುತ್ತಿರುವ ಮೀಸಲಾತಿ ಧಗೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಶೇ. 56ರಷ್ಟಿದ್ದ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ. 7ಕ್ಕೆ ಇಳಿಸಿದೆ. ಆದರೆ ಪ್ರತಿಭಟನೆಗೆ ಕಾರಣವಾಗಿದ್ದ ಸ್ವಾತಂತ್ರ್ಯ ಯೋಧರ ಕುಟುಂಬದ ಮೀಸಲಾತಿಯನ್ನು ಕೋರ್ಟ್ ಕೈಬಿಟ್ಟಿಲ್ಲ. ಆದರೆ, ಅವರ ಮೀಸಲಾತಿ ಮುಂದುವರಿದಿದೆಯಾದರೂ ಪ್ರಮಾಣ ಮಾತ್ರ ತುಸು ತಗ್ಗಿದೆ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಸೀಮಿತಗೊಳಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.

ಇಂದು ತೀರ್ಪು ಪ್ರಕಟಿಸಿದ ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯ, ಪ್ರತಿಭಟನೆಗಳನ್ನು ಕೈಬಿಟ್ಟು ತರಗತಿಗಳಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ. ಆದರೆ, ಸ್ವಾತಂತ್ರ್ಯ ಯೋಧರ ಬಂಧುಗಳಿಗೆ ಮೀಸಲಾತಿ ಕೊಡುತ್ತಿರುವುದರ ವಿರುದ್ಧವೇ ನಡೆಯುತ್ತಿರುವ ಪ್ರತಿಭಟನೆ ಈಗ ಕೋರ್ಟ್ ಆದೇಶದಿಂದ ನಿಲ್ಲುತ್ತದಾ ಕಾದುನೋಡಬೇಕು. ಈವರೆಗೆ ಈ ಕಿಚ್ಚಿಗೆ ಬಲಿಯಾದವರ ಸಂಖ್ಯೆ 151 ಇದೆ. ಪ್ರಧಾನಿ ಶೇಖರ್ ಹಸೀನಾ ಅವರು ತಮ್ಮ ವಿದೇಶೀ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು.

ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿರುವುದು ಯಾಕೆ?

ಬಾಂಗ್ಲಾದೇಶದಲ್ಲಿ ಒಟ್ಟಾರೆ ಮೀಸಲಾತಿ ಶೇ. 56ರಷ್ಟಿದೆ. ಇದರಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದವರ ಕುಟುಂಬ ಸದಸ್ಯರು ಮತ್ತು ಬಂಧುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ. 30ರಷ್ಟು ಮೀಸಲಾತಿ ಕೊಡುವ ಹೊಸ ನೀತಿಯನ್ನು ಸರ್ಕಾರ ಜಾರಿಗೆ ತಂದಿತು. ಇದು ವಿದ್ಯಾರ್ಥಿ ವಲಯದಲ್ಲಿ ಬೃಹತ್ ಪ್ರತಿಭಟನೆಗೆ ಎಡೆ ಮಾಡಿಕೊಟ್ಟಿದೆ. ನಿರುದ್ಯೋಗ ಹೆಚ್ಚಿರುವಾಗ ಇಷ್ಟು ಮೀಸಲಾತಿ ಕೊಡುವುದು ಎಷ್ಟು ಸರಿ ಎಂಬುದು ಪ್ರತಿಭಟನಾಕಾರರ ಆಕ್ಷೇಪ.

ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಬಾಂಗ್ಲಾದೇಶದಿಂದ 1,000 ಭಾರತೀಯ ವಿದ್ಯಾರ್ಥಿಗಳು ವಾಪಸ್

ಸದ್ಯ ಶೇ. 56ರಷ್ಟಿದ್ದ ಒಟ್ಟು ಮೀಸಲಾತಿಯನ್ನು ಶೇ. 7ಕ್ಕೆ ಇಳಿಸಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಿದೆ. ಇನ್ನುಳಿದ ಮೀಸಲಾತಿಯಲ್ಲಿ ಬುಡಕಟ್ಟು ಸಮುದಾಯಗಳು ಮತ್ತು ವಿಶೇಷ ಚೇತನರು ಹಾಗು ತೃತೀಯ ಲಿಂಗಿಗಳಿಗೆ ಪಾಲು ಕೊಡಬೇಕು. ಉಳಿದ ಶೇ. 93ರಷ್ಟು ಸ್ಥಾನಗಳಿಗೆ ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಯಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ