ಅಮೆರಿಕದ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ, ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಭಾರತ
ಅಮೆರಿಕದಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿ ಸೈನ್ಬೋರ್ಡ್ಗಳನ್ನು ಕೂಡ ನಾಶಪಡಿಸಿದ್ದಾರೆ. ಈ ಕುರಿತು ಭಾರತವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸ್ವೀಕಾರಾರ್ಹವಲ್ಲ, ಆರೋಪಿಗಳಿಗೆ ಶಿಕ್ಷೆಯಾಗಲೇಬೇಕೆಂದು ಹೇಳಿದೆ.
ಅಮೆರಿಕದ ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದ್ದು, ಇದು ಸ್ವೀಕಾರಾರ್ಹವಲ್ಲ ಎಂದು ಭಾರತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ದೇವಸ್ಥಾನದ ಗೋಡೆಗಳ ಮೇಲೆ ಹಾಗೂ ದೇವಸ್ಥಾನದ ಹೊರಭಾಗದ ರಸ್ತೆಯಲ್ಲಿ ಆಕ್ಷೇಪಾರ್ಹ ಪದಗಳನ್ನು ಬರೆಯಲಾಗಿದೆ.
ಈ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಆಕ್ಷೇಪಣೆ ಸಲ್ಲಿಸಿದ್ದಾರೆ. ನಾವು ಈ ವಿಷಯವನ್ನು ಅಮೆರಿಕದ ಕಾನೂನು ಜಾರಿ ಅಧಿಕಾರಿಗಳೊಂದಿಗೆ ಪ್ರಸ್ತಾಪಿಸಿದ್ದೇವೆ ಮತ್ತು ಈ ಅಪರಾಧ ಮಾಡಿದ ಜನರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದೇವೆ ಎಂದು ಕಾನ್ಸುಲೇಟ್ ಹೇಳಿದೆ. ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ.
ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹೇಳಿಕೆಯನ್ನು ನೀಡಿದೆ. ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನದ ಬಳಿಯ ಸೈನ್ ಬೋರ್ಡ್ ಒಡೆದ ಘಟನೆ ಸ್ವೀಕಾರಾರ್ಹವಲ್ಲ ಎಂದು ಅದು ಹೇಳಿದೆ.
ಮತ್ತಷ್ಟು ಓದಿ: ಕೆನಡಾದಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ
ಮೆಲ್ವಿಲ್ಲೆ ಲಾಂಗ್ ಐಲ್ಯಾಂಡ್‌ನ ಸಫೊಲ್ಕ್ ಕೌಂಟಿಯಲ್ಲಿದೆ, ದು ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿದೆ, ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 22 ರಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಹಿಂದೂ-ಅಮೆರಿಕನ್ ಸಂಘಟನೆಯು ಈ ದಾಳಿಯನ್ನು ಖಂಡಿಸಿದೆ ಮತ್ತು ಯುಎಸ್ ಸರ್ಕಾರದಿಂದ ತನಿಖೆಗೆ ಒತ್ತಾಯಿಸಿದೆ. ಈ ವರ್ಷದ ಜನವರಿಯಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿತ್ತು.
ಕ್ಯಾಲಿಫೋರ್ನಿಯಾದ ಹೇವರ್ಡ್‌ನಲ್ಲಿರುವ ವಿಜಯ್ ಶೇರಾವಾಲಿ ದೇವಸ್ಥಾನದಲ್ಲಿ ಖಲಿಸ್ತಾನಿ ಬೆಂಬಲಿಗರು ಭಾರತ ವಿರೋಧಿ ವಿಷಯಗಳನ್ನು ಬರೆದಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:38 am, Tue, 17 September 24