AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ

ಎಂಡಿಎಚ್​ ಮಸಾಲವು ಜಾಗತಿಕ ಪರಿಶೀಲನೆಗೂ ಮುನ್ನವೇ ತಿರಸ್ಕೃತಗೊಂಡಿದೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ ಆಡಳಿತ ನಿಷೇಧ ಹೇರಿದೆ.

ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ
ಮಸಾಲ
ನಯನಾ ರಾಜೀವ್
|

Updated on:May 13, 2024 | 9:07 AM

Share

ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಲ್ಲಿ ಎಂಡಿಎಚ್(MDH)​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ ಆಡಳಿತ ನಿಷೇಧ ಹೇರಿದೆ. ಬ್ಯಾಕ್ಟೀರಿಯಾ ಪತ್ತೆಯಾದ ಸಾಂಬಾರ್ ಮಸಾಲವನ್ನು ಉತ್ತರ ಕ್ಯಾಲಿಫೋರ್ನಿಯಾದಲ್ಲಿ ವಿತರಿಸಲಾಗಿತ್ತು ಎಂದು ಆನ್​ಲೈನ್ ಮಾರಾಟ ಮಳಿಗೆ ಹೌಸ್ ಆಫ್ ಸ್ಪೈಸಸ್ ತಿಳಿಸಿತ್ತು. ಸದ್ಯ ಅಲ್ಲಿಂದ ಉತ್ಪನ್ನಗಳನ್ನು ಹಿಂಪಡೆಯಲಾಗಿದೆ.

ಏನಿದು ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಸಾಲ್ಮೋನೆಲ್ಲಾ ಎಂಬುದು ಬ್ಯಾಕ್ಟೀರಿಯಾ, ಆಹಾರಗಳ ಮೂಲಕ ಪಸರಿಸುವ ಸೋಂಕು ಇದಾಗಿದೆ. ಸಾಲ್ಮೋನಲ್ ಸೋಂಕು ತಗುಲಿ 12 ಗಂಟೆಯ ಬಳಿಕ ಅತಿಸಾರ, ಬೇಧಿ, ಹೊಟ್ಟೆನೋವು, ಜ್ವರ ಕಾಣಿಸಿಕೊಳ್ಳುತ್ತದೆ, ಕೆಲವೊಮ್ಮೆ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಗೂ ತಲುಪುತ್ತದೆ.

ಹಾಂಗ್​ಕಾಂಗ್ ಕಳೆದ ತಿಂಗಳು ಎಂಡಿಎಚ್ ಹಾಗೂ ಇನ್ನೊಂದು ಭಾರತೀಯ ಕಂಪನಿ ಎವರೆಸ್ಟ್​ನಿಂದ ತಯಾರಿಸಿದ ಮೂರು ಮಸಾಲೆ ಪದಾರ್ಥಗಳ ಮಿಶ್ರಣಗಳ ಮಾರಾಟವನ್ನು ಸ್ಥಗಿತಗೊಳಿಸಿತು. ಇದರಲ್ಲಿ ಕ್ಯಾನ್ಸರ್​ ಉಂಟು ಮಾಡುವ ಕೀಟನಾಶಕಗಳನ್ನು ಹೊಂದಿತ್ತು. ಎಥಲೀನ್ ಆಕ್ಸೈಡ್ ಮಾನವನ ಬಳಕೆಗೆ ಅನರ್ಹವಾಗಿದೆ ಮತ್ತು ದೀರ್ಘಕಾಲ ಬಳಕೆ ಮಾಡಿದರೆ ಕ್ಯಾನ್ಸರ್ ಅಪಾಯವಿದೆ ಎಂದು ಹೇಳಲಾಗಿತ್ತು.

ಕಂಪನಿಗಳು ತಮ್ಮ ಉತ್ಪನ್ನಗಳನ್ನು ಸುರಕ್ಷಿತವೆಂದು ಹೇಳಿವೆ, ಮಸಾಲೆ ಸಂಗ್ರಹಿಸುವ, ಸಂಸ್ಕರಿಸುವ ಅಥವಾ ಪ್ಯಾಕಿಂಗ್​ ಮಾಡುವ ಯಾವುದೇ ಹಂತದಲ್ಲಿ ಎಥಲೀನ್ ಅಕ್ಸೈಡ್​ಗಳನ್ನು ಬಳಸುವುದಿಲ್ಲ ಎಂದು ಎಂಡಿಎಚ್ ಹೇಳಿದೆ. ಯುನೈಟೆಡ್ ಸ್ಟೇಟ್ಸ್​, ಆಸ್ಟ್ರೇಲಿಯಾ ಹಾಗೂ ಭಾರತದ ಅಧಿಕಾರಿಗಳು ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಬ್ರ್ಯಾಂಡ್​ಗಳು ಭಾರತದಲ್ಲಿ ಜನಪ್ರಿಯವಾಗಿವೆ ಹಾಗೂ ಪ್ರಪಂಚಾದ್ಯಂತ ರಫ್ತಾಗುತ್ತಿದೆ.

ಮತ್ತಷ್ಟು ಓದಿ: ನೀವು ಬಳಸುವ ಮಸಾಲೆ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆಯೇ?

ಹಾಂಗ್​ಕಾಂಗ್​ ಹಾಗೂ ಸೀಮಗಾಪುರದಲ್ಲಿ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರುವುದಕ್ಕೆ ಸಂಬಂಧಿಸಿದಂತೆ ಅಲ್ಲಿನ ಆಹಾರ ಸುರಕ್ಷತೆ ಕೇಂದ್ರಗಳು ಸಿದ್ಧಪಡಿಸಿರುವ ವರದಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಪರಿಶೀಲನೆಗೂ ಮುನ್ನವೇ ಅಮೆರಿಕ ಈ ಮಸಾಲೆ ಪದಾರ್ಥಗಳನ್ನು ತಿರಸ್ಕರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:07 am, Mon, 13 May 24

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?