AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ಆದೇಶಿಸಿದ್ದರಾ ಇಸ್ರೇಲ್ ಪ್ರಧಾನಿ ನೆತನ್ಯಾಹು?

ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗೆ ಸಂಬಂಧಿಸಿದ ಚರ್ಚೆಗಳಿಗಾಗಿ ಸ್ವಿಟ್ಜರ್ಲೆಂಡ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮತ್ತು ಪಾಕಿಸ್ತಾನಿ ನಿಯೋಗದ ಸದಸ್ಯರನ್ನು ಹತ್ಯೆ ಮಾಡಲು ಇಸ್ರೇಲ್‌ನ ಗುಪ್ತಚರ ಸಂಸ್ಥೆ 'ಮೊಸಾದ್' ಯೋಜಿಸಿತ್ತು ಎಂದು ಬ್ರೆಜಿಲ್‌ನ ಪತ್ರಕರ್ತರೊಬ್ಬರು ಕೆಲವು ರಹಸ್ಯವಾದ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಪಶ್ಚಿಮ ಏಷ್ಯಾದ ಸಂಘರ್ಷವನ್ನು ಕೊನೆಗೊಳಿಸುವ ಉದ್ದೇಶದಿಂದ ಇರಾನ್ ಮತ್ತು ಅಮೆರಿಕ ದೇಶಗಳು ಮೊದಲ ಸುತ್ತಿನ ಮಾತುಕತೆಗಳನ್ನು ಪೂರ್ಣಗೊಳಿಸುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಮತ್ತು ಕತಾರ್‌ನ ನಿಯೋಗಗಳು ಸ್ವಿಟ್ಜರ್ಲೆಂಡ್‌ನ ಬರ್ಗೆನ್‌ಸ್ಟಾಕ್ ರೆಸಾರ್ಟ್‌ನಲ್ಲಿದ್ದವು. ಅಗ ಈ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ.

ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ಆದೇಶಿಸಿದ್ದರಾ ಇಸ್ರೇಲ್ ಪ್ರಧಾನಿ ನೆತನ್ಯಾಹು?
Asim Munir With Shebaz SharifImage Credit source: AP
ಸುಷ್ಮಾ ಚಕ್ರೆ
|

Updated on: Jun 24, 2026 | 11:03 PM

Share

ಮುಖ್ಯಾಂಶಗಳು

  • ಸ್ವಿಜರ್ಲೆಂಡ್​​ನಲ್ಲಿ ಪಾಕ್ ಸೇನಾ ಮುಖ್ಯಸ್ಥರ ಹತ್ಯೆಗೆ ನಡೆದಿತ್ತಾ ಸಂಚು?
  • ಬ್ರೆಜಿಲ್ ಪತ್ರಕರ್ತ ಬಿಚ್ಚಿಟ್ಟರು ಇಸ್ರೇಲ್ ಪ್ರಧಾನಿಯ ರಹಸ್ಯ
  • ಅಸೀಮ್ ಮುನೀರ್ ಮೇಲೆ ನೆತನ್ಯಾಹುಗೆ ಸಿಟ್ಟೇಕೆ?

ಟೆಲ್ ಅವಿವ್, ಜೂನ್ 24: ಅಂತಾರಾಷ್ಟ್ರೀಯ ರಾಜತಾಂತ್ರಿಕ ಮತ್ತು ಗುಪ್ತಚರ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಸ್ಫೋಟಕ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಸ್ವಿಟ್ಜರ್ಲೆಂಡ್‌ ಪ್ರವಾಸದಲ್ಲಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ (Asim Munir) ಅವರನ್ನು ಹತ್ಯೆ ಮಾಡಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ದೇಶದ ರಹಸ್ಯ ಗುಪ್ತಚರ ಸಂಸ್ಥೆಯಾದ ‘ಮೊಸಾದ್’ಗೆ ಆದೇಶ ನೀಡಿದ್ದರು ಎಂದು ಬ್ರೆಜಿಲ್‌ನ ಖ್ಯಾತ ಪತ್ರಕರ್ತರೊಬ್ಬರು ಆರೋಪ ಮಾಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ನಿಧನದ ಸುತ್ತಲಿನ ಬೆಳವಣಿಗೆಗಳ ಬೆನ್ನಲ್ಲೇ ಈ ವರದಿ ಹೊರಬಿದ್ದಿರುವುದು ಭಾರಿ ಕುತೂಹಲ ಮೂಡಿಸಿದೆ. ವರದಿಗಳ ಪ್ರಕಾರ, ಬ್ರೆಜಿಲ್‌ನ ತನಿಖಾ ಪತ್ರಕರ್ತರೊಬ್ಬರು ಜಾಗತಿಕ ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ ಎಂದು ‘ಮನಿ ಕಂಟ್ರೋಲ್’ ವರದಿ ಮಾಡಿದೆ.

ಇದನ್ನೂ ಓದಿ: Video: ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು, ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಇರಾನ್ ಖಂಡನೆ

ಸ್ವಿಟ್ಜರ್ಲೆಂಡ್‌ನಲ್ಲಿ ಹತ್ಯೆಗೆ ಸಂಚು:

ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅಧಿಕೃತ ಭೇಟಿಯ ನಿಮಿತ್ತ ಸ್ವಿಟ್ಜರ್ಲೆಂಡ್‌ನಲ್ಲಿದ್ದಾಗ ಅವರನ್ನು ಗುರಿಯಾಗಿಸಿ ಹತ್ಯೆ ಮಾಡಲು ಮೊಸಾದ್‌ನ ಹಿಟ್‌ ಸ್ಕ್ವಾಡ್‌ಗೆ ನೆತನ್ಯಾಹು ಸೂಚನೆ ನೀಡಿದ್ದರು ಎನ್ನಲಾಗಿದೆ. ಇಸ್ರೇಲ್ ಮತ್ತು ಹಮಾಸ್-ಹೆಜ್ಬೊಲ್ಲಾ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನದ ಮಿಲಿಟರಿ ನಾಯಕತ್ವವು ಇರಾನ್ ಮತ್ತು ಇತರ ಇಸ್ಲಾಮಿಕ್ ದೇಶಗಳಿಗೆ ರಹಸ್ಯವಾಗಿ ಶಸ್ತ್ರಾಸ್ತ್ರ ಅಥವಾ ತಾಂತ್ರಿಕ ಬೆಂಬಲ ನೀಡಲು ಮುಂದಾಗಿತ್ತು ಎಂಬ ಹಿನ್ನೆಲೆಯಲ್ಲಿ ಇಸ್ರೇಲ್ ಈ ಕಠಿಣ ನಿರ್ಧಾರಕ್ಕೆ ಮುಂದಾಗಿತ್ತು ಎಂದು ಬ್ರೆಜಿಲ್ ಪತ್ರಕರ್ತ ಹೇಳಿದ್ದಾರೆ.

ಕೊನೆ ಕ್ಷಣದಲ್ಲಿ ಆಗಿದ್ದೇನು?:

ಬ್ರೆಜಿಲಿಯನ್ ಪತ್ರಕರ್ತನ ವರದಿಯ ಪ್ರಕಾರ, ಮೊಸಾದ್ ಬಹಳ ಜಾಣತನದಿಂದಲೇ ಈ ಹತ್ಯಾ ಕಾರ್ಯಾಚರಣೆಯನ್ನು ಯೋಜಿಸಿತ್ತು. ಆದರೆ, ಸ್ವಿಟ್ಜರ್ಲೆಂಡ್‌ನ ಸ್ಥಳೀಯ ಭದ್ರತಾ ಏಜೆನ್ಸಿಗಳು ಅಥವಾ ಇತರ ಮಿತ್ರ ರಾಷ್ಟ್ರಗಳ ಗುಪ್ತಚರ ಇಲಾಖೆಗಳಿಗೆ ಈ ವಿಷಯ ಮುಂಚಿತವಾಗಿಯೇ ತಿಳಿದುಬಂದ ಹಿನ್ನೆಲೆಯಲ್ಲಿ, ರಾಜತಾಂತ್ರಿಕ ಬಿಕ್ಕಟ್ಟನ್ನು ತಪ್ಪಿಸಲು ಕೊನೆಯ ಕ್ಷಣದಲ್ಲಿ ಈ ಕಾರ್ಯಾಚರಣೆಯನ್ನು ಕೈಬಿಡಲಾಯಿತು ಅಥವಾ ಮುಂದೂಡಲಾಯಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ಅಧಿಕೃತ ಪ್ರತಿಕ್ರಿಯೆಗಳಿಲ್ಲ:

ಈ ಆಘಾತಕಾರಿ ಆರೋಪದ ಕುರಿತು ಇಸ್ರೇಲ್ ಸರ್ಕಾರದ ಪ್ರಧಾನಿ ಕಚೇರಿಯಾಗಲಿ ಅಥವಾ ಮೊಸಾದ್ ಆಗಲಿ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಸಾಮಾನ್ಯವಾಗಿ ಮೊಸಾದ್ ತನ್ನ ರಹಸ್ಯ ಕಾರ್ಯಾಚರಣೆಗಳ ಬಗ್ಗೆ ಎಂದಿಗೂ ಬಹಿರಂಗವಾಗಿ ಪ್ರತಿಕ್ರಿಯಿಸುವುದಿಲ್ಲ. ಇತ್ತ ಪಾಕಿಸ್ತಾನದ ಸೇನೆಯಾಗಲಿ ಅಥವಾ ಅಲ್ಲಿನ ವಿದೇಶಾಂಗ ಸಚಿವಾಲಯವಾಗಲಿ ಈ ವರದಿಯನ್ನು ಅಧಿಕೃತವಾಗಿ ದೃಢೀಕರಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ