ವಿದ್ಯಾರ್ಥಿಗಳಿಗೆ ಕ್ರಿಸ್ಮಸ್​ ಉಡುಗೊರೆ ನೀಡಿದ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್; ಮಹತ್ವದ ನಿರ್ಧಾರ ಘೋಷಣೆ

ಕಾಲೇಜು ಶಿಕ್ಷಣವು ಬದುಕಿನ ಏಣಿಯಾಗಬೇಕು, ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವು ಅವರನ್ನು ಹಿಂದಕ್ಕೆ ಎಳೆಯುತ್ತಿದೆ. ಯುಎಸ್ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಈ ಬಗ್ಗೆ ಹೊಸ ಯೋಜನೆಯ ಭರವಸೆ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಕ್ರಿಸ್ಮಸ್​ ಉಡುಗೊರೆ ನೀಡಿದ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್; ಮಹತ್ವದ ನಿರ್ಧಾರ ಘೋಷಣೆ
ಭಾರತೀಯ ಮೂಲದ ಅಮೆರಿಕನ್ನರ ಕುರಿತು ಶ್ಲಾಘನೆ ವ್ಯಕ್ತವಾಗಿದೆ.
Follow us
TV9 Web
| Updated By: ganapathi bhat

Updated on:Apr 06, 2022 | 11:20 PM

ಜನವರಿ 20ರಂದು ಶ್ವೇತಭವನ ಪ್ರವೇಶಿಸಲಿರುವ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಹೊಸ ಶೈಕ್ಷಣಿಕ ಯೋಜನೆಯೊಂದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ,  ಯುಎಸ್ ವಿದ್ಯಾರ್ಥಿಗಳಿಗೆ ಕ್ರಿಸ್ಮಸ್  ಉಡುಗೊರೆ ನೀಡಿದ್ದಾರೆ.

ಜೋ ಬೈಡನ್, ಅಮೆರಿಕಾದ ಕಮ್ಯುನಿಟಿ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡುವ ಯೋಜನೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.. ಇಂದಿನ 21ನೇ ಶತಮಾನದಲ್ಲಿ 12 ವರ್ಷಗಳ ಕಲಿಕೆ ಸಾಕಾಗುವುದಿಲ್ಲ. ಹಾಗಾಗಿ, ಬೈಡನ್-ಹ್ಯಾರಿಸ್ ಯೋಜನೆಯಡಿ,  ಸಮುದಾಯ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು. ಹಾಗೇ ಪಬ್ಲಿಕ್ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ, 1.25 ಲಕ್ಷ ಅಮೆರಿಕನ್ ಡಾಲರ್​ಗಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಶೈಕ್ಷಣಿಕ ಕಾಳಜಿಯನ್ನು ಮೆರೆದಿದ್ದಾರೆ.

ಅಮೆರಿಕಾದಲ್ಲಿ ಕಾರ್ಮಿಕ ವರ್ಗದ (1.25 ಲಕ್ಷ ಅಮೆರಿಕನ್ ಡಾಲರ್​ಗಿಂತ ಕಡಿಮೆ ಆದಾಯ ಹೊಂದಿರುವ) ಬಹುಪಾಲು ಜನರು ವರ್ಣೀಯರಾಗಿದ್ದಾರೆ. ಬೈಡನ್ -ಹ್ಯಾರಿಸ್ ಪಕ್ಷದ ಗೆಲುವಿಗೆ ಕಾರಣರಾದ ಅಂತಹ ಕುಟುಂಬಗಳಿಗೆ ಈ ಯೋಜನೆಯಿಂದ ಸಹಾಯವಾಗಲಿದೆ ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

ಬೈಡನ್​ ಪಕ್ಷದ ಇತರ ನಾಯಕರೂ ಇಂತಹ ಯೋಜನೆಯನ್ನು ಕಾರ್ಯರೂಪಗೊಳಿಸಬೇಕು ಎಂದು ಈ ಹಿಂದೆ ಅಭಿಪ್ರಾಯಪಟ್ಟಿದ್ದರು. ಅಮೆರಿಕದ ವಿದ್ಯಾರ್ಥಿಗಳು ಎದುರಿಸುತ್ತಿರುವ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಬಗ್ಗೆ ಯೋಚಿಸಿದ್ದರು. ಕಾಲೇಜು ಶಿಕ್ಷಣವು ಬದುಕಿನ ಏಣಿಯಾಗಬೇಕು, ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವು ಅವರನ್ನು ಹಿಂದಕ್ಕೆ ಎಳೆಯುತ್ತಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿದ್ದವು. ಇದೀಗ ಬೈಡನ್ ಹೊಸ ಭರವಸೆ ನೀಡಿರುವುದು ಅಮೆರಿಕನ್ನರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ರಾಷ್ಟ್ರದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು. ವಿಶ್ವದ ವಿವಿಧ ದೇಶಗಳು ಈ ನೆಲೆಯಲ್ಲಿ ಕೆಲಸ ಮಾಡುತ್ತಿವೆ. ತನ್ನ ಭವಿಷ್ಯದ ಅಭಿವೃದ್ಧಿಗಾಗಿ ಇಂದಿನ ವಿದ್ಯಾರ್ಥಿಗಳನ್ನು ಉತ್ತಮ ಹಾದಿಯಲ್ಲಿ ಕೊಂಡೊಯ್ಯಲು ಪ್ರಯತ್ನಿಸುತ್ತಿವೆ. ಈಗಾಗಲೇ ಭಾರತದಲ್ಲೂ ಈ ಬಗ್ಗೆ ಕೆಲಸಗಳಾಗುತ್ತಿರುವುದನ್ನು ನಾವು ಗಮನಿಸಬಹುದು. ನೂತನ ಶಿಕ್ಷಣ ಪದ್ಧತಿಯಂತಹ ಯೋಜನೆಗಳಿಂದ ಶೈಕ್ಷಣಿಕ ಕ್ಷೇತ್ರದ ಬದಲಾವಣೆಗೆ ದೇಶ ಶ್ರಮಿಸುತ್ತಿದೆ. ಬಿಸಿಯೂಟ ಯೋಜನೆ, ಉಚಿತ ಸೈಕಲ್ ವಿತರಣೆ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಇತ್ಯಾದಿ ಯೋಜನೆಗಳನ್ನೂ ನಾವು ಸ್ಮರಿಸಬಹುದು.

36 ದಿನಕ್ಕೆ ಮುಂಚೆ ಕೊನೆಗೂ ಜೋ ಬೈಡನ್ ಗೆಲುವನ್ನು ದೃಢೀಕರಿಸಿದ US ಚುನಾವಣಾ ಆಯೋಗ

Published On - 1:11 pm, Sat, 26 December 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ