AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ಗೆ ಸೋಲು, ಅಮೆರಿಕದ ಅಧ್ಯಕ್ಷರಾಗಿ ಬೈಡೆನ್ ಆಯ್ಕೆ | Biden to be 46th President of US, Trump loses

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾಗಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಬೈಡನ್ ಆಯ್ಕೆಯಾಗಿರುವ ಬಗ್ಗೆ ಅಧಿಕೃತ ಘೋಷಣೆಯಾಗಿದೆ. ಬೈಡನ್‌ 284 ಮತ ಗಳಿಸಿದರೆ, ಪುನರಾಯ್ಕೆ ಬಯಸಿದ್ದ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ 214 ಮತಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮ್ಯಾಜಿಕ್ ನಂಬರ್‌ಗಿಂತ 270ಕ್ಕಿಂತ 14 ಹೆಚ್ಚು ಮತಗಳನ್ನು ಬೈಡನ್‌ ಪಡೆದಿದ್ದಾರೆ. ಬೈಡನ್ ಗೆಲುವನ್ನು ಅಧಿಕಾರಿಗಳ ವರ್ಗ ಒಪ್ಪಿಕೊಂಡಿದೆ. ಅಧಿಕೃತ ಘೋಷಣೆ ಹೊರಬೀಳುತ್ತಿದ್ದಂತೆಯೇ, ಬೈಡನ್​ಗೆ ಅಮೇರಿಕಾದ ಸೀಕ್ರೆಟ್ ಸರ್ವಿಸ್ ಭದ್ರತೆಯನ್ನು ಹೆಚ್ಚಿಸಿದೆ. ಅವರ ನಿವಾಸದ ಮೇಲೆ ವಿಮಾನ ಸಂಚಾರವನ್ನು ಫೆಡರಲ್ […]

ಟ್ರಂಪ್​ಗೆ ಸೋಲು, ಅಮೆರಿಕದ ಅಧ್ಯಕ್ಷರಾಗಿ ಬೈಡೆನ್ ಆಯ್ಕೆ | Biden to be 46th President of US, Trump loses
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 07, 2020 | 10:57 PM

Share

ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾಗಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಬೈಡನ್ ಆಯ್ಕೆಯಾಗಿರುವ ಬಗ್ಗೆ ಅಧಿಕೃತ ಘೋಷಣೆಯಾಗಿದೆ. ಬೈಡನ್‌ 284 ಮತ ಗಳಿಸಿದರೆ, ಪುನರಾಯ್ಕೆ ಬಯಸಿದ್ದ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ 214 ಮತಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮ್ಯಾಜಿಕ್ ನಂಬರ್‌ಗಿಂತ 270ಕ್ಕಿಂತ 14 ಹೆಚ್ಚು ಮತಗಳನ್ನು ಬೈಡನ್‌ ಪಡೆದಿದ್ದಾರೆ.

ಬೈಡನ್ ಗೆಲುವನ್ನು ಅಧಿಕಾರಿಗಳ ವರ್ಗ ಒಪ್ಪಿಕೊಂಡಿದೆ. ಅಧಿಕೃತ ಘೋಷಣೆ ಹೊರಬೀಳುತ್ತಿದ್ದಂತೆಯೇ, ಬೈಡನ್​ಗೆ ಅಮೇರಿಕಾದ ಸೀಕ್ರೆಟ್ ಸರ್ವಿಸ್ ಭದ್ರತೆಯನ್ನು ಹೆಚ್ಚಿಸಿದೆ. ಅವರ ನಿವಾಸದ ಮೇಲೆ ವಿಮಾನ ಸಂಚಾರವನ್ನು ಫೆಡರಲ್ ಏವಿಯೇಷನ್‌ ಅಡ್ಮಿನಿಸ್ಟ್ರೇಶನ್ ನಿಷೇಧಿಸಿದೆ.

ಬೈಡೆನ್ ಜಯಭೇರಿಯ ನಂತರ ಅಮೆರಿಕದ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್‌ ಆಯ್ಕೆಯಾಗುವುದು ಖಚಿತವಾಗಿದೆ. ಅವರು ಭಾರತದ ತಮಿಳುನಾಡು ಮೂಲದವರು. ಕಮಲಾ ಗೆಲುವಿಗಾಗಿ ಅವರ ಹುಟ್ಟಿದೂರು ಮತ್ತು ರಾಜ್ಯದ ನಾನಾ ಭಾಗಗಳಲ್ಲಿ ಹೋಮ, ಹವನ, ಮತ್ತು ಪೂಜೆಗಳನ್ನು ಆಯೋಜಿಸಲಾಗಿತ್ತು.

ತಮ್ಮ ಗೆಲುವಿನ ಬಗ್ಗೆ ಘೋಷಣೆಯಾಗುತ್ತಲೇ ಬೈಡೆನ್ ಟ್ವೀಟ್ ಮೂಲಕ ಅಮೆರಿಕನ್ ಮತದಾರರಿಗೆ ಧನ್ಯವಾದಗಳನ್ನರ್ಪಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ