AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೇಸ್ ದಾಖಲು; ಭಾಷಣದ ನೇರ ಪ್ರಸಾರಕ್ಕೂ ತಡೆ

ಇಸ್ಲಾಮಾಬಾದ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ನ್ಯಾಯಾಧೀಶರು ಮತ್ತು ಇಬ್ಬರು ಉನ್ನತ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Big News: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೇಸ್ ದಾಖಲು; ಭಾಷಣದ ನೇರ ಪ್ರಸಾರಕ್ಕೂ ತಡೆ
ಇಮ್ರಾನ್ ಖಾನ್Image Credit source: India Today
TV9 Web
| Edited By: |

Updated on: Aug 22, 2022 | 8:22 AM

Share

ಇಸ್ಲಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​ (Imran Khan) ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಇಸ್ಲಾಮಾಬಾದ್‌ನಲ್ಲಿ (Islamabad) ರ್ಯಾಲಿ ವೇಳೆ ನ್ಯಾಯಾಧೀಶರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶನಿವಾರ ಸಂಜೆ ಎಫ್ -9 ಪಾರ್ಕ್‌ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಸರ್ಕಾರಿ ಸಂಸ್ಥೆಗಳಿಗೆ ಬೆದರಿಕೆ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಕೆಲವೇ ಗಂಟೆಗಳ ನಂತರ ಪಾಕಿಸ್ತಾನದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನೇರ ಭಾಷಣಗಳನ್ನು ಪ್ರಸಾರ ಮಾಡುವುದನ್ನು ಪಾಕಿಸ್ತಾನ್ ಎಲೆಕ್ಟ್ರಾನಿಕ್ ಮೀಡಿಯಾ ರೆಗ್ಯುಲೇಟರಿ ಅಥಾರಿಟಿ ನಿಷೇಧಿಸಿತು.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಭಾಷಣ, ಹೇಳಿಕೆಗಳಲ್ಲಿ ಆಧಾರರಹಿತ ಆರೋಪಗಳನ್ನು ಹೊರಿಸುವ ಮೂಲಕ ನಿರಂತರವಾಗಿ ಪಾಕಿಸ್ತಾನದ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ರಾಜ್ಯ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ಮೂಲಕ ದ್ವೇಷಪೂರಿತ ಭಾಷಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಪಿಇಎಂಆರ್‌ಎ ತನ್ನ ನಿರ್ದೇಶನದಲ್ಲಿ ತಿಳಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಗೆ ಇದರಿಂದ ತೊಡಕಾಗಿದೆ. ಇದರಿಂದ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: Imran Khan: ಮತ್ತೆ ಭಾರತವನ್ನು ಹೊಗಳಿದ ಇಮ್ರಾನ್ ಖಾನ್; ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಗೆ ಆಕ್ರೋಶ

ಶನಿವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ಕಳೆದ ವಾರ ದೇಶದ್ರೋಹದ ಆರೋಪದ ಮೇಲೆ ಬಂಧಿತನಾಗಿದ್ದ ತನ್ನ ಸಹಾಯಕ ಶಹಬಾಜ್ ಗಿಲ್‌ಗೆ ನೀಡಿದ ಚಿಕಿತ್ಸೆಗೆ ಸಂಬಂಧಿಸಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಮಹಿಳಾ ಮ್ಯಾಜಿಸ್ಟ್ರೇಟ್, ಪಾಕಿಸ್ತಾನದ ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: Imran Khan: “ಪಾಕಿಸ್ತಾನದ ಮೇಲೆ ಅಣು ಬಾಂಬ್ ಹಾಕುವುದು ಉತ್ತಮ” ಎಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಭಾಷಣವು ಸೇನೆ ಮತ್ತು ಇತರ ಸಂಸ್ಥೆಗಳನ್ನು ಗುರಿಯಾಗಿಸುವ ಪ್ರವೃತ್ತಿಯ ಮುಂದುವರಿಕೆಯಾಗಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ