AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ

ಮಾಲ್ಡೀವ್ಸ್ ನಿಂದ ಸಿಂಗಾಪುರ್ ಗೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ. ಖಾಸಗಿ ಜೆಟ್ ನಲ್ಲಿ ಸಿಂಗಾಪುರ್ ಗೆ ಪ್ರಯಾಣ. ಶ್ರೀಲಂಕಾದಿಂದ ಮಾಲ್ಡೀವ್ಸ್ ಗೆ ಈ ಮೊದಲು ಪರಾರಿಯಾಗಿದ್ದ ಗೊಟಬಯ ರಾಜಪಕ್ಸ. 

Big News: ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ
Gotabaya Rajapaksa
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 1:27 PM

Share

ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಅವರು ಗುರುವಾರ ಮಾಲ್ಡೀವ್ಸ್​​ನಿಂದ (Maldives) ಸಿಂಗಾಪುರಕ್ಕೆ (Singapore) ಪ್ರಯಾಣಿಸಿದ್ದಾರೆ. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಹಿನ್ನಲೆಯಲ್ಲಿ ಜನಾಕ್ರೋಶ ಸಿಡಿದೆದ್ದಾಗ ಗೊಟಬಯ ಶ್ರೀಲಂಕಾದಿಂದ ಪಲಾಯನ ಮಾಡಿ ಮಾಲ್ಡೀವ್ಸ್ ನಲ್ಲಿ ನೆಲೆಸಿದ್ದರು. ರಾಜಪಕ್ಸ ಅವರು ಮಾಲ್ಡೀವ್ಸ್ ನಿಂದ ಸೌದಿ ಏರ್ ಲೈನ್ ವಿಮಾನ ಎಸ್ ವಿ788ನಲ್ಲಿ ಸಿಂಗಾಪುರಕ್ಕೆ ಹೋಗಿದ್ದಾರೆ. 73ರ ಹರೆಯದ ಗೊಟಬಯ ದೇಶದಿಂದ ಪಲಾಯನ ಮಾಡಿದ ಮೇಲೆ ಬುಧವಾರದಂದು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಸದ್ಯ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಮುಂದಿನ ಅಧ್ಯಕ್ಷರ ಆಯ್ಕೆ ವರೆಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗೊಟಬಯ ಅವರು ಬುಧವಾರ ಸೌದಿ ಏರ್ ಲೈನ್ಸ್ ವಿಮಾನ ಹತ್ತಿದ್ದು, ಅವರು ಸಿಂಗಾಪುರಕ್ಕೆ ಹೋಗಲಿದ್ದಾರೆ. ಅಲ್ಲಿಂದ ಅವರು ಜೆದ್ದಾ ನಂತರ  ಸೌದಿ ಅರೇಬಿಯಾಕ್ಕೆ ಹೋಗಲಿದ್ದಾರೆ ಎಂದು ಹೆಸರು ಹೇಳಲು ಬಯಸದ  ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ.

ಕೊಲಂಬೊ ಜಿಲ್ಲೆಯೊಳಗೆ ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ವಿಧಿಸಲಾಗಿದೆ ಎಂದು ಸರ್ಕಾರದ ಮಾಹಿತಿ ಇಲಾಖೆ ಹೇಳಿದೆ.

ರಾಜೀನಾಮೆ ನೀಡಿ ಇಲ್ಲವೇ ನಾವು ಬೇರೆ ಆಯ್ಕೆ ಕಂಡುಕೊಳ್ಳುತ್ತೇವೆ: ಸ್ಪೀಕರ್

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗೊಟಬಯ ರಾಜಪಕ್ಸ ಇನ್ನೂ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಲಂಕಾ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಆದಷ್ಟು ಬೇಗ ರಾಜೀನಾಮೆ ಸಲ್ಲಿಸಿ ಇಲ್ಲವೇ ನಾವು ನಿಮ್ಮನ್ನು ಹುದ್ದೆಯಿಂದ ಕಿತ್ತು ಹಾಕುವ ಆಯ್ಕೆ ಪರಿಗಣಿಸುತ್ತೇವೆ ಎಂದು ಹೇಳಿರುವುದಾಗಿ ನ್ಯೂಸ್ ಫಸ್ಟ್ ಲಂಕಾ ವರದಿ ಮಾಡಿದೆ.

ಗಲ್ಲೆಯಿಂದ ಚದುರಿದ ಪ್ರತಿಭಟನಾಕಾರರು

ಶ್ರೀಲಂಕಾದ ಗಲ್ಲೆಯಲ್ಲಿರುವ ಪ್ರತಿಭಟನಾಕಾರರು  ಪ್ರೆಸಿಡೆನ್ಶಿಯಲ್ ಸೆಕ್ರೆಟರಿಯೇಟ್ , ಅಧ್ಯಕ್ಷರ ನಿವಾಸ ಮತ್ತು ಪ್ರಧಾನಿಯವರ ನಿವಾಸದಿಂದ ಹೊರಹೋಗಲು ನಿರ್ಧರಿಸಿದ್ದಾರೆ

Published On - 12:38 pm, Thu, 14 July 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!