Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ: ಇಬ್ಬರು ಗರ್ಭಿಣಿಯರು ಸೇರಿ 37 ಮಂದಿ ಸಾವು

ದಕ್ಷಿಣ ನೈಜೀರಿಯಾದಲ್ಲಿ ಅಕ್ರಮ ತೈಲ ಸಂಸ್ಕರಣಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಇಬ್ಬರು ಗರ್ಭಿಣಿಯರು ಸೇರಿ 37 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ಸ್ಥಳೀಯ ಭದ್ರತಾ ಅಧಿಕಾರಿ ಮತ್ತು ಸಮುದಾಯದ ಮುಖಂಡರು ಮಂಗಳವಾರ ತಿಳಿಸಿದ್ದಾರೆ. ಮೂವತ್ತೈದು ಜನರು ಬೆಂಕಿಯಲ್ಲಿ ಸಿಲುಕಿಕೊಂಡರು. ಅದೃಷ್ಟವಶಾತ್ ತಪ್ಪಿಸಿಕೊಂಡಿದ್ದ ಇಬ್ಬರು ಮಂಗಳವಾರ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಬಂಧಿಕರು ಸಂತ್ರಸ್ತರಲ್ಲಿ ಕೆಲವರನ್ನು ಗುರುತಿಸಿ ಅಂತ್ಯಕ್ರಿಯೆಗೆ ಕರೆದೊಯ್ದಿದ್ದಾರೆ ಎಂದು ಅವರು ಹೇಳಿದರು.

ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ: ಇಬ್ಬರು ಗರ್ಭಿಣಿಯರು ಸೇರಿ 37 ಮಂದಿ ಸಾವು
ಸ್ಫೋಟImage Credit source: IndiaToday
Follow us
ನಯನಾ ರಾಜೀವ್
|

Updated on: Oct 04, 2023 | 9:47 AM

ದಕ್ಷಿಣ ನೈಜೀರಿಯಾ(Nigeria)ದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿದ್ದು ಇಬ್ಬರು ಗರ್ಭಿಣಿಯರು ಸೇರಿ 37 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ಸ್ಥಳೀಯ ಭದ್ರತಾ ಅಧಿಕಾರಿ ಮತ್ತು ಸಮುದಾಯದ ಮುಖಂಡರು ಮಂಗಳವಾರ ತಿಳಿಸಿದ್ದಾರೆ. ಮೂವತ್ತೈದು ಜನರು ಬೆಂಕಿಯಲ್ಲಿ ಸಿಲುಕಿಕೊಂಡರು. ಅದೃಷ್ಟವಶಾತ್ ತಪ್ಪಿಸಿಕೊಂಡಿದ್ದ ಇಬ್ಬರು ಮಂಗಳವಾರ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಬಂಧಿಕರು ಸಂತ್ರಸ್ತರಲ್ಲಿ ಕೆಲವರನ್ನು ಗುರುತಿಸಿ ಅಂತ್ಯಕ್ರಿಯೆಗೆ ಕರೆದೊಯ್ದಿದ್ದಾರೆ ಎಂದು ಅವರು ಹೇಳಿದರು.

ನೈಜೀರಿಯಾ ಹಲವಾರು ವರ್ಷಗಳಿಂದ ಅಕ್ರಮ ಕಚ್ಚಾ ತೈಲ ಸಂಸ್ಕರಣಾಗಾರಗಳ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸಿದೆ, ಸ್ವಲ್ಪ ಯಶಸ್ವಿಯಾಗಿದೆ, ಏಕೆಂದರೆ ಪ್ರಬಲವಾಗಿ ಸಂಪರ್ಕ ಹೊಂದಿದ ರಾಜಕಾರಣಿಗಳು ಮತ್ತು ಭದ್ರತಾ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಸ್ಥಳೀಯ ಪರಿಸರ ಗುಂಪುಗಳು ಹೇಳುತ್ತವೆ.

ಮತ್ತಷ್ಟು ಓದಿ: ಇಂಡೋನೇಷ್ಯಾದ ಬೃಹತ್ ತೈಲ ಸಂಸ್ಕರಣಾಗಾರದಲ್ಲಿ ಅಗ್ನಿ ಅವಘಡ: ಸುಮಾರು 1000 ಸ್ಥಳೀಯರ ಸ್ಥಳಾಂತರ

ಸುಟ್ಟ ತಾಳೆ ಮರಗಳು, ಮೋಟಾರ್​ಬೈಕ್​ಗಳು ಜತೆಗೆ 15 ಅವಶೇಷಗಳನ್ನು ಕೂಡ ಕಂಡಿದ್ದಾಗಿ ಪ್ರತ್ಯಕ್ಷದರ್ಶಿ ರಾಯ್ಟರ್ಸ್​ಗೆ ತಿಳಿಸಿದ್ದಾರೆ. ನೈಜೀರಿಯಾದಲ್ಲಿ ಕಚ್ಚಾತೈಲ ಕಳ್ಳತನ, ಪೈಪ್​ನಲ್ಲಿ ಹಾಳು ಮಾಡವುದು, ತೈಲ ಸೋರಿಕೆ ಸೇರಿದಂತೆ ಹಲವು ತೊಂದರೆಗಳನ್ನು ಜನರು ಎದುರಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ