Pakistan Mosque Blast: ಪೇಶಾವರ ಮಸೀದಿಯೊಂದರಲ್ಲಿ ಸ್ಫೋಟ, 46 ಸಾವು, 150 ಮಂದಿಗೆ ಗಾಯ

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ ಸಂಭವಿಸಿದ್ದು, ಹಲವು ಸಾವು ನೋವುಗಳು ಸಂಭವಿಸಿದೆ ಎಂದು ವರದಿ ಹೇಳಿದೆ.

Pakistan Mosque Blast: ಪೇಶಾವರ ಮಸೀದಿಯೊಂದರಲ್ಲಿ ಸ್ಫೋಟ, 46 ಸಾವು, 150 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ

Updated on: Jan 30, 2023 | 6:07 PM

ಪೇಶಾವರ: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ (Pakistan Mosque Blast) ಸಂಭವಿಸಿದ್ದು, ಹಲವು ಸಾವು ನೋವುಗಳು ಸಂಭವಿಸಿದೆ ಎಂದು ವರದಿ ಹೇಳಿದೆ. ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದಲ್ಲಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸ್ಫೋಟದಲ್ಲಿ 150ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ರಾಯಿಟರ್ಸ್‌ಗೆ ತಿಳಿಸಿದ್ದು, 46ಜನ  ಸಾವನ್ನಪ್ಪಿದ್ದಾರೆ  ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇನ್ನೂ ಕೆಲವರು ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ. ಕಟ್ಟಡದ ಒಂದು ಭಾಗವು ಕುಸಿದಿದೆ ಮತ್ತು ಹಲವಾರು ಜನರು ಅದರ ಅಡಿಯಲ್ಲಿದ್ದಾರೆ ಎಂದು ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನು ಓದಿ; Afghanistan Mosque Blast: ಅಫ್ಘಾನಿಸ್ತಾನ ಮಸೀದಿ ಸ್ಫೋಟ, ಹಲವು ಮಂದಿ ಸಾವು, ಅನೇಕರಿಗೆ ಗಾಯ

ಅಫ್ಘಾನಿಸ್ತಾನದ ಬಳಿಯ ಪೇಶಾವರದಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮುಖ್ಯಸ್ಥ ಮುಹಮ್ಮದ್ ಇಜಾಜ್ ಖಾನ್ ಎಎಫ್‌ಪಿಗೆ ತಿಳಿಸಿದ್ದಾರೆ. ನಾವು ಮೃತ ದೇಹಗಳನ್ನು ಗುರುತಿಸಿದ್ದು. ಇದು ತುರ್ತು ಪರಿಸ್ಥಿತಿ ಎಂದು ಪೇಶಾವರದ ಮುಖ್ಯ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಖಾನ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Mon, 30 January 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us