Karachi Blast ಕರಾಚಿಯ ಖರದರ್ ಪ್ರದೇಶದಲ್ಲಿ ಬಾಂಬ್ ಸ್ಫೋಟ; ಮಹಿಳೆ ಸಾವು, ಹಲವರಿಗೆ ಗಾಯ
ಮೋಟಾರ್‌ಸೈಕಲ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಅಳವಡಿಸಲಾಗಿದೆ ಎಂದು ಆರಂಭಿಕ ವರದಿ ಬಹಿರಂಗಪಡಿಸಿದೆ. ಸ್ಫೋಟದ ನಂತರ ಅಗ್ನಿಶಾಮಕ ದಳವು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿತು.
ಕರಾಚಿ: ಕರಾಚಿಯ (Karachi) ಖರದರ್ (Kharadar) ಪ್ರದೇಶದಲ್ಲಿ ಜನನಿಬಿಡ ಬೋಲ್ಟನ್ ಮಾರುಕಟ್ಟೆಯಲ್ಲಿ ಸೋಮವಾರ ಸಂಜೆ ಸ್ಫೋಟ ಸಂಭವಿಸಿದ್ದು, ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಪೊಲೀಸ್ ಅಧಿಕಾರಿ ಸೇರಿದಂತೆ ಸುಮಾರು 12 ಜನರು ಗಾಯಗೊಂಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಪೊಲೀಸ್ ವಾಹನವನ್ನು ಗುರಿಯಾಗಿರಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೋಟಾರ್‌ಸೈಕಲ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (IED) ಅಳವಡಿಸಲಾಗಿದೆ ಎಂದು ಆರಂಭಿಕ ವರದಿ ಬಹಿರಂಗಪಡಿಸಿದೆ. ಸ್ಫೋಟದ ನಂತರ ಅಗ್ನಿಶಾಮಕ ದಳವು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿತು. ದೂರದ ಪ್ರದೇಶಗಳಲ್ಲಿ ಸ್ಫೋಟದ ಸದ್ದು ಕೇಳಿಸುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಾರೀ ಸ್ಫೋಟದ ಬಗ್ಗೆ ವರದಿಯ ನಂತರ ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಇದು ಸ್ಫೋಟಕ ಸಾಧನದಿಂದ ಉಂಟಾಗಿರಬಹುದು ಎಂದು ಸ್ಥಳೀಯರು ಸೂಚಿಸಿದ್ದಾರೆ ಎಂದು ಸಾಮಾ ಟಿವಿ ವರದಿ ಮಾಡಿದೆ
A blast ripped through the Kharadar area of #Karachi leaving one woman dead and as many as a dozen people injured. Eyewitnesses said that the sound of the blast could be heard in faraway areas pic.twitter.com/Z5gHY1vykR
— Mughees Ali (@mugheesali81) May 16, 2022
ಸದ್ದಾರ್ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿ, 13 ಜನರು ಗಾಯಗೊಂಡ ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಘಟನೆ ನಡೆದಿದೆ.
Published On - 11:11 pm, Mon, 16 May 22