AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ […]

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು
ಲಾಹೋರ್​ ಬ್ಲಾಸ್ಟ್ ಚಿತ್ರಣ
Lakshmi Hegde
|

Updated on: Jun 23, 2021 | 3:40 PM

Share

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ.

ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ ಪೊಲೀಸ್​ ಅಧಿಕಾರಿ ಗುಲಾಮ್ ಮಹಮ್ಮದ್ ಡೋಗರ್​ ಹೇಳಿದ್ದಾರೆ.

ಪಾಕಿಸ್ತಾನ ಪಂಜಾಬ್​ನ ಮುಖ್ಯಮಂತ್ರಿ ಉಸ್ಮಾನ್ ಸ್ಫೋಟದ ಬಗ್ಗೆ ಪೊಲೀಸರಿಂದ ವರದಿ ಕೇಳಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಕೇಂದ್ರ ಆಂತರಿಕ ವ್ಯವಹಾರಗಳ ಸಚಿವ ಶೇಖ್ ರಶೀದ್​ ಅವರೂ ಘಟನೆಯ ವಿವರ ಪಡೆದಿದ್ದಾರೆ. ಬ್ಲಾಸ್ಟ್ ಸಂಬಂಧ ತನಿಖೆ ನಡೆಸಲು ಲಾಹೋರ್​ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕಿತ್ತು, ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸ್ತಿಲ್ಲ; ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ

Blast near Mumbai terror attack mastermind Hafiz Saeed In Pakistan

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ