ಪಾಕಿಸ್ತಾನದ ಸೈನಿಕರಿದ್ದ ಬಸ್​ ಮೇಲೆ ಬಾಂಬ್ ದಾಳಿ; ನಾಲ್ವರು ಸಾವು

ಪಾಕಿಸ್ತಾನಿ ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಅಪರಿಚಿತ ಗುಂಪಿನಿಂದ ಟರ್ಬತ್‌ನಲ್ಲಿ ಬಾಂಬ್ ದಾಳಿ ನಡೆದಿದೆ. ಇದರಿಂದ 48 ಪಾಕ್ ಸೈನಿಕರಿದ್ದ ಬಸ್​ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ನಾಲ್ವರು ಸೈನಿಕರು ಸುಟ್ಟು ಕರಕಲಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಹಿಂದೆ ಪುಲ್ವಾಮಾದಲ್ಲಿ ನಡೆದಿದ್ದ ಭಾರತೀಯ ಸೈನಿಕರ ಮೇಲಿನ ದಾಳಿಯನ್ನು ಈ ಘಟನೆ ನೆನಪಿಸುವಂತಿದೆ. ಪಾಕಿಸ್ತಾನದಲ್ಲಿ ಈ ರೀತಿಯ ಅಪರಿಚಿತರಿಂದ ದಾಳಿ ನಡೆಯುತ್ತಿರುವ ಘಟನೆಗಳು ಹೆಚ್ಚುತ್ತಲೇ ಇವೆ.

ಪಾಕಿಸ್ತಾನದ ಸೈನಿಕರಿದ್ದ ಬಸ್​ ಮೇಲೆ ಬಾಂಬ್ ದಾಳಿ; ನಾಲ್ವರು ಸಾವು
Pakistan Military Attack
Follow us
ಸುಷ್ಮಾ ಚಕ್ರೆ
|

Updated on:Jan 04, 2025 | 10:59 PM

ನವದೆಹಲಿ: ಪಾಕಿಸ್ತಾನದ ಬಲೂಚಿಸ್ತಾನದ ಟರ್ಬತ್​ನಲ್ಲಿ ಭೀಕರ ಬಾಂಬ್ ದಾಳಿ ನಡೆದಿದ್ದು, ಪಾಕಿಸ್ತಾನಿ ಸೈನಿಕರನ್ನು ಕರೆದೊಯ್ಯುತ್ತಿದ್ದ ಮಿಲಿಟರಿ ವಾಹನದ ಮೇಲೆ ಬಾಂಬ್ ಹಾಕಲಾಗಿದೆ. ಈ ದುರಂತ ನಡೆಯುವ ವೇಳೆ ಆ ವಾಹನದಲ್ಲಿ 48 ಪಾಕಿಸ್ತಾನಿ ಸೈನಿಕರಿದ್ದರು. ಅವರಲ್ಲಿ ನಾಲ್ವರು ಬಾಂಬ್ ದಾಳಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಘಟನೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಟರ್ಬತ್ ಬಳಿಕ ಹೈವೇಯಲ್ಲೇ ಮಿಲಿಟರಿ ಬಸ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಇದರ ಪರಿಣಾಮವಾಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಟರ್ಬತ್‌ನಲ್ಲಿ ಬಸ್ ಮೇಲೆ ಬಾಂಬ್ ದಾಳಿ ನಡೆದಿದ್ದು, ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿವೆ. ಗಾಯಗೊಂಡವರಲ್ಲಿ ಎಸ್‌ಎಸ್‌ಪಿ ಗಂಭೀರ ಅಪರಾಧ ವಿಭಾಗದ ಜೊಹೈಬ್ ಮೊಹ್ಸಿನ್ ಮತ್ತು ಅವರ ಕುಟುಂಬದ 6 ಸದಸ್ಯರು ಬಾಂಬ್ ಸ್ಫೋಟದ ಸಮಯದಲ್ಲಿ ಆ ಮಾರ್ಗದಲ್ಲಿ ಹಾದುಹೋಗುತ್ತಿದ್ದರು.

ಇದನ್ನೂ ಓದಿ: Mumbai Terror Attack: ಮುಂಬೈ ಉಗ್ರ ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಪಾಕಿಸ್ತಾನದಲ್ಲಿ ಸಾವು

ಈ ಬಾಂಬ್ ದಾಳಿಯ ಹಿಂದೆ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬಲೂಚಿಸ್ತಾನದ ಮುಖ್ಯಮಂತ್ರಿ ಮಿರ್ ಸರ್ಫ್ರಾಜ್ ಬುಗ್ತಿ ಅವರು ಈ ಬಾಂಬ್ ಸ್ಫೋಟವನ್ನು ಖಂಡಿಸಿದ್ದಾರೆ. ಅಮೂಲ್ಯ ಜೀವಗಳ ನಷ್ಟದ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಮುಗ್ಧ ವ್ಯಕ್ತಿಗಳನ್ನು ಗುರಿಯಾಗಿಸಿ ಕೊಲ್ಲುವವರು ಮನುಷ್ಯರೆಂದು ಹೇಳಿಕೊಳ್ಳಲು ಅನರ್ಹರು ಎಂದು ಬುಗ್ತಿ ಟೀಕಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Sat, 4 January 25

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್