
ಪೇಶಾವರ, ಏಪ್ರಿಲ್ 28: ಪಾಕಿಸ್ತಾನದ (Pakistan) ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಇಂದು ಶಾಂತಿ ಸಮಿತಿಯ ಕಚೇರಿಯ ಮೇಲೆ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ7 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ವಜಿರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿಯಾದ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿಯ ಕಚೇರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಸ್ಫೋಟದ ನಂತರ ಗಾಯಗೊಂಡ ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಲ್ಲಿ 7 ಮಂದಿ ಗಾಯಗೊಂಡು ಸಾವನ್ನಪ್ಪಿದರು.
ಪಾಕಿಸ್ತಾನಿ ತಾಲಿಬಾನ್‌ನ ಹಿಂದಿನ ಭದ್ರಕೋಟೆಯಲ್ಲಿ ಉಂಟಾದ ಬಾಂಬ್ ದಾಳಿಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ, 16 ಜನರಿಗೆ ಗಾಯಗಳಾಗಿವೆ. ಪಾಕಿಸ್ತಾನಿ ತಾಲಿಬಾನ್‌ನ ಪ್ರಕ್ಷುಬ್ಧ ವಾಯುವ್ಯದಲ್ಲಿರುವ ಸರ್ಕಾರಿ ಪರ ಶಾಂತಿ ಸಮಿತಿಯ ಕಚೇರಿಯ ಹೊರಗೆ ಪ್ರಬಲ ಬಾಂಬ್ ಸ್ಫೋಟಗೊಂಡ ನಂತರ 7 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಕ್ಷಿಣ ವಜೀರಿಸ್ತಾನದ ಜಿಲ್ಲೆಯ ಪ್ರಮುಖ ನಗರವಾದ ವಾನಾದಲ್ಲಿ ಈ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಉಸ್ಮಾನ್ ವಜೀರ್ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಪಾಕಿಸ್ತಾನದ ಜೊತೆ ಕೈ ಜೋಡಿಸಿತಾ ಚೀನಾ?
ಪಾಕಿಸ್ತಾನಿ ತಾಲಿಬಾನ್ ಅನ್ನು ಸಾರ್ವಜನಿಕವಾಗಿ ವಿರೋಧಿಸುವ ಶಾಂತಿ ಸಮಿತಿಯ ಕಚೇರಿಯನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ. ಈ ಶಾಂತಿ ಸಮಿತಿಯು ನಿವಾಸಿಗಳ ನಡುವಿನ ವಿವಾದಗಳನ್ನು ಪರಿಹರಿಸಲು ಸಹ ಸಹಾಯ ಮಾಡುತ್ತದೆ. ಇದಕ್ಕೆ ಸಮೀಪದ ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ 54 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಘೋಷಿಸಿದ ಒಂದು ದಿನದ ನಂತರ ಈ ಬಾಂಬ್ ದಾಳಿ ನಡೆದಿದೆ.
ಇದನ್ನೂ ಓದಿ: ಈ ಬಾರಿ ಮಾತುಕತೆಯ ಬದಲು ಪ್ರತೀಕಾರ; ಪಾಕಿಸ್ತಾನದ ವಿರುದ್ಧ ಫಾರೂಕ್ ಅಬ್ದುಲ್ಲಾ ಕಟು ಸಂದೇಶ
ಈ ದಾಳಿಗೆ ಯಾವುದೇ ಗುಂಪು ತಕ್ಷಣ ಹೊಣೆ ಹೊತ್ತಿಲ್ಲ. ಆದರೆ ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಆಗಾಗ ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಳ್ಳುವುದರಿಂದ ಅವರ ಕೈವಾಡ ಇರುವ ಸಾಧ್ಯತೆಗಳಿವೆ ಎನ್ನಲಾಗಿದೆ. ತೆಹ್ರೀಕ್-ಎ-ತಾಲಿಬಾನ್ ಪ್ರತ್ಯೇಕ ಗುಂಪಾಗಿದೆ. ಆದರೆ ಅಫ್ಘಾನ್ ತಾಲಿಬಾನ್‌ನ ನಿಕಟ ಮಿತ್ರರಾಷ್ಟ್ರವಾಗಿದ್ದು, ಆಗಸ್ಟ್ 2021ರಲ್ಲಿ ನೆರೆಯ ಅಫ್ಘಾನಿಸ್ತಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿತು. ತಾಲಿಬಾನ್ ಸ್ವಾಧೀನದ ನಂತರ ಹಲವಾರು ಟಿಟಿಪಿ ನಾಯಕರು ಆಶ್ರಯ ತಾಣಗಳನ್ನು ಕಂಡುಕೊಂಡಿದ್ದಾರೆ ಮತ್ತು ಅಫ್ಘಾನಿಸ್ತಾನದಲ್ಲಿ ಬಹಿರಂಗವಾಗಿ ವಾಸಿಸುತ್ತಿದ್ದಾರೆ. ಇದು ಪಾಕಿಸ್ತಾನಿ ತಾಲಿಬಾನ್‌ಗೆ ಧೈರ್ಯ ತುಂಬಿತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ