ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ: ಐವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಾಕಿಸ್ತಾನದಲ್ಲಿ ಬಾಂಬ್​ ಸ್ಫೋಟ: ಐವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
ಬಾಂಬ್ ಸ್ಫೋಟ
Image Credit source: India Today

Updated on: Nov 03, 2023 | 2:48 PM

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಖೈಬರ್ ಪಖ್ತುಂಖ್ವಾದ ಡಿಐ ಖಾನ್‌ನ ಪೊಂಡಾ ಬಜಾರ್‌ನಲ್ಲಿರುವ ಟ್ಯಾಂಕ್ ಅಡ್ಡಾದಲ್ಲಿ ಸಂಭವಿಸಿದ ಸ್ಫೋಟದ ನಂತರ, ಹತ್ತಿರದ ಆಸ್ಪತ್ರೆಗಳಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ.

ದೇಶದಲ್ಲಿ ನಾಲ್ಕನೇ ಅತಿ ದೊಡ್ಡ ಸ್ಫೋಟ ಇದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟಕ ಸಾಧನವನ್ನು ಮೋಟಾರ್ ಬೈಕ್‌ನಲ್ಲಿ ಅಳವಡಿಸಲಾಗಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ಸ್ಫೋಟ ಇದಾಗಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:42 pm, Fri, 3 November 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us