ಸಿಡ್ನಿ ಗುಂಡಿನ ದಾಳಿ: ಶಂಕಿತರ ಕಾರಿನಲ್ಲಿ ಐಸಿಸ್ ಧ್ವಜ ಪತ್ತೆ
ಆಸ್ಟ್ರೇಲಿಯಾದ ಸಿಡ್ನಿ(Sydney)ಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದ ಶಂಕಿತರ ಕಾರಿನಲ್ಲಿ ಐಸಿಸ್ ಧ್ವಜ ಪತ್ತೆಯಾಗಿದೆ. ಪಾಕಿಸ್ತಾನ ಮೂಲದ ಇಬ್ಬರು ಗುಂಡಿನ ಸುರಿಮಳೆ ಗೈದಿದ್ದರು. ಘಟನೆಯಲ್ಲಿ 12 ಮಂದಿ ಮೃತಪಟ್ಟು, 42ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಶಂಕಿತರು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆಸ್ಟ್ರೇಲಿಯಾದ ಸಂಸ್ಥೆಗಳು ತನಿಖೆಯನ್ನು ಪ್ರಾರಂಭಿಸಿವೆ. ನ್ಯೂ ಸೌತ್ ವೇಲ್ಸ್ ಪೊಲೀಸ್ ಆಯುಕ್ತ ಮಾಲ್ ಲ್ಯಾನ್ಯನ್, ಅಧಿಕಾರಿಗಳು ಸಂಪೂರ್ಣವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಸಿಡ್ನಿ, ಡಿಸೆಂಬರ್ 15: ಆಸ್ಟ್ರೇಲಿಯಾದ ಸಿಡ್ನಿ(Sydney)ಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದ ಶಂಕಿತರ ಕಾರಿನಲ್ಲಿ ಐಸಿಸ್ ಧ್ವಜ ಪತ್ತೆಯಾಗಿದೆ. ಪಾಕಿಸ್ತಾನ ಮೂಲದ ಇಬ್ಬರು ಗುಂಡಿನ ಸುರಿಮಳೆ ಗೈದಿದ್ದರು. ಘಟನೆಯಲ್ಲಿ 12 ಮಂದಿ ಮೃತಪಟ್ಟು, 42ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಶಂಕಿತರು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆಸ್ಟ್ರೇಲಿಯಾದ ಸಂಸ್ಥೆಗಳು ತನಿಖೆಯನ್ನು ಪ್ರಾರಂಭಿಸಿವೆ. ನ್ಯೂ ಸೌತ್ ವೇಲ್ಸ್ ಪೊಲೀಸ್ ಆಯುಕ್ತ ಮಾಲ್ ಲ್ಯಾನ್ಯನ್, ಅಧಿಕಾರಿಗಳು ಸಂಪೂರ್ಣವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಶಂಕಿತರು ಉಗ್ರವಾದಿಗಳೇ ಎಂದು ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಭಾನುವಾರ ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತನನ್ನು ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಸ್ಟ್ರೇಲಿಯಾದ ತನಿಖಾಧಿಕಾರಿಗಳು ಅವರ ವಲಸೆ ಸ್ಥಿತಿ, ಕುಟುಂಬದ ಹಿನ್ನೆಲೆ ಮತ್ತು ವಿದೇಶಗಳ ಸಂಪರ್ಕಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬಂದೂಕುಧಾರಿಯನ್ನು 24 ವರ್ಷದ ನವೀದ್ ಅಕ್ರಮ್ ಎಂದು ಗುರುತಿಸಲಾಗಿದೆ.
ನವೀದ್ ಅಕ್ರಮ್ ಯಾರು?
ತನಿಖಾಧಿಕಾರಿಗಳು ಶಂಕಿತನನ್ನು ನ್ಯೂ ಸೌತ್ ವೇಲ್ಸ್‌ನ ಅಲ್-ಮುರಾದ್ ಸಂಸ್ಥೆಯ ವಿದ್ಯಾರ್ಥಿ ಎಂದು ಗುರುತಿಸಿದ್ದಾರೆ , ಇದು ಅರೇಬಿಕ್ ಮತ್ತು ಕುರಾನ್ ಅನ್ನು ಕಲಿಸುತ್ತದೆ. ತನಿಖಾಧಿಕಾರಿಗಳು ಅವನ ಶೈಕ್ಷಣಿಕ ಮತ್ತು ಸಾಮಾಜಿಕ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ. ಪ್ರಸ್ತುತ, ಭಯೋತ್ಪಾದಕ ದಾಳಿಗೂ ಅವನ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ ಎಂದು ಕಂಡುಬಂದಿದೆ.
ಈ ಕುರಿತು ನವೀದ್ ಅಕ್ರಮ್ ತಾಯಿ ವೆರೆನಾರನ್ನು ಪ್ರಶ್ನಿಸಿದಾಗ, ತನ್ನ ಮಗ ಅಂಥವನಲ್ಲ, ಆತ ಒಳ್ಳೆಯವನು ಎಂದಿದ್ದಾರೆ. ನವೀದ್ ವಾರಂತ್ಯದಲ್ಲಿ ಫಿಶಿಂಗ್ ಟೂರ್ ಮಾಡುವುದಾಗಿ ಹೇಳಿ ತಂದೆ ಜತೆ ಹೋಗಿದ್ದ. ಹೆತ್ತವರಿಗೆ ಹೆಗ್ಗಣ ಮುದ್ದು ಎಂಬಂತೆ ಮಗ ತಪ್ಪು ಮಾಡಿದ್ದರೂ ಆತನಿಗೆ ಒಳ್ಳಯವನು ಎಂಬ ಬಿರುದು ಕೊಟ್ಟಿದ್ದಾರೆ.
ಮತ್ತಷ್ಟು ಓದಿ: ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ ನಡೆಸಿದವರು ಪಾಕಿಗಳು
ಭಾನುವಾರ ತನಗೆ ಕರೆ ಮಾಡಿ ಅಮ್ಮಾ ನಾನು ಈಜಲು ಹೋಗಿದ್ದೆ, ಸ್ಕೂಬಾ ಡೈವಿಂಗ್ ಮಾಡಿದೆ, ಈಗ ಊಟಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದ. ಹಾಗೆಯೇ ಈಗ ತುಂಬಾ ಸೆಕೆಯಿರುವುದರಿಂದ ಮನೆಯಲ್ಲೇ ಇರುತ್ತೇವೆ ಎಂದಿದ್ದ. ದಾಳಿಯ ನಂತರದ ಗಂಟೆಗಳಲ್ಲಿ, ದಾಳಿ ನಡೆದ ಸ್ಥಳದಲ್ಲಿ ನವೀದ್ ಬಂದೂಕನ್ನು ಹಿಡಿದಿರುವ ಚಿತ್ರಗಳು ವೈರಲ್ ಆಗಿವೆ. ಆದಾಗ್ಯೂ, ವೆರೆನಾ ತನ್ನ ಮಗ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿರಬಹುದು ಎಂಬುದನ್ನು ನಂಬುತ್ತಿಲ್ಲ.
ಅವನ ಬಳಿ ಬಂದೂಕು ಇಲ್ಲ. ಅವನು ಹೊರಗೆ ಹೋಗುವುದಿಲ್ಲ. ಅವನು ಸ್ನೇಹಿತರೊಂದಿಗೆ ಬೆರೆಯುವುದಿಲ್ಲ. ಅವನು ಕುಡಿಯುವುದಿಲ್ಲ, ಧೂಮಪಾನ ಮಾಡುವುದಿಲ್ಲ, ಕೆಟ್ಟ ಸ್ಥಳಗಳಿಗೆ ಹೋಗುವುದಿಲ್ಲ, ಅವನು ಕೆಲಸಕ್ಕೆ ಹೋಗುತ್ತಾನೆ, ಮನೆಗೆ ಬರುತ್ತಾನೆ. ಜಿಮ್ಗೆ ಹೋಗುತ್ತಿದ್ದ ಅಷ್ಟೇ ಎಂದು ತಾಯಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




