AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್ ಪ್ರಧಾನಿ ರೇಸ್​ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್; ಭಾರತೀಯ ಮೂಲದ ರಿಷಿ ಸುನಕ್​ಗೆ ಬೆಂಬಲ

ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಪ್ರಧಾನಿ ರೇಸ್​ನಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ ರಿಷಿ ಸುನಕ್ ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಚುನಾಯಿತರಾಗಲು ಒಂದು ಹೆಜ್ಜೆ ಹತ್ತಿರವಾಗಿದ್ದಾರೆ.

ಬ್ರಿಟನ್ ಪ್ರಧಾನಿ ರೇಸ್​ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್; ಭಾರತೀಯ ಮೂಲದ ರಿಷಿ ಸುನಕ್​ಗೆ ಬೆಂಬಲ
ಬೋರಿಸ್ ಜಾನ್ಸನ್
TV9 Web
| Updated By: ಸುಷ್ಮಾ ಚಕ್ರೆ|

Updated on: Oct 24, 2022 | 8:24 AM

Share

ಬ್ರಿಟನ್: ಇಂಗ್ಲೆಂಡ್​ ಪ್ರಧಾನಿ ಹುದ್ದೆ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ಇದೀಗ ಪ್ರಧಾನಿ ರೇಸ್​ನಿಂದ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬ್ರಿಟನ್ ಪ್ರಧಾನಿ (Britain PM) ಹುದ್ದೆ ರೇಸ್​​ನಿಂದ ಹಿಂದೆ ಸರಿದಿರುವ ಬೋರಿಸ್ ಜಾನ್ಸನ್ ಭಾರತೀಯ ಮೂಲದ ರಿಷಿ ಸುನಕ್​ಗೆ (Rishi Sunak) ಬೆಂಬಲ ನೀಡಿದ್ದಾರೆ. ಈ ಮೂಲಕ ಬ್ರಿಟನ್ ಮಾಜಿ ಸಚಿವ ರಿಷಿ ಸುನಕ್​ ಪ್ರಧಾನಿ ಗಾದಿಗೆ ಏರುವ ಹಾದಿ ಮತ್ತಷ್ಟು ಸುಗಮವಾದಂತಾಗಿದೆ.

ಬ್ರಿಟನ್ ಪ್ರಧಾನಿ ಹುದ್ದೆಗೆ ಸ್ಪರ್ಧಿಸಲು ಮಾಜಿ ಸಚಿವ ರಿಷಿ ಸುನಕ್ ಮತ್ತು ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇಬ್ಬರೂ ಅರ್ಹತೆ ಗಳಿಸಿದ್ದರು. ಲಿಜ್ ಟ್ರಸ್ ರಾಜೀನಾಮೆಯಿಂದ ತೆರವಾಗಿದ್ದ ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸುವವರಲ್ಲಿ ರಿಷಿ ಸುನಕ್ ಇದೀಗ ಕನ್ಸರ್ವೇಟಿವ್ ಪಕ್ಷದ 100 ಸಂಸದರ ಬೆಂಬಲದೊಂದಿಗೆ ಮೊದಲ ರೇಸ್​​ನಲ್ಲಿದ್ದಾರೆ. ಈ ಹಿಂದೆ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಸದ್ಯದ ಬ್ರಿಟನ್​ನ ಆರ್ಥಿಕ ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಅಭ್ಯರ್ಥಿ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಹುದ್ದೆಗೇರಿ 45 ದಿನಗಳಲ್ಲಿ ರಾಜೀನಾಮೆ ನೀಡಿದ ಲಿಜ್ ಟ್ರಸ್; ಅಧಿಕಾರವಧಿಯಲ್ಲಿ ಏನೇನಾಯ್ತು?

ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ನಾರಾಯಣ ಮೂರ್ತಿ- ಸುಧಾ ಮೂರ್ತಿ ಅವರ ಅಳಿಯನೂ ಆಗಿರುವ ರಿಷಿ ಸುನಕ್ ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಚುನಾಯಿತರಾಗಲು ಒಂದು ಹೆಜ್ಜೆ ಹತ್ತಿರವಾಗಿದ್ದಾರೆ.

ಔಪಚಾರಿಕವಾಗಿ ಇನ್ನೂ ತನ್ನ ಉಮೇದುವಾರಿಕೆಯನ್ನು ಘೋಷಿಸದ ಬೋರಿಸ್ ಜಾನ್ಸನ್ ಕೆಲವು ಉನ್ನತ ಮಟ್ಟದ ಕ್ಯಾಬಿನೆಟ್ ಸದಸ್ಯರನ್ನು ಒಳಗೊಂಡಂತೆ ಸುಮಾರು 59 ಟೋರಿ ಸಂಸದರ ಬೆಂಬಲವನ್ನು ಹೊಂದಿದ್ದರು. ಬ್ರಿಟನ್​ನ ಸ್ಥಳೀಯ ಕಾಲಮಾನ ಸೋಮವಾರದ ಮಧ್ಯಾಹ್ನ 2 ಗಂಟೆಯೊಳಗೆ ಅಭ್ಯರ್ಥಿಯನ್ನು ಘೋಷಿಸುವುದಾಗಿ ನಿರೀಕ್ಷಿಸಲಾಗಿದೆ. ಸೋಮವಾರ ಸಂಜೆಯೊಳಗೆ ಅವರನ್ನು ಟೋರಿ ನಾಯಕ ಮತ್ತು ಪ್ರಧಾನ ಮಂತ್ರಿ ಎಂದು ಘೋಷಿಸಲಾಗುತ್ತದೆ. ಒಂದುವೇಳೆ ಈ ರೇಸ್​ನಲ್ಲಿ ಇಬ್ಬರು ಅಭ್ಯರ್ಥಿಗಳಿದ್ದರೆ ಆನ್​ಲೈನ್ ಮತ ಚಲಾಯಿಸಲಾಗುತ್ತದೆ. ಶುಕ್ರವಾರದ ವೇಳೆಗೆ ಬ್ರಿಟನ್​ನ ನೂತನ ಪ್ರಧಾನಿಯನ್ನು ಘೋಷಿಸಲಾಗುತ್ತದೆ.

ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕೇವಲ 45 ದಿನಗಳಲ್ಲೇ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದರು. ಇದರಿಂದ ಬ್ರಿಟನ್​ನಲ್ಲಿರಾಜಕೀಯ ಕೋಲಾಹಲವೇ ಉಂಟಾಗಿತ್ತು. ಇಂಗ್ಲೆಂಡ್​ನಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಸಮಯದಲ್ಲಿ ಕನ್ಸರ್ವೇಟಿವ್ ಪಕ್ಷದ ಲಿಜ್ ಟ್ರಸ್ ಅಧಿಕಾರಕ್ಕೆ ಬಂದಿದ್ದರು. ಹೀಗಾಗಿ ಪ್ರಧಾನಿ ಪಟ್ಟದ ಜವಾಬ್ದಾರಿ ಇವರಿಗೆ ಸುಲಭದ ಹಾದಿಯಾಗಿರಲಿಲ್ಲ. ಇಂಧನ ದರಗಳ ನಿಯಂತ್ರಣ ಮತ್ತು ಆರ್ಥಿಕ ಸ್ಥಿರತೆಗೆ ಸುಧಾರಣೆಗಳನ್ನು ತಕ್ಷಣವೇ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದ ಲಿಜ್ ಟ್ರಸ್ ಅವರು ತಮ್ಮ ಪಕ್ಷದ ಸಂಸದರಲ್ಲಿ ಭರವಸೆ ಮೂಡಿಸಿದ್ದರು. ಆದರೆ, ಅವರು ಜಾರಿಗೆ ತಂದ ತೆರಿಗೆ ಕಡಿತ ನೀತಿ ದೇಶದಲ್ಲಿ ಆರ್ಥಿಕ ಕೋಲಾಹಲವನ್ನೇ ಸೃಷ್ಟಿಸಿತು. ತೆರಿಗೆ ಮತ್ತು ಇಂಧನ ಬಿಲ್‌ಗಳಲ್ಲಿ ಕಡಿತ ಮಾಡುವುದು ಇದರ ಉದ್ದೇಶವಾಗಿತ್ತು. ಇದಕ್ಕೆ ವಿರೋಧ ಪಕ್ಷಗಳು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದವು. ಭಾರೀ ಒತ್ತಡದ ನಂತರ ಆ ನೀತಿಯನ್ನು ಹಿಂಪಡೆಯಬೇಕಾಯಿತು. ಇದರಿಂದಲೇ ಲಿಜ್ ಟ್ರಸ್ ರಾಜೀನಾಮೆ ನೀಡಬೇಕಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್